Breaking; ಭಾರತದಲ್ಲಿ 2927 ಹೊಸ ಕೋವಿಡ್ ಪ್ರಕರಣ ದಾಖಲು

ನವದೆಹಲಿ, ಏಪ್ರಿಲ್ 27; ಭಾರತದಲ್ಲಿ 24 ಗಂಟೆಯಲ್ಲಿ 2,927 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಹೆಲ್ತ್ ಬುಲೆಟಿನ್ ಹೇಳಿದೆ. ಪಾಸಿಟಿವಿಟಿ ದರ ಶೇ 0.58 ಆಗಿದೆ.

ಬುಧವಾರದ ಹೆಲ್ತ್ ಬುಲೆಟಿನ್ ಪ್ರಕಾರ 24 ಗಂಟೆಯಲ್ಲಿ ದೇಶದಲ್ಲಿ 2,252 ಜನರು ಗುಣಮುಖಗೊಂಡಿದ್ದಾರೆ. ದೇಶದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 16,279 ಆಗಿದೆ. ಒಟ್ಟು ಮೃತಪಟ್ಟವರು 5,23,654 ಜನ. ದೇಶದಲ್ಲಿನ ಇದುವರೆಗೂ ಒಟ್ಟು ಗುಣಮುಖಗೊಂಡವರು 42525563.

ಮಂಗಳವಾರದ ಹೆಲ್ತ್‌ ಬುಲೆಟಿನ್ ಪ್ರಕಾರ 2,483 ಹೊಸ ಕೋವಿಡ್ ಪ್ರಕರಣ ದಾಖಲಾಗಿತ್ತು. ಇದಕ್ಕೆ ಹೋಲಿಕೆ ಮಾಡಿದರೆ ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದೆ.

India Reports 2927 Fresh Covid Cases In 24 Hours

24 ಗಂಟೆಯಲ್ಲಿ ದೇಶದಲ್ಲಿ 32 ಸೋಂಕಿತರು ಮೃತಪಟ್ಟಿದ್ದಾರೆ. ಹೊಸ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದರೂ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ, ಸಾವಿನ ಸಂಖ್ಯೆ ಕಡಿಮೆ ಇದೆ. ದೇಶದಲ್ಲಿ ಕೋವಿಡ್ 4ನೇ ಅಲೆ ಆರಂಭವಾಗಿದೆಯೇ? ಎಂಬ ಚರ್ಚೆಗಳು ಜೋರಾಗಿದೆ.

12 ಗಂಟೆಗೆ ಪ್ರಧಾನಿ ಮೋದಿ ಸಭೆ; ದೇಶದ ಕೋವಿಡ್ ಪ್ರಕರಣಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ 12 ಗಂಟೆಗೆ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.

ಹೊಸ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಹಲವು ರಾಜ್ಯಗಳು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಿವೆ. ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಲಿದೆಯೇ?.

ಮಂಗಳವಾರ ತೆಲಂಗಾಣ 30, ಮಧ್ಯ ಪ್ರದೇಶ13, ತಮಿಳುನಾಡಿನಲ್ಲಿ 72 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಮುಖ್ಯಮಂತ್ರಿಗಳ ಜೊತೆಗಿನ ಸಭೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಯಾವ ಸೂಚನೆ ನೀಡಲಿದ್ದಾರೆ ಎಂದು ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+