ಭಾರತದಲ್ಲಿ 24 ಗಂಟೆಯಲ್ಲಿ 43,846 ಹೊಸ ಕೋವಿಡ್ ಪ್ರಕರಣ ದಾಖಲು

ನವದೆಹಲಿ, ಮಾರ್ಚ್ 21: ಭಾರತದಲ್ಲಿ 24 ಗಂಟೆಯಲ್ಲಿ 43,846 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 22,956 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಭಾರತದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 1,15,99,130ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,09,087.

ಕಳೆದ 24 ಗಂಟೆಯಲ್ಲಿ 197 ಜನರು ಮೃತಪಟ್ಟಿದ್ದಾರೆ. ಒಟ್ಟು ಮೃತಪಟ್ಟವರ ಸಂಖ್ಯೆ 1,59,755ಕ್ಕೆ ಏರಿಕೆಯಾಗಿದೆ. ಇದುವರೆಗೂ ದೇಶದಲ್ಲಿ 1,11,30,288 ಜನರು ಗುಣಮುಖರಾಗಿದ್ದಾರೆ.

 India Reports 43,846 New COVID 19 Cases In Last 24 Hours

ದೇಶದಲ್ಲಿ ಮಾರ್ಚ್ 20ರ ತನಕ 23,35,65,119 ಮಾದರಿಗಳ ಕೋವಿಡ್ ಪರೀಕ್ಷೆಯನ್ನು ನಡೆಸಲಾಗಿದೆ. ಮಾರ್ಚ್ 20ರ ಶನಿವಾರ 11,33,602 ಮಾದರಿಗಳ ಪರೀಕ್ಷೆ ಮಾಡಲಾಗಿದೆ.

ಯಾವ ರಾಜ್ಯದಲ್ಲಿ ಎಷ್ಟು?: ಭಾರತದಲ್ಲಿ ಮಹಾರಾಷ್ಟ್ರ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 24,49,147. ಸಕ್ರಿಯ ಪ್ರಕರಣಗಳ ಸಂಖ್ಯೆ 1,19,006.

ಕೇರಳ ರಾಜ್ಯ 2ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 11,02,354. ಸಕ್ರಿಯ ಪ್ರಕರಣಗಳ ಸಂಖ್ಯೆ 25,008. ಕರ್ನಾಟಕ ರಾಜ್ಯ 3ನೇ ಸ್ಥಾನದಲ್ಲಿದೆ. ಒಟ್ಟು ಸೋಂಕಿತರ ಸಂಖ್ಯೆ 9,68,487. ಸಕ್ರಿಯ ಪ್ರಕರಣ 12,828.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+