ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2020-21ರಲ್ಲಿ ಭಾರತದ ವಿಮಾನಯಾನ ಸಂಸ್ಥೆಗಳಿಗೆ 19,564 ಕೋಟಿ ರೂ. ನಷ್ಟ: ಕೇಂದ್ರ

|
Google Oneindia Kannada News

ನವದೆಹಲಿ, ಡಿಸೆಂಬರ್‌ 07: ದೇಶದಲ್ಲಿ ಕಳೆದ ವರ್ಷ ಕೊರೊನಾ ವೈರಸ್‌ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಿಂದಾಗಿ ಲಾಕ್‌ಡೌನ್‌ ಮಾಡಲಾಗಿತ್ತು, ಹಾಗೆಯೇ ಈ ಸಂದರ್ಭದಲ್ಲಿ ವಿಮಾನಯಾನವನ್ನು ರದ್ದು ಮಾಡಲಾಗಿದೆ. ಈ ಕಾರಣದಿಂದಾಗಿ ಭಾರತದ ವಿಮಾನಯಾನ ಸಂಸ್ಥೆಗಳಿಗೆ ಭಾರೀ ನಷ್ಟ ಉಂಟಾಗಿದೆ ಎಂದು ಕೇಂದ್ರ ಸರ್ಕಾರವು ಹೇಳಿದೆ.

ಸೋಮವಾರ ರಾಜ್ಯಸಭೆಯಲ್ಲಿ ಮಾತನಾಡಿದ ನಾಗರಿಕ ವಿಮಾನಯಾನ ರಾಜ್ಯ ಸಚಿವ ವಿ ಕೆ ಸಿಂಗ್, "2020-21ರಲ್ಲಿ ಭಾರತದ ವಿಮಾನಯಾನ ಸಂಸ್ಥೆಗಳು ಮತ್ತು ವಿಮಾನ ನಿಲ್ದಾಣಗಳು ಭಾರೀ ನಷ್ಟ ಅನುಭವಿಸಿದೆ. ಭಾರತದ ವಿಮಾನಯಾನ ಸಂಸ್ಥೆಗಳಿಗೆ 19,564 ಕೋಟಿ ನಷ್ಟ ಉಂಟಾಗಿದ್ದರೆ, ಭಾರತದ ವಿಮಾನ ನಿಲ್ದಾಣಗಳಿಗೆ 5,116 ಕೋಟಿ ರೂಪಾಯಿ ನಷ್ಟ ಉಂಟಾಗಿದೆ," ಎಂದು ವಿವರಿಸಿದ್ದಾರೆ.

ಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ಭಾರತ ಅಸ್ತು: 14 ದೇಶಗಳಿಗೆ ನಿರ್ಬಂಧಅಂತಾರಾಷ್ಟ್ರೀಯ ವಿಮಾನ ಸಂಚಾರಕ್ಕೆ ಭಾರತ ಅಸ್ತು: 14 ದೇಶಗಳಿಗೆ ನಿರ್ಬಂಧ

ವಿಶ್ವದಲ್ಲಿ ಕೊರೊನಾ ವೈರಸ್‌ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಭಾರತದಲ್ಲಿ ಮಾರ್ಚ್ 25, 2020 ರಿಂದ ಮೇ 24, 2020 ರವರೆಗೆ ನಿಗದಿತ ದೇಶೀಯ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ. ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಲಿಖಿತ ರೂಪದಲ್ಲಿ ಪ್ರತಿಕ್ರಿಯೆ ನೀಡಿದ ನಾಗರಿಕ ವಿಮಾನಯಾನ ರಾಜ್ಯ ಸಚಿವ ವಿ ಕೆ ಸಿಂಗ್, "ಕೊರೊನಾ ವೈರಸ್‌ ಸಾಂಕ್ರಾಮಿಕದಿಂದಾಗಿ ಉಂಟಾದ ಅಡಚಣೆಯು ಭಾರತದಲ್ಲಿ ವಾಯುಯಾನ ಕ್ಷೇತ್ರದಲ್ಲಿ ಭಾರೀ ದುಷ್ಪರಿಣಾಮವನ್ನು ಬೀರಿದೆ," ಎಂದು ತಿಳಿಸಿದರು.

 Indias airlines incurred loss of Rs 19,564 crore in 2020-21 Says Government

ಕಳೆದ ವರ್ಷ ಕೊರೊನಾ ವೈರಸ್‌ ಸೋಂಕು ಕಾರಣದಿಂದಾಗಿ ಲಾಕ್‌ಡೌನ್ ಆದ ಸಂದರ್ಭದಲ್ಲಿ ದೇಶದಲ್ಲಿ ನಿಷೇಧ ಮಾಡಲಾಗಿದ್ದ ಅಂತಾರಾಷ್ಟ್ರೀಯ ವಿಮಾನವನ್ನು ಡಿಸೆಂಬರ್‌ 15 ರಿಂದ ಮತ್ತೆ ಆರಂಭ ಮಾಡಲಾಗುವುದು ಎಂದು ಕೇಂದ್ರ ಸರ್ಕಾರವು ಈ ಹಿಂದೆ ತಿಳಿಸಿದ್ದವು. ಆದರೆ ಹೊಸ ಕೋವಿಡ್ ರೂಪಾಂತರದ ಹಿನ್ನೆಲೆಯಿಂದಾಗಿ 14 ದೇಶಗಳಿಗೆ ಈಗಲೂ ನಿರ್ಬಂಧವನ್ನು ವಿಧಿಸಿತ್ತು. ಇದಕ್ಕೂ ಮುನ್ನವೇ ಈ ವರ್ಷ ಕೊನೆಯಾಗುವಷ್ಟರಲ್ಲಿ ಅಂತಾರಾಷ್ಟ್ರೀಯ ವಿಮಾನಯಾನ ಸಹಜ ಸ್ಥಿತಿಗೆ ಮರಳುವ ನಿರೀಕ್ಷೆ ಇದೆ ಎಂದು ಕೇಂದ್ರ ವಾಯುಯಾನ ಸಚಿವಾಲಯ ಕಾರ್ಯದರ್ಶಿ ರಾಜೀವ್‌ ಬನ್ಸಾಲ್‌ ಹೇಳಿದ್ದರು. ಯುಕೆ, ಫ್ರಾನ್ಸ್‌, ಜರ್ಮನಿ, ನೆದರ್‌ಲ್ಯಾಂಡ್‌, ಫಿನ್‌ಲ್ಯಾಂಡ್‌, ದಕ್ಷಿಣ ಆಫ್ರಿಕಾ, ಬ್ರೆಜಿಲ್‌, ಚೀನಾ, ಮಾರಿಷಸ್, ನ್ಯೂಜಿಲ್ಯಾಂಡ್‌, ಸಿಂಗಾಪುರ, ಬಾಂಗ್ಲಾದೇಶ, ಬೋಟ್ಸ್ವಾನ, ಜಿಂಬಾವೆ ಸೇರಿದಂತೆ ಒಟ್ಟು 14 ದೇಶಗಳಿಗೆ ನಿರ್ಬಂಧ ವಿಧಿಸಲಾಗುತ್ತದೆ ಎಂದು ಸರ್ಕಾರ ಹೇಳಿತ್ತು.

ಡಿ.15ರಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರವಿಲ್ಲ ಡಿ.15ರಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರವಿಲ್ಲ

ಆರಂಭ ಆಗಲಿದ್ದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಮತ್ತೆ ರದ್ದು

ಓಮಿಕ್ರಾನ್‌ ರೂಪಾಂತರ ಏರಿಕೆ ಕಾಣುತ್ತಿದ್ದಂತೆ ಆರಂಭ ಆಗಲಿದ್ದ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ಮತ್ತೆ ರದ್ದು ಮಾಡಲಾಗಿದೆ. ಕೋವಿಡ್ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಮೇಲೆ ನಿರ್ಬಂಧ ಹೇರಲಾಗಿತ್ತು. ಡಿಸೆಂಬರ್ 15ರಿಂದ ವಿಮಾನಗಳ ಸಂಚಾರವನ್ನು ಪುನಃ ಆರಂಭಿಸುವುದಾಗಿ ಘೋಷಣೆ ಮಾಡಲಾಗಿತ್ತು. ಆದರೆ ಓಮಿಕ್ರಾನ್ ಭೀತಿ ಇದಕ್ಕೆ ತಡೆ ಹಾಕಿದೆ. ಈಗ ಓಮಿಕ್ರಾನ್ ಭೀತಿ ಹಿನ್ನಲೆಯಲ್ಲಿ ಡಿಸೆಂಬರ್ 15ರಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅವಕಾಶ ನೀಡುತ್ತಿಲ್ಲ. ಡಿಸೆಂಬರ್ ಅಂತ್ಯದ ತನಕ ಅಂತಾರಾಷ್ಟ್ರೀಯ ವಿಮಾನಗಳ ಮೇಲಿನ ನಿರ್ಬಂಧ ಮುಂದುವರೆಯುವ ಸಾಧ್ಯತೆ ಇದೆ. ವಿದೇಶಿ ವಿಮಾನಗಳ ನಿಷೇಧ ಮುಂದುವರೆಯಲಿದೆ. "ಜಾಗತಿಕ ಸನ್ನಿವೇಶದ ದೃಷ್ಟಿಯಿಂದ ಎಲ್ಲಾ ಪಾಲುದಾರರೊಂದಿಗೆ ಸಮಾಲೋಚಿಸಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಅಂತರರಾಷ್ಟ್ರೀಯ ವಿಮಾನ ಸೇವೆಗಳ ಪುನರಾರಂಭದ ದಿನಾಂಕವನ್ನು ಸೂಕ್ತ ಸಮಯದಲ್ಲಿ ತಿಳಿಸಲಾಗುವುದು" ಎಂದು ವಿಮಾನಯಾನ ನಿರ್ದೇಶನಾಲಯ ಹೇಳಿದೆ.

ವಿಶ್ವದಲ್ಲಿ ಓಮಿಕ್ರಾನ್‌ ಹೇಗಿದೆ?

ದಕ್ಷಿಣ ಆಫ್ರಿಕಾದಲ್ಲಿ ಮೊದಲು ಕಾಣಿಸಿಕೊಂಡ ಹೊಸ ರೂಪಾಂತರಿ ಓಮಿಕ್ರಾನ್ ಜಗತ್ತಿನ 52 ರಾಷ್ಟ್ರಗಳಿಗೆ ಹರಡಿದೆ. ಇಂಗ್ಲೆಂಡಿನಲ್ಲಿ ಅತಿಹೆಚ್ಚು ಓಮಿಕ್ರಾನ್ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ದಕ್ಷಿಣ ಆಫ್ರಿಕಾ ಎರಡನೇ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ಭಾರತದಲ್ಲಿ ಹೊಸ ರೂಪಾಂತರ ಓಮಿಕ್ರಾನ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಐದರಿಂದ 21ಕ್ಕೆ ಏರಿಕೆಯಾಗಿದೆ. ರಾಜಸ್ಥಾನದಲ್ಲಿ 9, ಮಹಾರಾಷ್ಟ್ರ 8, ಕರ್ನಾಟಕ 2, ಗುಜರಾತ್ ಮತ್ತು ದೆಹಲಿಯಲ್ಲಿ ತಲಾ ಒಂದು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಯುಕೆ 246, ದಕ್ಷಿಣ ಆಫ್ರಿಕಾ 228, ಜಿಂಬಾಬ್ವೆ 50, ಯುಎಸ್ 40, ಘಾನ 33, ಡೆನ್ಮಾರ್ಕ್ 32, ಪೋರ್ಚುಗಲ್ 28 ಓಮಿಕ್ರಾನ್‌ ಪ್ರಕರಣಗಳು ದಾಖಲು ಆಗಿದೆ. ಭಾರತವು 13 ನೇ ಸ್ಥಾನದಲ್ಲಿ ಇದೆ.

English summary
India's airlines incurred loss of Rs 19,564 crore in 2020-21 Says Government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X