ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ 24 ಗಂಟೆಯಲ್ಲಿ 61,267 ಹೊಸ ಕೋವಿಡ್ ಪ್ರಕರಣ

|
Google Oneindia Kannada News

ನವದೆಹಲಿ, ಅಕ್ಟೋಬರ್ 06: ಭಾರತದಲ್ಲಿ 24 ಗಂಟೆಯಲ್ಲಿ 61,267 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 66,85,083ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯಂತೆ ದೇಶದಲ್ಲಿ 24 ಗಂಟೆಯಲ್ಲಿ 884 ಜನರು ಮೃತಪಟ್ಟಿದ್ದಾರೆ. ಒಟ್ಟು ಮೃತಪಟ್ಟವರ ಸಂಖ್ಯೆ 1,03,569. ಇದುವರೆಗೂ 56,62,491 ಜನರು ಗುಣಮುಖರಾಗಿದ್ದಾರೆ.

ಕರ್ನಾಟಕ; 7 ದಿನದಲ್ಲಿ 65,185 ಹೊಸ ಕೋವಿಡ್ ಪ್ರಕರಣ ದಾಖಲು! ಕರ್ನಾಟಕ; 7 ದಿನದಲ್ಲಿ 65,185 ಹೊಸ ಕೋವಿಡ್ ಪ್ರಕರಣ ದಾಖಲು!

India reports 61,267 New COVID 19 Cases In 24 Hours

ದೇಶದಲ್ಲಿ 10,89,403 ಮಾದರಿಗಳ ಪರೀಕ್ಷೆಗಳನ್ನು ಅಕ್ಟೋಬರ್ 5ರ ತನಕ ಮಾಡಲಾಗಿದೆ. ಸೋಮವಾರ 8,10,71,797 ಮಾದರಿಗಳ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ. ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 9,19,023.

ಮಾರಕವಾಗಬಹುದು ಕೋವಿಡ್ ಸ್ವ್ಯಾಬ್ ಟೆಸ್ಟ್: ಇರಲಿ ಈ ಎಚ್ಚರಿಕೆಮಾರಕವಾಗಬಹುದು ಕೋವಿಡ್ ಸ್ವ್ಯಾಬ್ ಟೆಸ್ಟ್: ಇರಲಿ ಈ ಎಚ್ಚರಿಕೆ

ಭಾನುವಾರ ಭಾರತದಲ್ಲಿ 74,442 ಹೊಸ ಪ್ರಕರಣಗಳು ದಾಖಲಾಗಿದ್ದವು. ಮಂಗಳವಾರದ ಮಾಹಿತಿ ಅನ್ವಯ ದೇಶದಲ್ಲಿ ಹೊಸ ಸೋಂಕಿತರ ಪ್ರಕರಣಗಳು ಕಡಿಮೆಯಾಗುತ್ತಿವೆ. ವಿಶ್ವದಲ್ಲಿ ಕೋವಿಡ್ ಸೋಂಕಿತರು ಹೆಚ್ಚಿರುವ ದೇಶಗಳಲ್ಲಿ ಭಾರತ 2ನೇ ಸ್ಥಾನದಲ್ಲಿದೆ.

ಚೆನ್ನೈನಲ್ಲಿ ಏಕಾಏಕಿ ಏರಿದ ಕೊರೊನಾ ಸೋಂಕಿತರ ಸಂಖ್ಯೆ ಚೆನ್ನೈನಲ್ಲಿ ಏಕಾಏಕಿ ಏರಿದ ಕೊರೊನಾ ಸೋಂಕಿತರ ಸಂಖ್ಯೆ

ಭಾರತದಲ್ಲಿ ಕೋವಿಡ್ ಸೋಂಕಿತರು ಹೆಚ್ಚು ಇರುವ ರಾಜ್ಯ ಮಹಾರಾಷ್ಟ್ರ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 14,53,653. ಸಕ್ರಿಯ ಪ್ರಕರಣಗಳ ಸಂಖ್ಯೆ 2,52,277.

ಉಳಿದಂತೆ ಆಂಧ್ರ ಪ್ರದೇಶ 7,23,512, ಕರ್ನಾಟಕ 6,47,712, ತಮಿಳುನಾಡು 6,25,391 ಸೋಂಕಿತರು ಇದ್ದಾರೆ. ಸೋಮವಾರ ಕರ್ನಾಟಕದಲ್ಲಿ 7051 ಹೊಸ ಪ್ರಕರಣಗಳು ದಾಖಲಾಗಿವೆ.

English summary
61,267 new COVID cases reported in India in 24 hours. Total case tally stands at 66,85,083 including 9,19,023 active cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X