ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 77 ಲಕ್ಷಕ್ಕೆ ಏರಿಕೆ

ನವದೆಹಲಿ, ಅಕ್ಟೋಬರ್ 22: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 77 ಲಕ್ಷಕ್ಕೆ ಏರಿಕೆಯಾಗಿದೆ. ಕಳೆದ ಒಂದು ದಿನದಲ್ಲಿ 702 ಮಂದಿ ಮೃತಪಟ್ಟಿದ್ದಾರೆ.

ಹೊಸದಾಗಿ 55,838 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 77,06,946 ಪ್ರಕರಣಗಳಿವೆ. 7,15,812 ಸಕ್ರಿಯ ಪ್ರಕರಣಗಳಿವೆ. 68,74,518 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂಡಿದ್ದಾರೆ. ಇದುವರೆಗೆ ಒಟ್ಟು 1,16,616 ಮಂದಿ ಸಾವನ್ನಪ್ಪಿದ್ದಾರೆ.

ಬುಧವಾರ 54.044 ಕೊರೊನಾ ಸೋಂಕಿತರು ಪತ್ತೆಯಾಗಿದ್ದರು, ಒಂದೇ ದಿನದಲ್ಲಿ 717 ಮಂದಿ ಮೃತಪಟ್ಟಿದ್ದಾರೆ. 7,40,090 ಸಕ್ರಿಯ ಪ್ರಕರಣಗಳಿವೆ, 67,95,103 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 76,51,108 ಪ್ರಕರಣಗಳಿವೆ.

India Reports 55,838 New COVID 19 Cases In Last 24 Hours

ಕೊರೊನಾ ವೈರಸ್ ಲಸಿಕೆಯ ಪ್ರಯೋಗಕ್ಕೆ ಒಳಗಾಗಿದ್ದ ಸ್ವಯಂ ಸೇವಕರೊಬ್ಬರು ಮೃತಪಟ್ಟಿರುವುದು ಆತಂಕ ಮೂಡಿಸಿದೆ. ಆಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯಗಳು ಅಭಿವೃದ್ಧಿಪಡಿಸಿರುವ ಕೋವಿಡ್ 19ರ ಲಸಿಕೆಯ ಪ್ರಯೋಗಕ್ಕೆ ಒಳಗಾಗಿದ್ದ ಸ್ವಯಂ ಕಾರ್ಯಕರ್ತನೊಬ್ಬ ಸಾವಿಗೀಡಾಗಿದ್ದಾನೆ ಎಂದು ಬ್ರೆಜಿಲ್‌ನ ಆರೋಗ್ಯ ಪ್ರಾಧಿಕಾರ ಅನ್ವಿಸಾ ಬುಧವಾರ ತಿಳಿಸಿದೆ.

ಈ ಬಗ್ಗೆ ತನಿಖೆ ಆರಂಭಿಸಿದ್ದು, ಅದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆದುಕೊಳ್ಳಲಾಗಿದೆ. ಆದರೆ ದೇಶದಲ್ಲಿ ಸ್ವಯಂ ಸೇವಕನೊಬ್ಬ ಮೃತಪಟ್ಟಿದ್ದರೂ ಆಸ್ಟ್ರಾಜೆನೆಕಾ ಲಸಿಕೆಯ ಪ್ರಯೋಗವನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಔಷಧ ನಿಯಂತ್ರಕ ಪ್ರಾಧಿಕಾರ ತಿಳಿಸಿದೆ. ಪ್ರಯೋಗಕ್ಕೆ ಒಳಪಟ್ಟವರ ಗೋಪ್ಯತೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಮಾಹಿತಿ ನೀಡಲಾಗುವುದಿಲ್ಲ ಎಂದು ಅದು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+