ಭಾರತದಲ್ಲಿ 6 ಮಂದಿಯಲ್ಲಿ ರೂಪಾಂತರಿತ ಕೊರೊನಾ ವೈರಸ್ ಪತ್ತೆ

ನವದೆಹಲಿ, ಡಿಸೆಂಬರ್ 29: ಭಾರತದಲ್ಲಿ ಆರು ಮಂದಿಯಲ್ಲಿ ರೂಪಾಂತರಿತ ಕೊರೊನಾವೈರಸ್ ಪತ್ತೆಯಾಗಿದೆ.

ಬ್ರಿಟನ್‌ನಿಂದ ಭಾರತಕ್ಕೆ ಆಗಮಿಸಿದ್ದ ಆರು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಹೇಳಲಾಗಿದೆ.

India reports six cases of mutant strain of coronavirus, UK Returnees Test Positive

ಈ ರೂಪಾಂತರಿತ ಕೊರೊನಾ ವೈರಸ್ ಶೇ.70ರಷ್ಟು ಹೆಚ್ಚು ಸಾಂಕ್ರಾಮಿಕ ಎಂದು ಹೇಳಲಾಗಿದೆ. ಇದು ಬ್ರಿಟನ್‌ನಲ್ಲಿ ಮೊದಲು ವರದಿಯಾಗಿದೆ.

ಒಟ್ಟು ಕೊರೊನಾ ಸೋಂಕಿತರ ಪೈಕಿ ಮೂವರು ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಇಬ್ಬರು ಹೈದರಾಬಾದಿನ ಸಿಸಿಎಂಪಿಯಲ್ಲಿದ್ದಾರೆ, ಒಬ್ಬರು ಎನ್‌ಐವಿ ಪುಣೆಯಲ್ಲಿದ್ದಾರೆ.

ಈ ಎಲ್ಲಾ ಆರು ರೋಗಿಗಳು ಇತ್ತೀಚೆಗಷ್ಟೇ ಬ್ರಿಟನ್‌ನಿಂದ ಭಾರತಕ್ಕೆ ಮರಳಿದವರಾಗಿದ್ದಾರೆ.ದೇಶದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ ನಿರಂತರವಾಗಿ ಇಳಿಕೆಯಾಗುತ್ತಿದ್ದರೂ ಜಾಗತಿಕವಾಗಿ ಪ್ರಕರಣಗಳ ಸಂಖ್ಯೆ ಹೆಚ್ಚಳ ಮತ್ತು ಬ್ರಿಟನ್ ನಲ್ಲಿ ಹೊರ ರೂಪಾಂತರಿ ಕೊರೊನಾ ಪತ್ತೆಯಾಗಿರುವುದನ್ನು ಗಮನದಲ್ಲಿಟ್ಟುಕೊಂಡು ಕಣ್ಗಾವಲು, ನಿಯಂತ್ರಣ ಮತ್ತು ಎಚ್ಚರಿಕೆ ವಹಿಸುವ ಅವಶ್ಯಕತೆಯಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ರೂಪಾಂತರಿ ಕೊರೋನಾ ಕಣ್ಗಾವಲುಗಾಗಿ ಕೇಂದ್ರ ಗೃಹ ಸಚಿವಾಲಯ ಇಂದು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಈ ಮಾರ್ಗಸೂಚಿಗಳು ಜನವರಿ 31 ರವರೆಗೆ ಜಾರಿಯಲ್ಲಿರುತ್ತವೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಅಂತೆಯೇ, ಕಂಟೈನ್ ಮೆಂಟ್ ಜೋನ್ ಗಳಲ್ಲಿ ನಿಗದಿತ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತದೆ ಮತ್ತು ವಿವಿಧ ಅನುಮತಿ ನೀಡಿದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸೂಚಿಸಲಾದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿಗಳು) ಪಾಲಿಸಬೇಕು ಎಂದು ಗೃಹ ಸಚಿವಾಲಯ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+