ಭಾರತದಲ್ಲಿ 24 ಗಂಟೆಯಲ್ಲಿ 61,871 ಹೊಸ ಕೋವಿಡ್ ಪ್ರಕರಣ

ಬೆಂಗಳೂರು, ಅಕ್ಟೋಬರ್ 18: ಭಾರತದಲ್ಲಿ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 74,94,551ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ 61,871 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯಂತೆ ದೇಶದಲ್ಲಿ 24 ಗಂಟೆಯಲ್ಲಿ 1033 ಜನರ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 1,14,031.

ದೇಶದಲ್ಲಿ ಇದುವರೆಗೂ 65,97,210 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. ಶನಿವಾರಕ್ಕೆ ಹೋಲಿಕೆ ಮಾಡಿದರೆ 1798 ಜನರು ಹೆಚ್ಚಾಗಿ ಡಿಸ್ಚಾರ್ಜ್ ಆಗಿದ್ದಾರೆ.

 India Reports 61,871 New COVID 19 Cases In Last 24 Hours

ಐಸಿಎಂಆರ್ ನೀಡಿದ ಮಾಹಿತಿ ಅನ್ವಯ 9,42,24,190 ಮಾದರಿಗಳ ಪರೀಕ್ಷೆಗಳನ್ನು ಅಕ್ಟೋಬರ್ 17ರ ತನಕ ನಡೆಸಲಾಗಿದೆ. ಶನಿವಾರ 9,70,173 ಮಾದರಿಗಳ ಪರೀಕ್ಷೆ ನಡೆಸಿದೆ.

ಶನಿವಾರಕ್ಕೆ ಹೋಲಿಕೆ ಮಾಡಿದರೆ ದೇಶದಲ್ಲಿ ಹೊಸ ಕೋವಿಡ್ ಪ್ರಕರಣ 341 ಕಡಿಮೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2335 ಕಡಿಮೆಯಾಗಿದೆ. ಸಾವಿನ ಸಂಖ್ಯೆ 196 ಅಧಿಕವಾಗಿದೆ.

ಭಾರತದಲ್ಲಿ ಅತಿ ಹೆಚ್ಚು ಕೋವಿಡ್ ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ. ಶನಿವಾರ ರಾಜ್ಯದಲ್ಲಿ 10,259 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 10,259.

ಆಂಧ್ರ ಪ್ರದೇಶ ರಾಜ್ಯ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಶನಿವಾರ 3676 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 7,79,146.

ಕರ್ನಾಟಕ ರಾಜ್ಯ ದೇಶದಲ್ಲಿ 3ನೇ ಸ್ಥಾನದಲ್ಲಿದೆ. ಶನಿವಾರ ರಾಜ್ಯದಲ್ಲಿ 7184 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 7,58,574.

ತಮಿಳುನಾಡು ರಾಜ್ಯ 4ನೇ ಸ್ಥಾನದಲ್ಲಿದೆ. ಶನಿವಾರ ರಾಜ್ಯದಲ್ಲಿ 4,295 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 6,83,486.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+