ಕೊವಿಡ್-19 ಆಘಾತ: ಭಾರತದಲ್ಲಿ ಶೇ.65ರಷ್ಟು ಸೋಂಕಿತರ ಸಂಖ್ಯೆ ಏರಿಕೆ
ನವದೆಹಲಿ, ಏಪ್ರಿಲ್ 20: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಾಲ್ಕನೇ ಅಲೆಯ ಭೀತಿ ಶುರುವಾಗಿದೆ. ಒಂದು ದಿಕ್ಕಿನಲ್ಲಿ ಓಮಿಕ್ರಾನ್ ರೂಪಾಂತರಿಯ ಎಕ್ಸ್ಇ ತಳಿಯು ದೇಶಕ್ಕೆ ಲಗ್ಗೆಯಿಟ್ಟಿದೆ. ಇದರ ಮಧ್ಯೆ ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಳಿತವಾಗುತ್ತಿದೆ.
ದೇಶದಲ್ಲಿ ಒಂದು ದಿನದಲ್ಲಿ 2067 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಬುಧವಾರವೊಂದೇ ದಿನದಲ್ಲಿ ವರದಿಯಾದ ಪ್ರಕರಣಗಳ ಸಂಖ್ಯೆಯು ಶನಿವಾರಕ್ಕೆ ಹೋಲಿಸಿದರೆ ಶೇ.65ರಷ್ಟು ಹೆಚ್ಚಳವಾಗಿದೆ. ಶನಿವಾರದಂದು ದೇಶದಲ್ಲಿ 1,247 ಹೊಸ ಪ್ರಕರಣಗಳು ಪತ್ತೆಯಾಗಿದ್ದವು.
ಕೊರೊನಾವೈರಸ್ ನಾಲ್ಕನೇ ಅಲೆಯ ಆತಂಕದ ನಡುವೆಯೇ ಪಾಸಿಟಿವಿಟಿ ದರದಲ್ಲೂ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ ಪಾಸಿಟಿವಿಟಿ ದರ ಶೇ.0.49ರಷ್ಟಿದೆ. ಅದೇ ರೀತಿ ಕಳೆದೊಂದು ವಾರದಲ್ಲಿ ಕೋವಿಡ್-19 ಪಾಸಿಟಿವಿಟಿ ದರವು ಶೇ.0.38ರಷ್ಟಿದೆ. ದೇಶದ ಕೊವಿಡ್-19 ಅಂಕಿ-ಅಂಶಗಳ ಕುರಿತು ಒಂದು ವಿಸ್ತೃತ ವರದಿ ಇಲ್ಲಿದೆ ನೋಡಿ.

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಏರಿಳಿತ ಹೇಗಿದೆ?
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 2067 ಕೋವಿಡ್-19 ಸೋಂಕಿತ ಪ್ರಕರಣಗಳನ್ನು ವರದಿ ಮಾಡಿದೆ. ಆ ಮೂಲಕ ಶೇ.65ರಷ್ಟು ಪ್ರಕರಣಗಳಲ್ಲಿ ಏರಿಕೆ ಕಂಡು ಬಂದಿದೆ. ಕಳೆದ ಏಳು ದಿನಗಳಲ್ಲಿ ಎಷ್ಟು ಜನರಿಗೆ ಕೋವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಈ ಪೈಕಿ ಎಷ್ಟು ಜನರಿಗೆ ಸೋಂಕು ಪಕ್ಕಾ ಆಗಿದೆ ಎನ್ನುವುದರ ಪಟ್ಟಿ ಇಲ್ಲಿದೆ ನೋಡಿ.
ದಿನಾಂಕ - ಹೊಸ ಪ್ರಕರಣಗಳು
20 ಏಪ್ರಿಲ್ - 2067
19 ಏಪ್ರಿಲ್ - 1247
18 ಏಪ್ರಿಲ್: - 2,183
17 ಏಪ್ರಿಲ್: - 1,150
16 ಏಪ್ರಿಲ್: - 975
15 ಏಪ್ರಿಲ್: - 949
14 ಏಪ್ರಿಲ್: - 1,007

ಏಪ್ರಿಲ್ 19ರಂದು ಕೋವಿಡ್-19 ಅಂಕಿ-ಸಂಖ್ಯೆ
ಭಾರತದಲ್ಲಿ ಪತ್ತೆಯಾಗಿರುವ ಕೊರೊನಾವೈರಸ್ ಹೊಸ ರೂಪಾಂತರಿ ಎಕ್ಸ್ಇ ತಳಿಯ ಭೀತಿ ಹೆಚ್ಚಾಗಿದೆ. ಇದರ ಮಧ್ಯೆ ದೇಶದಲ್ಲಿ ಮತ್ತೊಮ್ಮೆ ಸೋಂಕಿತ ಪ್ರಕರಣಗಳ ಸಂಖ್ಯೆ ಎರಡು ಸಾವಿರಕ್ಕಿಂತ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 1,247 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 31 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 928 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,045,527ಕ್ಕೆ ಏರಿಕೆಯಾಗಿದೆ. ಈ ಪೈಕಿ 42,511,701 ಸೋಂಕಿತರು ಗುಣಮುಖರಾಗಿದ್ದರೆ, 521,996 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 11,830 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಒಂದೇ ದಿನ 2,067 ಮಂದಿಗೆ ಕೊವಿಡ್
ಭಾರತದಲ್ಲಿ ಪತ್ತೆಯಾಗಿರುವ ಕೊರೊನಾವೈರಸ್ ಹೊಸ ರೂಪಾಂತರಿ ಎಕ್ಸ್ಇ ತಳಿಯ ಭೀತಿ ಹೆಚ್ಚಾಗಿದೆ. ಇದರ ಮಧ್ಯೆ ದೇಶದಲ್ಲಿ ಮತ್ತೊಮ್ಮೆ ಸೋಂಕಿತ ಪ್ರಕರಣಗಳ ಸಂಖ್ಯೆ ಎರಡು ಸಾವಿರಕ್ಕಿಂತ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 2,067 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 10 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 1547 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,047,594ಕ್ಕೆ ಏರಿಕೆಯಾಗಿದೆ. ಈ ಪೈಕಿ 42,513,248 ಸೋಂಕಿತರು ಗುಣಮುಖರಾಗಿದ್ದರೆ, 522,006 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 12,340 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
Recommended Video

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಎಷ್ಟಿದೆ?
ಭಾರತದಲ್ಲಿ ಕೊರೊನಾವೈರಸ್ ನಿಯಂತ್ರಿಸುವ ಸಲುವಾಗಿ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಇದುವರೆಗೂ 1,86,90,56,607 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ. ಮೊದಲ ಹಂತ, ಎರಡನೇ ಹಂತ ಮತ್ತು ಮೂರನೇ ಹಂತ ಎಂಬುದಾಗಿ ಹಂತ-ಹಂತವಾಗಿ ಲಸಿಕೆ ವಿತರಣೆ ಅಭಿಯಾನವನ್ನು ಆರಂಭಿಸಲಾಗಿತ್ತು. ಇದೇ ಏಪ್ರಿಲ್ 10ರಿಂದ ಭಾರತದಲ್ಲಿ ಬೂಸ್ಟರ್ ಡೋಸ್ ಲಸಿಕಯನ್ನೂ ಸಹ ವಿತರಿಸಲು ಆರಂಭಿಸಲಾಗಿದೆ. ಎರಡನೇ ಡೋಸ್ ಲಸಿಕೆಯನ್ನು ಪಡೆದು 9 ತಿಂಗಳ ನಂತರದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆಯನ್ನು ನೀಡಲಾಗುತ್ತಿದೆ. ಇದುವರೆಗೂ 2,57,80,053 ಮಂದಿಗೆ ಬೂಸ್ಟರ್ ಡೋಸ್ ವಿತರಣೆ ಮಾಡಲಾಗಿದೆ. ಆದರೆ ಏಪ್ರಿಲ್ 10ರಂದು ಘೋಷಿಸಿದಂತೆ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು 2ನೇ ಡೋಸ್ ಪಡೆದು 9 ತಿಂಗಳ ನಂತರ ಬೂಸ್ಟರ್ ಡೋಸ್ ಪಡೆದುಕೊಳ್ಳಬಹುದು. ಆದರೆ ಅದಕ್ಕೆ ಹಣವನ್ನು ಪಾವತಿ ಮಾಡಬೇಕಾಗುತ್ತದೆ.












Click it and Unblock the Notifications