• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಖುಷಿ ಸುದ್ದಿ: ಕೊರೊನಾ ಸೋಂಕಿತರ ಮರಣ ಪ್ರಮಾಣ ಶೇ.1.5ಕ್ಕೆ ಇಳಿಕೆ

|

ನವದೆಹಲಿ, ಅಕ್ಟೋಬರ್ 31: ಭಾರತದಲ್ಲಿ ಕೊರೊನಾ ಸೋಂಕಿತರ ಮರಣ ಪ್ರಮಾಣ ಶೇ.1.5ಕ್ಕೆ ಇಳಿಕೆಯಾಗಿದೆ.

ಈ ಕುರಿತು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಪ್ರತಿ 10 ಲಕ್ಷ ಜನರಿಗೆ ಕೊವಿಡ್‌ನಿಂದ ಮೃತಪಡುತ್ತಿರುವವರ ಸಂಖ್ಯೆ 88, ದೇಶದ ಒಟ್ಟು 23 ರಾಜ್ಯಗಳಲ್ಲಿ ಸಿಎಫ್ಆರ್, ರಾಷ್ಟ್ರೀಯ ಸರಾಸರಿಗಿಂತಲೂ ಕಡಿಮೆ ಇದೆ. ಹೆಚ್ಚಿನ ಪರೀಕ್ಷೆ, ಸೋಂಕಿತರ ಸಂಪರ್ಕಿತರ ಪತ್ತೆ ಹಾಗೂ ಚಿಕಿತ್ಸೆಯೇ ಮರಣ ಪ್ರಮಾಣ ಇಳಿಕೆಗೆ ಕಾರಣ ಎಂದು ಅಂದಾಜಿಸಲಾಗಿದೆ.

ಶುಕ್ರವಾರ ದೇಶದಲ್ಲಿ ಒಟ್ಟು 551 ಮಂದಿ ಮೃತಪಟ್ಟಿದ್ದರು. ನಿತ್ಯ ಸಂಭವಿಸುತ್ತಿರುವ ಸಾವಿನ ಪ್ರಮಾಣ ಕಡಿಮೆಯಾಗುತ್ತಿದೆ. ಒಟ್ಟು ಸಾವಿನ ಸಂಖ್ಯೆಯಲ್ಲಿ ಶೇ.65 ಸಾವು ಐದು ರಾಜ್ಯಗಳಲ್ಲಿ ಸಂಭವಿಸಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಶೇ.36.04, ಕರ್ನಾಟಕದಲ್ಲಿ ಶೇ.9.0, ತಮಿಳುನಾಡಿನಲ್ಲಿ ಶೇ.9.12, ಉತ್ತರ ಪ್ರದೇಶದಲ್ಲಿ ಶೇ.5.76 ಹಾಗೂ ಪಶ್ಚಿಮ ಬಂಗಾಳದಲ್ಲಿ ಶೇ.5.58ಸಾವಿನ ಪ್ರಕಣಗಳು ದಾಖಲಾಗಿವೆ.

ದೇಶದಲ್ಲಿ ಮತ್ತೆ 50 ಸಾವಿರಕ್ಕೂ ಕಡಿಮೆ ಕೋವಿಡ್ ಪ್ರಕರಣ ವರದಿಯಾಗಿದೆ. ಭಾರತದಲ್ಲಿ 24 ಗಂಟೆಗಳಲ್ಲಿ 48,268 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಈ ಬಾರಿ ಕೂಡ ಹೊಸ ಪ್ರಕರಣಗಳಿಗಿಂತ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆಯೇ ಅಧಿಕವಾಗಿರುವುದು ಸಮಾಧಾನ ಮೂಡಿಸಿದೆ. ಕಳೆದ 24 ಗಂಟೆಗಳಲ್ಲಿ 551 ಮಂದಿ ಕೊರೊನಾ ವೈರಸ್‌ನಿಂದ ಬಲಿಯಾಗಿದ್ದಾರೆ.

ದೇಶದಲ್ಲಿ ಐದು ಲಕ್ಷಕ್ಕೆ ಇಳಿಕೆಯಾದ ಸಕ್ರಿಯ ಪ್ರಕರಣಗಳು

ಇದರಿಂದ ದೇಶದಲ್ಲಿ ವೈರಸ್ ಸೋಂಕಿಗೆ ಬಲಿಯಾದವರ ಸಂಖ್ಯೆ 1,21,641ಕ್ಕೆ ಏರಿಕೆಯಾಗಿದೆ. ಶುಕ್ರವಾರದ ಅಂತ್ಯದ ವೇಳೆಗೆ 59,454 ಮಂದಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೂ 74,32,829 ಮಂದಿ ಗುಣಮುಖರಾಗಿ ಮನೆಗೆ ಮರಳಿದಂತಾಗಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಐದು ಲಕ್ಷಕ್ಕಿಂತ ಕಡಿಮೆಯಾಗಿರುವುದು ಮತ್ತೊಂದು ಗಮನಾರ್ಹ ಸಾಧನೆ. ಶನಿವಾರದ ಬೆಳಗಿನ ವೇಳೆಗೆ ದೇಶದಲ್ಲಿ 5,82,649 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ದಾಖಲಾದ ಒಟ್ಟು ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 81,37,119ಕ್ಕೆ ತಲುಪಿದೆ.

English summary
Fell below 1.5% on Saturday, the Union Health Ministry said, crediting the Centre-led strategy of ‘test, trace track and treat for keeping related deaths low within managable numbers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X