ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಪ್ರತಿನಿತ್ಯ 12 ಲಕ್ಷ ಜನರಿಗೆ ಕೊವಿಡ್-19 ತಪಾಸಣೆ

|
Google Oneindia Kannada News

ನವದೆಹಲಿ, ಸಪ್ಟೆಂಬರ್.23: ವಿಶ್ವದಲ್ಲೇ ಅತಿಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಎರಡನೇ ರಾಷ್ಟ್ರವಾಗಿರುವ ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ತಪಾಸಣೆ ವೇಗವನ್ನು ಹೆಚ್ಚಿಸುವ ಅನಿವಾರ್ಯತೆಯನ್ನು ಸರ್ಕಾರವು ಅರಿತುಕೊಂಡಿದೆ.

ಪ್ರತಿನಿತ್ಯ 12 ಲಕ್ಷ ಜನರಿಗೆ ಕೊರೊನಾವೈರಸ್ ಸೋಂಕಿತ ಪರೀಕ್ಷೆ ನಡೆಸುವ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಗುರಿಯನ್ನು ಇಟ್ಟುಕೊಂಡಿದೆ. ಕಳೆದ 24 ಗಂಟೆಗಳಲ್ಲೇ 9,33,185 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ.

ಕೊರೊನಾವೈರಸ್ ಪತ್ತೆಗೆ 'ಫೆಲುಡಾ' ಪರೀಕ್ಷೆ: 500 ರೂ. ಮಾತ್ರ!ಕೊರೊನಾವೈರಸ್ ಪತ್ತೆಗೆ 'ಫೆಲುಡಾ' ಪರೀಕ್ಷೆ: 500 ರೂ. ಮಾತ್ರ!

ಭಾರತದ ಕೇಂದ್ರಾಡಳಿತ ಪ್ರದೇಶ ಮತ್ತು ರಾಜ್ಯಗಳಲ್ಲಿ ಇದುವರೆಗೂ 6,53,25,779 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

Indias Coronavirus Testing Capacity Surges To Over 12 Lakh Daily Tests: Health Ministry

ದೇಶದಲ್ಲಿ ಕೊವಿಡ್-19 ಅಂಕಿಅಂಶಗಳು:

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಈಗಾಗಲೇ 55 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 75083 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕಳೆದ ಸೋಮವಾರ ಬೆಳಗ್ಗೆ 10 ಗಂಟೆಯಿಂದ ಮಂಗಳವಾರ ಬೆಳಗ್ಗೆ 10 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 1053 ಜನರು ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 88935ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 55, 62,664ಕ್ಕೆ ಏರಿಕೆಯಾಗಿದೆ. ಈ ಪೈಕಿ 44,97,868 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 975861 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Recommended Video

ಹಿಂಗ್ ಮಾಡಿದ್ರೆ ಕಳೆದು ಹೋಗಿರೊ ಫೋನ್ ಸಿಗತ್ತೆ | Oneindia Kannada

English summary
India's Coronavirus Testing Capacity Surges To Over 12 Lakh Daily Tests: Health Ministry.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X