ಭಾರತದಲ್ಲಿ ಕೊರೊನಾವೈರಸ್ 5ನೇ ಲಸಿಕೆಗೆ ಸಿಗುತ್ತಾ ಅನುಮೋದನೆ?

ನವದೆಹಲಿ, ಜುಲೈ 01: ಭಾರತದ ಜೈಡಸ್ ಕ್ಯಾಡಿಲಾ ಕಂಪನಿ ಉತ್ಪಾದಿಸುವ ಕೊರೊನಾವೈರಸ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡುವಂತೆ ದೇಶದ ಔಷಧೀಯ ನಿಯಂತ್ರಕರಿಗೆ ಅರ್ಜಿ ಸಲ್ಲಿಸಿದೆ. ಕಂಪನಿಯು ಪ್ರತಿವರ್ಷದಲ್ಲಿ 120 ದಶಲಕ್ಷ ಡೋಸ್ ಲಸಿಕೆಯನ್ನು ಉತ್ಪಾದಿಸುವ ಗುರಿಯನ್ನು ಹೊಂದಿದೆ.

ಕಳೆದ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಟ್ಟಹಾಸ ಹೆಚ್ಚಾಗಿತ್ತು. ಒಂದು ಹಂತದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ದಾಖಲೆ ಮಟ್ಟಕ್ಕೆ ತಲುಪಿತ್ತು. ಪ್ರಸ್ತುತ ದೇಶದಲ್ಲಿ ಕೊರೊನಾವೈರಸ್ ಹಾವಳಿ ಕೊಂಚ ನಿಯಂತ್ರಣಕ್ಕೆ ಬಂದಿದೆ.

ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಆರಂಭಕ್ಕೂ ಮೊದಲೇ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಸುರಕ್ಷಿತ ಸಮಯದಲ್ಲಿ ಪ್ರಜೆಗಳಿಗೆ ಲಸಿಕೆ ವಿತರಣೆ ಕಾರ್ಯವನ್ನು ಸಮರೋಪಾದಿಯಲ್ಲಿ ನಡೆಸಬೇಕು ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆ ದೇಶದಲ್ಲಿ ನಾಲ್ಕು ಕಂಪನಿಗಳ ಲಸಿಕೆ ವಿತರಣೆಗೆ ಅನುಮೋದನೆ ನೀಡಲಾಗಿದೆ.

ಕೊವಿಡ್-19 ಲಸಿಕೆ ಸುರಕ್ಷತೆ ಮತ್ತು ಪರಿಣಾಮ

ಕೊವಿಡ್-19 ಲಸಿಕೆ ಸುರಕ್ಷತೆ ಮತ್ತು ಪರಿಣಾಮ

ಜೈಡಸ್ ಕ್ಯಾಡಿಲಾ ಕಂಪನಿಯು ಸಂಶೋಧಿಸಿರುವ ಜೈಕೊವ್-ಡಿ ಲಸಿಕೆಯ ಸುರಕ್ಷತೆ ಮತ್ತು ಪರಿಣಾಮದ ಬಗ್ಗೆ ವೈದ್ಯಕೀಯ ಪ್ರಯೋಗಗಳನ್ನು ನಡೆಸಲಾಗಿದೆ. ದೇಶಾದ್ಯಂತ 28,000 ಜನರನ್ನು ಬಳಸಿಕೊಂಡು ವೈದ್ಯಕೀಯ ಪ್ರಯೋಗ ನಡೆಸಲಾಗಿದೆ. ಈ ಹಂತದಲ್ಲಿ 12 ರಿಂದ 18 ವರ್ಷದ 1,000 ಮಕ್ಕಳನ್ನು ಲಸಿಕೆ ಪರೀಕ್ಷೆಯಲ್ಲಿ ಬಳಸಿಕೊಳ್ಳಲಾಗಿದೆ. ಈ ಹಂತದಲ್ಲಿ ಜೈಕೊವ್-ಡಿ ಲಸಿಕೆಯು ಹೆಚ್ಚು ಸುರಕ್ಷಿತ ಹಾಗೂ ಪರಿಣಾಮಕಾರಿ ಎಂಬುದು ಸಾಬೀತಾಗಿದೆ ಎಂದು ಕಂಪನಿಯು ಹೇಳಿದೆ.

ಡೆಲ್ಟಾ ರೂಪಾಂತರಗಳ ವಿರುದ್ಧ ಪರಿಣಾಮಕಾರಿ ಲಸಿಕೆ

ಡೆಲ್ಟಾ ರೂಪಾಂತರಗಳ ವಿರುದ್ಧ ಪರಿಣಾಮಕಾರಿ ಲಸಿಕೆ

"ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯು ಹೆಚ್ಚಾಗಿದ್ದ ಸಂದರ್ಭದಲ್ಲಿ ಜೈಕೊವ್-ಡಿ ಲಸಿಕೆಯ ವೈದ್ಯಕೀಯ ಪ್ರಯೋಗವನ್ನು ನಡೆಸಲಾಗಿದೆ. ಈ ಲಸಿಕೆಯು ಡೆಲ್ಟಾ ರೂಪಾಂತರ ಸೇರಿದಂತೆ ಹೊಸ ಮಾದರಿಯ ರೂಪಾಂತರ ತಳಿಗಳ ವಿರುದ್ಧ ಪರಿಣಾಮಕಾರಿ ಆಗಿರಲಿದೆ," ಎಂದು ಜೈಡಸ್ ಕ್ಯಾಡಿಲಾ ಕಂಪನಿಯು ಹೇಳಿಕೊಂಡಿದೆ.

ದೇಶದಲ್ಲಿ ಅನುಮೋದನೆ ಪಡೆದ ಕೊರೊನಾ ಲಸಿಕೆಗಳು

ದೇಶದಲ್ಲಿ ಅನುಮೋದನೆ ಪಡೆದ ಕೊರೊನಾ ಲಸಿಕೆಗಳು

ಭಾರತದಲ್ಲಿ ಒಟ್ಟು ನಾಲ್ಕು ಕಂಪನಿಗಳ ಕೊರೊನಾವೈರಸ್ ಲಸಿಕೆಯ ವಿತರಣೆಗೆ ಅನುಮೋದನೆ ನೀಡಲಾಗಿದೆ. ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿರುವ ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಲಸಿಕೆ. ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್, ರಷ್ಯಾದಲ್ಲಿ ಸಂಶೋಧಿಸಿ ಭಾರತದ ರೆಡ್ಡೀಸ್ ಕಂಪನಿ ಜೊತೆಗಿನ ಸಹಭಾಗಿತ್ವದಲ್ಲಿ ಉತ್ಪಾದನೆ ಆಗುತ್ತಿರುವ ಸ್ಪುಟ್ನಿಕ್-ವಿ ಹಾಗೂ ಮಾಡೆರ್ನಾ ಲಸಿಕೆಯನ್ನು ವಿತರಿಸುವುದಕ್ಕೆ ಕೇಂದ್ರ ವೈದ್ಯಕೀಯ ಔಷಧೀಯ ನಿಯಂತ್ರಣ ಪ್ರಾಧಿಕಾರವು ಅನುಮೋದನೆ ನೀಡಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ಪಡೆದವರ ಸಂಖ್ಯೆ ಎಷ್ಟಿದೆ?

ದೇಶದಲ್ಲಿ ಕೊರೊನಾವೈರಸ್ ಲಸಿಕೆ ಪಡೆದವರ ಸಂಖ್ಯೆ ಎಷ್ಟಿದೆ?

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು.

ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ. ದೇಶದಲ್ಲಿ ಈವರೆಗೂ 33,57,16,019 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+