• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕಹಿಸುದ್ದಿ: ಭಾರತದಲ್ಲಿ 20 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಕೊರೊನಾವೈರಸ್!

|

ನವದೆಹಲಿ, ಆಗಸ್ಟ್.06: ವಿಶ್ವದಲ್ಲೇ ಅತಿಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಎರಡನೇ ರಾಷ್ಟ್ರ ಎನಿಸಿರುವ ಭಾರತದಲ್ಲಿ ಪ್ರತಿನಿತ್ಯ ಕೊರೊನಾವೈರಸ್ ಸೋಂಕಿನ ಅಟ್ಟಹಾಸ ಮಿತಿ ಮೀರುತ್ತಿದೆ. ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 20 ಲಕ್ಷದ ಗಡಿ ದಾಟಿದೆ.

ಗುರುವಾರದ ಅಂಕಿ-ಅಂಶಗಳ ಪ್ರಕಾರ ದೇಶದಲ್ಲಿ ಒಂದೇ ದಿನ ಬರೋಬ್ಬರಿ 58168 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿರುವುದು ಖಾತ್ರಿಯಾಗಿದೆ. 888 ಸೋಂಕಿತರು ಮಹಾಮಾರಿಯನ್ನು ಎದುರಿಸಲು ಆಗದೇ ಸಾವಿನ ಮನೆ ಸೇರಿದ್ದಾರೆ.

ಟಾಪ್-5 ರಾಷ್ಟ್ರ: ಅತಿಹೆಚ್ಚು ತಪಾಸಣೆ ನಡೆಸಿದ್ದಲ್ಲೇ ಕೊವಿಡ್-19 ಕಡಿವಾಣ!

ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 20,21,407ಕ್ಕೆ ಏರಿಕೆಯಾಗಿದ್ದರೆ, ಕೊವಿಡ್-19 ಕೂಪದಲ್ಲಿ ಬಿದ್ದ ಪ್ರಾಣ ಬಿಟ್ಟವರ ಸಂಖ್ಯೆ 41627ಕ್ಕೆ ಏರಿಕೆಯಾಗಿದೆ. ಗುಣಮುಖರಾಗುತ್ತಿರುವ ಪ್ರಕರಣಗಳ ಸಂಖ್ಯೆಯಲ್ಲೂ ಏರಿಕೆಯಾಗುತ್ತಿರುವುದು ಕೊಂಚ ನೆಮ್ಮದಿ ತಂದಿದೆ.

ದೇಶದಲ್ಲಿ ಈವರೆಗೂ 13 ಲಕ್ಷ ಸೋಂಕಿತರು ಡಿಸ್ಚಾರ್ಜ್

ದೇಶದಲ್ಲಿ ಈವರೆಗೂ 13 ಲಕ್ಷ ಸೋಂಕಿತರು ಡಿಸ್ಚಾರ್ಜ್

ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 20,21,407ಕ್ಕೆ ಏರಿಕೆಯಾಗಿದ್ದರೆ ಇದರ ನಡುವೆ ಗುಣಮುಖರ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲೇ 48044 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 13,74420 ಸೋಂಕಿತರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದಾಗಿ ದೇಶದಲ್ಲಿ 6,05,360 ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.

ಮಹಾರಾಷ್ಟ್ರದಲ್ಲಿ ಒಂದೇ ದಿನ 11 ಸಾವಿರ ಮಂದಿಗೆ ಸೋಂಕು

ಮಹಾರಾಷ್ಟ್ರದಲ್ಲಿ ಒಂದೇ ದಿನ 11 ಸಾವಿರ ಮಂದಿಗೆ ಸೋಂಕು

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 11514 ಮಂದಿಗೆ ಕೊರೊನಾವೈರಸ್ ಸೋಂಕು ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆಯು ಈಗಾಗಲೇ 479779ಕ್ಕೆ ಏರಿಕೆಯಾಗಿದೆ. ಒಟ್ಟು 479779 ಸೋಂಕಿತ ಪ್ರಕರಣಗಳ ಪೈಕಿ 3,16,375 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಂದೇ ದಿನ 316 ಮಂದಿ ಮಹಾಮಾರಿ ಸುಳಿಗೆ ಸಿಕ್ಕು ಉಸಿರು ಚೆಲ್ಲಿದ್ದಾರೆ. ರಾಜ್ಯದಲ್ಲಿ ಇದುವರೆಗೂ 16792 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ 1,46,305 ಸಕ್ರಿಯ ಪ್ರಕರಣಗಳಿವೆ.

ಭಾರತದಲ್ಲಿ ಕೊರೊನಾವೈರಸ್ ಹೆಚ್ಚಾಗುವುದರ ಹಿಂದಿನ ಕಾರಣ!

ಆಂಧ್ರ ಪ್ರದೇಶದಲ್ಲಿ ಅಟ್ಟಹಾಸ ಮೆರೆದ ಕೊವಿಡ್-19

ಆಂಧ್ರ ಪ್ರದೇಶದಲ್ಲಿ ಅಟ್ಟಹಾಸ ಮೆರೆದ ಕೊವಿಡ್-19

24 ಗಂಟೆಗಳಲ್ಲೇ ಆಂಧ್ರ ಪ್ರದೇಶದಲ್ಲಿ 10328 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು 196789ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 196789 ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಒಂದೇ ದಿನ 8,516 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 1,12,870 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಹೆಲ್ತ್ ಬುಲೆಟಿನ್ ಅಂಕಿ-ಅಂಶಗಳಲ್ಲಿ ತಿಳಿದು ಬಂದಿದೆ. ಆಂಧ್ರ ಪ್ರದೇಶದಲ್ಲಿ ಒಂದೇ ದಿನ 72 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರಿಂದ ಸಾವಿನ ಸಂಖ್ಯೆ 1,753ಕ್ಕೆ ಏರಿಕೆಯಾಗಿದೆ. 82,166 ಸೋಂಕಿತರಿಗೆ ನಿಗದಿತ ಕೊವಿಡ್-19 ಆಸ್ಪತ್ರೆಗಳಲ್ಲಿ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಕರ್ನಾಟಕಕ್ಕೂ ತಪ್ಪುತ್ತಿಲ್ಲ ಕೊವಿಡ್-19 ಮಹಾಮಾರಿಯ ಕಾಟ

ಕರ್ನಾಟಕಕ್ಕೂ ತಪ್ಪುತ್ತಿಲ್ಲ ಕೊವಿಡ್-19 ಮಹಾಮಾರಿಯ ಕಾಟ

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅತಿಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲೇ 6805 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 158254ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಂದೇ ದಿನ ಮಹಾಮಾರಿಗೆ 93 ಮಂದಿ ಪ್ರಾಣ ಬಿಟ್ಟಿದ್ದು, ಕೊವಿಡ್-19ಗೆ ಬಲಿಯಾದವರ ಸಂಖ್ಯೆಯು 2897ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 5602 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 80281 ಮಂದಿ ಸೋಂಕಿತರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ ರಾಜ್ಯದಲ್ಲಿ 75068 ಸಕ್ರಿಯ ಪ್ರಕರಣಗಳಿವೆ.

English summary
India's Coronavirus Cases Rises Crosses 20 Lakh-Mark. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X