• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾರತದಲ್ಲಿ 76 ಲಕ್ಷಕ್ಕೆ ಏರಿದ ಕೊರೊನಾ ಸೋಂಕಿತರ ಸಂಖ್ಯೆ

|

ನವದೆಹಲಿ, ಅಕ್ಟೋಬರ್ 21: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 76 ಲಕ್ಷಕ್ಕೆ ಏರಿಕೆಯಾಗಿದೆ.

ಇಂದು 54.044 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಒಂದೇ ದಿನದಲ್ಲಿ 717 ಮಂದಿ ಮೃತಪಟ್ಟಿದ್ದಾರೆ. 7,40,090 ಸಕ್ರಿಯ ಪ್ರಕರಣಗಳಿವೆ, 67,95,103 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 76,51,108 ಪ್ರಕರಣಗಳಿವೆ.

ಭಾರತದಲ್ಲಿ ಹೊಸ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆ

ಇದುವರೆಗೂ 1,15,914 ಮಂದಿ ಮೃತಪಟ್ಟಿದ್ದಾರೆ.ಭಾರತದಲ್ಲಿ ಕಳೆದೊಂದು ವಾರದಿಂದ ಹೊಸ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಯುತ್ತಿದೆ. ಭಾರತದಲ್ಲಿ ಮಂಗಳವಾರ 46,791 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 587 ಮಂದಿ ಮೃತಪಟ್ಟಿದ್ದರು.67,33,329 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

ಕೋವಿಡ್ ಚಿಕಿತ್ಸೆ ಪಡೆದು ಗುಣಮುಖರಾದ ರೋಗಿಗಳಿಂದ ಪ್ಲಾಸ್ಮಾ ಪಡೆದು ರೋಗಿಗಳಿಗೆ ನೀಡುವ ಮೂಲಕ ಅವರನ್ನು ಗುಣಮುಖರಾಗಿಸಬಹುದು ಎಂಬ ತರ್ಕ ವಿಫಲವಾದ ಹಿನ್ನೆಲೆಯಲ್ಲಿ ಪ್ಲಾಸ್ಮಾ ಥೆರಪಿಯನ್ನು ಸ್ಥಗಿತಗೊಳಿಸುವ ಸಾಧ್ಯತೆ ಇದೆ.

ರಾಷ್ಟ್ರೀಯ ಕೋವಿಡ್-19 ಮಾರ್ಗಸೂಚಿಯಿಂದ ಪ್ಲಾಸ್ಮಾ ಥೆರಪಿಯನ್ನು ಕೈಬಿಡಲು ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತು (ಐಸಿಎಂಆರ್) ನಿರ್ಧರಿಸಿದೆ ಎಂದು ಸಂಸ್ಥೆಯ ಪ್ರಧಾನ ನಿರ್ದೇಶಕ ಡಾ. ಬಲರಾಮ್ ಭಾರ್ಗವ ತಿಳಿಸಿದ್ದಾರೆ.

ರಾಷ್ಟ್ರೀಯ ಕಾರ್ಯಪಡೆ ಮಟ್ಟದ ಸಭೆಯಲ್ಲಿ ಪ್ಲಾಸ್ಮಾ ಥೆರಪಿ ಬಗ್ಗೆ ನಾವು ಚರ್ಚೆಗಳನ್ನು ನಡೆಸಿದ್ದೇವೆ. ಹೆಚ್ಚೂಕಡಿಮೆ ಈ ನಿರ್ಧಾರದತ್ತ ಹೆಜ್ಜೆ ಇರಿಸಿದ್ದೇವೆ. ಪ್ಲಾಸ್ಮಾ ಥೆರಪಿ ಪರಿಣಾಮಕಾರಿಯಾಗುತ್ತಿಲ್ಲ. ಇದರಿಂದ ರೋಗಿಗಳು ಗುಣಮುಖರಾಗುತ್ತಿಲ್ಲ ಎನ್ನುವುದು ಅಧ್ಯಯನದಿಂದ ಸಾಬೀತಾಗಿದೆ. ಹೀಗಾಗಿ ಪ್ಲಾಸ್ಮಾ ಥೆರಪಿಯನ್ನು ರಾಷ್ಟ್ರೀಯ ಮಾನದಂಡದಿಂದ ಕೈಬಿಡಲು ನಿರ್ಧರಿಸಿದ್ದೇವೆ' ಎಂದು ಅವರು ಹೇಳಿದ್ದಾರೆ.

   Modi ಭಾಷಣ ಹೇಗಿತ್ತು ಗೊತ್ತಾ?? | Oneindia Kannada

   English summary
   54.044 new COVID cases reported in India in last 24 hours. Country total cases 76,51,108 and active cases numbers 7,40,090 .
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X