• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾರತದಲ್ಲಿ 96,982 ಹೊಸ ಕೊರೊನಾ ಪ್ರಕರಣಗಳು ಪತ್ತೆ

|

ನವದೆಹಲಿ, ಏಪ್ರಿಲ್ 6: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 96,982 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಭಾನುವಾರ ಕೊರೊನಾ ಪ್ರಕರಣಗಳು ಲಕ್ಷ ಮೀರಿದ್ದು, ಸೋಮವಾರ ಈ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದೆ.

ಏಪ್ರಿಲ್ 5ರಂದು ದೇಶದಲ್ಲಿ ಕೊರೊನಾ ಸೋಂಕಿನಿಂದ ಒಟ್ಟು 446 ಮಂದಿ ಸಾವನ್ನಪ್ಪಿದ್ದಾರೆ. ಸೋಮವಾರ 50,143 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 1,17,32,279 ಆಗಿದೆ.

ಭಾರತದಲ್ಲಿ ಮತ್ತೆ ಲಕ್ಷ ದಾಟಿದ ಕೊರೊನಾ ಪ್ರಕರಣ; 1,03,558 ಹೊಸ ಪ್ರಕರಣ ದಾಖಲು

ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್‌ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದೆ. ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1,26,86,049ಗೆ ತಲುಪಿದೆ. ಸದ್ಯಕ್ಕೆ ದೇಶದಲ್ಲಿ 7,88,223 ಸಕ್ರಿಯ ಪ್ರಕರಣಗಳಿವೆ.

ಕಳೆದ 24 ಗಂಟೆಯಲ್ಲಿ 446 ಮಂದಿ ಸಾವನ್ನಪ್ಪಿದ್ದು, ಇದುವರೆಗೂ ಒಟ್ಟು 1,65,547 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಏಪ್ರಿಲ್ 5ರವರೆಗೆ 8,31,10,926 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.

ಕರ್ನಾಟಕದ ಕೊರೊನಾ ಪ್ರಕರಣ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸೋಮವಾರ ಬರೋಬ್ಬರಿ 5279 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಇದರೊಂದಿಗೆ ಸೋಂಕಿತರ ಸಂಖ್ಯೆ 10,20,434ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 32 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,657ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

English summary
India reports 96982 new coronavirus cases in last 24 hours. 446 people dies by infection
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X