ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ಟೋಬರ್‌ನಲ್ಲಿ 100 ಕೋಟಿ ಕೋವಿಡ್‌ ಲಸಿಕೆ ಡೋಸ್‌ ನೀಡಲು ಕೇಂದ್ರದ ಗುರಿ

|
Google Oneindia Kannada News

ನವದೆಹಲಿ, ಅಕ್ಟೋಬರ್‌ 13: ಮುಂದಿನ ವರ್ಷ ಪಂಚ ರಾಜ್ಯಗಳಲ್ಲಿ ವಿಧಾನಸಭೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಕೊರೊನಾ ವೈರಸ್‌ ಸೋಂಕು ವಿರುದ್ಧ ಲಸಿಕೆ ನೀಡುವುದರಲ್ಲಿ ದಾಖಲೆಯನ್ನು ಸೃಷ್ಟಿ ಮಾಡುವುರತ್ತ ಚಿತ್ತ ನೆಟ್ಟಿರುವ ಸಾಧ್ಯತೆಗಳು ಇದೆ. ಕೇಂದ್ರ ಸರ್ಕಾರವೂ ಅಕ್ಟೋಬರ್‌ ಒಂದು ತಿಂಗಳಿನಲ್ಲೇ ನೂರು ಕೋಟಿ ಡೋಸ್‌ ಕೋವಿಡ್‌ ಲಸಿಕೆಗಳನ್ನು ನೀಡುವ ಗುರಿಯನ್ನು ಹೊಂದಿದೆ ಎಂದು ಸರ್ಕಾರದ ಮೂಲಗಳು ತಿಳಿಸಿದೆ.

ಪ್ರಸ್ತುತ ಲಸಿಕೆಯನ್ನು ಪಡೆಯಬಹುದಾದ ಜನರೆಲ್ಲರಿಗೂ ಕೊರೊನಾ ವೈರಸ್‌ ಸೋಂಕು ವಿರುದ್ದದ ಲಸಿಕೆಯನ್ನು ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯನಿರ್ವಹಣೆ ಮಾಡುತ್ತಿದೆ ಎಂದು ಸರ್ಕಾರದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಈ ನಡುವೆ ಸರ್ಕಾರವು ಕೋವಿಡ್‌ ಲಸಿಕೆಯನ್ನು ವಿದೇಶಕ್ಕೆ ರಫ್ತು ಮಾಡುವುದರ ಮೇಲೆ ಅಧಿಕ ಒತ್ತು ನೀಡುತ್ತಿಲ್ಲ. ಮೊದಲು ದೇಶದ ಎಲ್ಲಾ ಜನರಿಗೆ ಕೋವಿಡ್‌ ವಿರುದ್ಧದ ಲಸಿಕೆಯನ್ನು ನೀಡುವುದು ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ವರದಿಯು ಹೇಳಿದೆ.

'ಕೇರಳದಲ್ಲಿ ಶೇ. 93 ರಷ್ಟು ಮಂದಿ ಮೊದಲ ಡೋಸ್‌ ಲಸಿಕೆ ಪಡೆದಿದ್ದಾರೆ': ವೀಣಾ ಜಾರ್ಜ್'ಕೇರಳದಲ್ಲಿ ಶೇ. 93 ರಷ್ಟು ಮಂದಿ ಮೊದಲ ಡೋಸ್‌ ಲಸಿಕೆ ಪಡೆದಿದ್ದಾರೆ': ವೀಣಾ ಜಾರ್ಜ್

"ಸದ್ಯಕ್ಕೆ ಕೇಂದ್ರ ಸರ್ಕಾರವು ಕೋವಿಡ್‌ ಲಸಿಕೆಯನ್ನು ರಫ್ತು ಮಾಡುವುದರ ಮೇಲೆ ಅಧಿಕ ಒತ್ತನ್ನು ನೀಡುತ್ತಿಲ್ಲ. ನಾಲ್ಕನೇ ತ್ರೈಮಾಸಿಕದಲ್ಲಿ ಕೋವಿಡ್‌ ಲಸಿಕೆಯನ್ನು ಎಷ್ಟು ಪ್ರಮಾಣದಲ್ಲಿ ಉತ್ಪಾದನೆ ಮಾಡಲಾಗಿದೆ ಎಂದು ನೋಡಲಾಗುತ್ತದೆ. ಆ ಬಳಿಕ ವಿದೇಶಕ್ಕೆ ಕೋವಿಡ್‌ ಲಸಿಕೆಯನ್ನು ರಫ್ತು ಮಾಡುವ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಮಾಡಲಿದೆ," ಎಂದು ಮೂಲಗಳು ತಿಳಿಸಿದೆ.

 India’s Covid vaccination set to reach 100-crore target in October

ದುರ್ಬಲ ವರ್ಗಕ್ಕೆ ಕೋವಿಡ್‌ ಬೂಸ್ಟರ್‌ ಅನ್ನು ನೀಡುವ ಬಗ್ಗೆ ಸರ್ಕಾರವು ಈವರೆಗೆಗೂ ನಿರ್ಧಾರ ಮಾಡಿಲ್ಲ ಎಂದು ವರದಿಯು ಹೇಳಿದೆ. "ಬೂಸ್ಟರ್‌ ಡೋಸ್‌ ಬಗ್ಗೆ ಭಾರತದಲ್ಲಿ ಯಾವುದೇ ತಜ್ಞರ ಅಭಿಪ್ರಾಯವಿಲ್ಲ," ಎಂದು ಮೂಲಗಳು ಹೇಳಿದೆ. ಭಾರತದಲ್ಲಿ ಈಗಾಗಲೇ 96 ಕೋಟಿ ಜನರಿಗೆ ಕೋವಿಡ್‌ ಲಸಿಕೆಯನ್ನು ನೀಡಲಾಗಿದೆ. ಅಂದರೆ ಕೋವಿಡ್‌ ಲಸಿಕೆ ಫಲಾನುಭವಿಗಳ ಪೈಕಿ ಶೇಕಡ 73 ರಷ್ಟು ಮಂದಿಗೆ ಕೋವಿಡ್‌ ಲಸಿಕೆಯ ಮೊದಲ ಡೋಸ್‌ ಲಸಿಕೆ ನೀಡಲಾಗಿದೆ. ಹಾಗೂ ಶೇಕಡ 29 ರಷ್ಟು ಮಂದಿಗೆ ಎರಡನೇ ಡೋಸ್‌ ಕೋವಿಡ್‌ ಲಸಿಕೆಯನ್ನು ನೀಡಲಾಗಿದೆ.

ದೇಶದಲ್ಲಿ ಅಕ್ಟೋಬರ್‌ನಲ್ಲಿ ಸುಮಾರು 28 ಕೋಟಿ ಡೋಸ್‌ ಕೋವಿಡ್‌ ಲಸಿಕೆಯನ್ನು ಉತ್ಪಾದನೆ ಮಾಡಲಾಗುತ್ತದೆ. ಈ ಪೈಕಿ 22 ಕೋಟಿ ಕೋವಿಶೀಲ್ಡ್‌ ಲಸಿಕೆ ಹಾಗೂ ಆರು ಕೋಟಿ ಕೋವಾಕ್ಸಿನ್‌ ಲಸಿಕೆಯನ್ನು ಉತ್ಪಾದನೆ ಮಾಡಲಾಗುತ್ತದೆ. ಪ್ರಸ್ತುತ ಜಿಡಸ್‌ ಕ್ಯಾಡಿಲಾದ ಮೂರು ಡೋಸ್ ಕೋವಿಡ್ -19 ಲಸಿಕೆ ಜಿಕೋವ್‌-ಡಿ ಲಸಿಕೆಯ 60 ಲಕ್ಷ ಡೋಸ್‌ ಹಂಚಲು ಸಿದ್ಧವಾಗಿದೆ.

ಕೋವಿಡ್‌ ವ್ಯಾಕ್ಸಿನೇಷನ್ ವೇಗವನ್ನು ಹೆಚ್ಚಿಸಲು ರಾಜ್ಯಗಳಿಗೆ ಸಾಕಷ್ಟು ಸಂಖ್ಯೆಗಳನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. "ಪ್ರಸ್ತುತ ದೇಶಾದ್ಯಂತ 8 ಕೋಟಿ ಲಸಿಕೆ ಡೋಸ್‌ಗಳು ರಾಜ್ಯಗಳಲ್ಲಿವೆ. ಹೆಚ್ಚಿನ ರಾಜ್ಯಗಳು ತಮ್ಮ ಜನಸಂಖ್ಯೆಯ ಶೇಕಡಾ 60 ಕ್ಕಿಂತ ಹೆಚ್ಚು ಲಸಿಕೆ ಹಾಕಿವೆ. ಪ್ರಸ್ತುತ ಯಾವುದೇ ರಾಜ್ಯಗಳಲ್ಲೂ ಕೋವಿಡ್‌ ಲಸಿಕೆ ಕೊರತೆ ಇಲ್ಲ," ಎಂದು ಮೂಲಗಳು ಮಾಹಿತಿ ನೀಡಿದೆ.

ಇನ್ನು ಇತ್ತೀಚೆಗೆ ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುವ ಕೊವ್ಯಾಕ್ಸಿನ್ ಲಸಿಕೆಯನ್ನು 2-18 ವಯೋಮಾನದ ಮಕ್ಕಳ ಮೇಲೆ ತುರ್ತು ಬಳಕೆಗೆ ಕೊವಿಡ್-19 ತಜ್ಞರ ಸಮಿತಿ ಅನುಮೋದನೆ ನೀಡಿದೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸೆಪ್ಟೆಂಬರ್‌ನಲ್ಲಿ 18 ವರ್ಷದೊಳಗಿನ ಮಕ್ಕಳ ಮೇಲೆ ಕೋವಾಕ್ಸಿನ್‌ನ ಹಂತ -2 ಮತ್ತು ಹಂತ -3 ಪ್ರಯೋಗಗಳನ್ನು ಪೂರ್ಣಗೊಳಿಸಿತು ಮತ್ತು ಈ ತಿಂಗಳ ಆರಂಭದಲ್ಲಿ ಟ್ರಗ್ ದತ್ತಾಂಶವನ್ನು ಡ್ರಗ್ಸ್ ಮತ್ತು ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ)ಗೆ ಸಲ್ಲಿಸಿತ್ತು. ಈ ದತ್ತಾಂಶಗಳ ಆಧಾರದ ಮೇಲೆ ವಿವರವಾಗಿ ಚರ್ಚಿಸಿದ ನಂತರ 2 ರಿಂದ 18 ವಯೋಮಾನದವರಿಗೆ ಕೊವ್ಯಾಕ್ಸಿನ್ ಲಸಿಕೆಯನ್ನು ನೀಡಲು ಸಮಿತಿಯು ಶಿಫಾರಸು ಮಾಡಿದೆ. ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆಯ ಎರಡು ಡೋಸ್ ಅನ್ನು ನೀಡಲಾಗುವುದು. ಮೊದಲ ಡೋಸ್ ಮತ್ತು ಎರಡನೇ ಡೋಸ್ ನಡುವೆ 20 ದಿನಗಳ ಅಂತರವಿರಬೇಕು.

(ಒನ್‌ಇಂಡಿಯಾ ಸುದ್ದಿ)

English summary
India’s Covid vaccination set to reach 100-crore target in October. Read on.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X