ಭಾರತದಲ್ಲಿ 24 ಗಂಟೆಯಲ್ಲಿ 61,267 ಹೊಸ ಕೋವಿಡ್ ಪ್ರಕರಣ
ನವದೆಹಲಿ, ಅಕ್ಟೋಬರ್ 06: ಭಾರತದಲ್ಲಿ 24 ಗಂಟೆಯಲ್ಲಿ 61,267 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 66,85,083ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯಂತೆ ದೇಶದಲ್ಲಿ 24 ಗಂಟೆಯಲ್ಲಿ 884 ಜನರು ಮೃತಪಟ್ಟಿದ್ದಾರೆ. ಒಟ್ಟು ಮೃತಪಟ್ಟವರ ಸಂಖ್ಯೆ 1,03,569. ಇದುವರೆಗೂ 56,62,491 ಜನರು ಗುಣಮುಖರಾಗಿದ್ದಾರೆ.

ದೇಶದಲ್ಲಿ 10,89,403 ಮಾದರಿಗಳ ಪರೀಕ್ಷೆಗಳನ್ನು ಅಕ್ಟೋಬರ್ 5ರ ತನಕ ಮಾಡಲಾಗಿದೆ. ಸೋಮವಾರ 8,10,71,797 ಮಾದರಿಗಳ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ. ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 9,19,023.
ಭಾನುವಾರ ಭಾರತದಲ್ಲಿ 74,442 ಹೊಸ ಪ್ರಕರಣಗಳು ದಾಖಲಾಗಿದ್ದವು. ಮಂಗಳವಾರದ ಮಾಹಿತಿ ಅನ್ವಯ ದೇಶದಲ್ಲಿ ಹೊಸ ಸೋಂಕಿತರ ಪ್ರಕರಣಗಳು ಕಡಿಮೆಯಾಗುತ್ತಿವೆ. ವಿಶ್ವದಲ್ಲಿ ಕೋವಿಡ್ ಸೋಂಕಿತರು ಹೆಚ್ಚಿರುವ ದೇಶಗಳಲ್ಲಿ ಭಾರತ 2ನೇ ಸ್ಥಾನದಲ್ಲಿದೆ.
ಭಾರತದಲ್ಲಿ ಕೋವಿಡ್ ಸೋಂಕಿತರು ಹೆಚ್ಚು ಇರುವ ರಾಜ್ಯ ಮಹಾರಾಷ್ಟ್ರ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 14,53,653. ಸಕ್ರಿಯ ಪ್ರಕರಣಗಳ ಸಂಖ್ಯೆ 2,52,277.
ಉಳಿದಂತೆ ಆಂಧ್ರ ಪ್ರದೇಶ 7,23,512, ಕರ್ನಾಟಕ 6,47,712, ತಮಿಳುನಾಡು 6,25,391 ಸೋಂಕಿತರು ಇದ್ದಾರೆ. ಸೋಮವಾರ ಕರ್ನಾಟಕದಲ್ಲಿ 7051 ಹೊಸ ಪ್ರಕರಣಗಳು ದಾಖಲಾಗಿವೆ.












Click it and Unblock the Notifications