ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಡಾಖ್ ಗಡಿಯಿಂದ ಸೇನೆ ಹಿಂತೆಗೆಯುವ ಪ್ರಕ್ರಿಯೆ ಪೂರ್ಣಗೊಂಡಿಲ್ಲ ಎಂದ ಭಾರತ

|
Google Oneindia Kannada News

ನವದೆಹಲಿ, ಜುಲೈ 31:ಪೂರ್ವ ಲಡಾಖ್‌ನ ಕಣಿವೆ ಗಡಿ ಪ್ರದೇಶದಲ್ಲಿ ಸೇನೆಯನ್ನು ಹಿಂತೆಗೆಯುವ ಪ್ರಯತ್ನ ಇನ್ನೂ ಪೂರ್ಣಗೊಂಡಿಲ್ಲ ಎಂದು ಭಾರತ ತಿಳಿಸಿದೆ.
ಗುರುವಾರಷ್ಟೇ ಚೀನಾ, ಉಭಯ ಸೇನೆ ಲಡಾಖ್ ಗಡಿಯಿಂದ ಹಿಂದೆ ಸರಿದಿದೆ ಎನ್ನುವ ಹೇಳಿಕೆಯನ್ನು ನೀಡಿತ್ತು.

ಲಡಾಖ್ ಗಡಿಯ ಬಹುತೇಕ ನೆಲೆಗಳಿಂದ ಭಾರತ ಮತ್ತು ಚೀನಾ ಎರಡೂ ದೇಶಗಳ ಸೇನಾಪಡೆಗಳು ಸಂಪೂರ್ಣ ಹಿಂದೆ ಸರಿದಿವೆ ಎಂಬ ಚೀನಾ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಭಾರತ, ಸೇನೆ ಹಿಂಪಡೆಯುವ ಪ್ರಕ್ರಿಯೆ ಇನ್ನೂ ಪ್ರಗತಿಯಲ್ಲಿದೆ. ಪೂರ್ಣಗೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ.

India-China

ಎರಡು ದಿನಗಳ ಹಿಂದಷ್ಟೇ, ಉಭಯ ದೇಶಗಳ ಮುಂಚೂಣಿ ಗಡಿ ಪಡೆಗಳು ಈಗಾಗಲೇ ಬಹುತೇಕ ಸೇನಾ ನೆಲೆಗಳಲ್ಲಿ ನಿಷ್ಕ್ರಿಯತೆಯನ್ನು ಪೂರ್ಣಗೊಳಿಸಿವೆ. ಲಡಾಖ್ ಗಡಿಯಲ್ಲಿರುವ ಮುಂಚೂಣಿ ಸೇನಾ ನೆಲೆಗಳಿಂದ ಸೈನಿಕರನ್ನು ಹಿಂಪಡೆಯಲಾಗಿದೆ ಎಂದು ಚೀನಾ ಹೇಳಿತ್ತು.

ಲಡಾಖ್ ಗಡಿಯಿಂದ ಉಭಯ ಸೇನೆಗಳು ಹಿಂದೆ ಸರಿದಿವೆ ಎಂದ ಚೀನಾಲಡಾಖ್ ಗಡಿಯಿಂದ ಉಭಯ ಸೇನೆಗಳು ಹಿಂದೆ ಸರಿದಿವೆ ಎಂದ ಚೀನಾ

ಈ ಬಗ್ಗೆ ಇಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್​​​ ಶ್ರೀವಾಸ್ತವ ಅವರು, ಉಭಯ ದೇಶಗಳ ಸೇನಾಪಡೆಗಳು ಲಡಾಖ್​​ ಗಡಿಯ ಮುಂಚೂಣಿ ಸೇನಾ ನೆಲೆಗಳಿಂದ ಸೈನಿಕರನ್ನು ಹಿಂಪಡೆಯುವ ಪ್ರಕ್ರಿಯೆ ನಡೆಯುತ್ತಿದೆ. ಆದರೆ, ಚೀನಾ ಹೇಳಿದಂತೆ ಸಂಪೂರ್ಣ ಮುಗಿದಿಲ್ಲ ಎಂದು ಹೇಳಿದ್ದಾರೆ.

ಸದ್ಯದಲ್ಲೇ ಎರಡು ದೇಶಗಳ ಹಿರಿಯ ಸೇನಾಧಿಕಾರಿಗಳು ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಸಜ್ಜಾಗಿವೆ. ಇಲ್ಲಿ ಶಾಂತಿ ಮಾತುಕತೆಗಳ ಮೂಲಕವೇ ಸಮಸ್ಯೆ ಪರಿಹಾರ ಕಾಣಬೇಕು.

ಎರಡೂ ರಾಷ್ಟ್ರಗಳ ಸೇನೆಗಳು ಲಡಾಖ್​​ ಗಡಿಯಿಂದ ಹೇಗೆ ಹಿಂದೆ ಸರಿಯಬೇಕು? ಎಂಬುದರ ಕುರಿತು ಚರ್ಚೆ ನಡೆಯುತ್ತಿದೆ. ಲಡಾಖ್ ಗಡಿಯಿಂದ ಬಹುತೇಕವಾಗಿ ಸೈನ್ಯ ತುಕಡಿಗಳನ್ನು ಹಿಂಪಡೆಯಲಾಗಿದೆ ಎಂಬ ಚೀನಾದ ಘೋಷಣೆಯನ್ನು ತಳ್ಳಿ ಹಾಕಿದೆ.

English summary
India Says process for disengagement of troops in eastern Ladakh has not yet been completed though some progress was made, an assertion that came two days after China claimed frontline troops of the two countries have "completed" this exercise at most locations along their border
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X