ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

29 ಲಕ್ಷದ ಗಡಿ ದಾಟಿದ ದೇಶದ ಕೊರೊನಾ ಸೋಂಕಿತರ ಸಂಖ್ಯೆ

|
Google Oneindia Kannada News

ನವದೆಹಲಿ, ಆಗಸ್ಟ್ 22: ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 29 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 68,898 ಹೊಸ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಅಭಿವೃದ್ಧಿ ಸಚಿವಾಲಯ ಶುಕ್ರವಾರ ತಿಳಿಸಿದೆ.

Recommended Video

ಮೈದಾನದ ಮೂಲೆ ಮೂಲೆಗೂ ಸಿಕ್ಸರ್ ಸಿಡಿಸಿದ Dhoni | Oneindia Kannada

ದೇಶದಲ್ಲಿ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,05,824ಕ್ಕೆ ತಲುಪಿದೆ. ಇದರಲ್ಲಿ 6,92,028 ಮಂದಿ ಕೊರೊನಾ ವೈರಸ್ ಸಕ್ರಿಯ ಸೋಂಕಿತರಾಗಿದ್ದು, 21,58,947 ರೋಗಿಗಳು ವೈರಸ್‌ನಿಂದ ಚೇತರಿಸಿಕೊಂಡಿದ್ದಾರೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 983 ಹೊಸ ಸಾವಿನ ಪ್ರಕರಣಗಳು ವರದಿಯಾಗಿದ್ದು, ಕೊರೊನಾ ವೈರಸ್‌ಗೆ ಬಲಿಯಾದವರ ಒಟ್ಟು ಸಂಖ್ಯೆ 54,849ಕ್ಕೆ ಏರಿಕೆಯಾಗಿದೆ. ಶುಕ್ರವಾರ 62,282 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದು ಸಮಾಧಾನದ ಸಂಗತಿ. ಇದು ಈವರೆಗೆ ಒಂದು ದಿನದಲ್ಲಿ ದಾಖಲಾದ ಅತಿ ಹೆಚ್ಚಿನ ಬಿಡುಗಡೆಯಾದವರ ಪ್ರಮಾಣವಾಗಿದೆ.

Indias COVID-19 Case Count Crosses 29 Lakh Mark

ಅತ್ಯಧಿಕ ಕೋವಿಡ್ 19 ಪ್ರಕರಣಗಳಿರುವ ರಾಜ್ಯದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿಯೇ ಮುಂದುವರಿದಿದೆ. ಶುಕ್ರವಾರ 14,161 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 11,749 ಮಂದಿ ಗುಣಮುಖರಾಗಿದ್ದಾರೆ. 339 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಒಟ್ಟುಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 6,57,450ಕ್ಕೆ ತಲುಪಿದೆ. ಇವರಲ್ಲಿ 4,70,873 ಮಂದಿ ಗುಣಮುಖರಾಗಿದ್ದಾರೆ. 21,698 ಮಂದಿ ಜೀವ ಕಳೆದುಕೊಂಡಿದ್ದಾರೆ.

ಕೊರೊನಾದಿಂದ ಊರಿಗೆ ಮರಳಿದ ವಲಸೆ ಕಾರ್ಮಿಕರಿಗೆ ಜಾತಿ ತಾರತಮ್ಯದ ಭಾರಕೊರೊನಾದಿಂದ ಊರಿಗೆ ಮರಳಿದ ವಲಸೆ ಕಾರ್ಮಿಕರಿಗೆ ಜಾತಿ ತಾರತಮ್ಯದ ಭಾರ

ಆಂಧ್ರಪ್ರದೇಶದಲ್ಲಿ 9,544 ಹೊಸ ಪ್ರಕರಣಗಳು ದಾಖಲಾಗಿವೆ. 8,827 ಮಂದಿ ಚೇತರಿಸಿಕೊಂಡಿದ್ದು, ಕಳೆದ 24ಗಂಟೆಗಳಲ್ಲಿ 91 ಮಂದಿ ಮೃತಪಟ್ಟಿದ್ದಾರೆ.

ಕರ್ನಾಟಕದಲ್ಲಿ ಶುಕ್ರವಾರದ ವೇಳೆಗೆ 7,571 ಹೊಸ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ 2,948 ಪ್ರಕರಣಗಳು ಬೆಂಗಳೂರಿನಲ್ಲಿಯೇ ಕಂಡುಬಂದಿದೆ. 6,561 ಮಂದಿ ಬಿಡುಗಡೆಯಾಗಿದ್ದು, 93 ಸಾವುಗಳು ವರದಿಯಾಗಿವೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 2,64,546ಕ್ಕೆಯಾಗಿದೆ. ಅವರಲ್ಲಿ 1,76,942 ಮಂದಿ ಬಿಡುಗಡೆಯಾಗಿದ್ದು, 4,522 ಮಂದಿ ಮೃತಪಟ್ಟಿದ್ದಾರೆ.

English summary
68,898 new COVID-19 cases were reported in the last 24 hours in India. 62,282 people were discharged in a single day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X