• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಆಗಸ್ಟ್ ಆಘಾತ: ಕೊವಿಡ್-19 ಸಾವಿನ ಸಂಖ್ಯೆಯಲ್ಲಿ ದಾಖಲೆ ಬರೆದ ಭಾರತ!

|

ನವದೆಹಲಿ, ಸಪ್ಟೆಂಬರ್.01: ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಭಾರತೀಯರನ್ನು ಬೆಚ್ಚಿ ಬೀಳಿಸುವಂತೆ ಏರಿಕೆಯಾಗುತ್ತಿದೆ. ಈಗಾಗಲೇ ಸೋಂಕಿತ ಪ್ರಕರಣಗಳ ಸಂಖ್ಯೆ 37 ಲಕ್ಷಕ್ಕೆ ಸನ್ನಿಹಿತದಲ್ಲಿದೆ. ಇದರ ನಡುವೆ ಆಘಾತಕಾರಿ ಅಂಶವೊಂದು ಹೊರ ಬಿದ್ದಿದೆ.

   ಆಸ್ಪತ್ರೆಯಿಂದ ಕೆಲಸ ಮಾಡುತ್ತಿರುವ Minister | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಕಳೆದ 24 ಗಂಟೆಗಳಲ್ಲೇ 69921 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 3691167ಕ್ಕೆ ಏರಿಕೆಯಾಗಿದೆ. ಒಂದೇ ದಿನ ಮಹಾಮಾರಿಗೆ 819 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆಯು 65288ಕ್ಕೆ ಏರಿಕೆಯಾಗಿದೆ.

   ಭಾರತದಲ್ಲಿ ಒಂದೇ ದಿನ 69,921 ಕೊರೊನಾ ಸೋಂಕಿತರು ಪತ್ತೆ

   ಭಾರತದಲ್ಲಿ ಆಗಸ್ಟ್ ತಿಂಗಳುವೊಂದರಲ್ಲೇ ಸರಿಸುಮಾರು 20 ಲಕ್ಷ ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಒಂದೊಂದೇ ತಿಂಗಳಿನಲ್ಲಿ ಸಾವಿನ ಪ್ರಮಾಣವೂ ಹೆಚ್ಚಾಗಿರುವುದು ಅಂಕಿ-ಅಂಶಗಳ ಸಹಿತ ಸಾಬೀತಾಗಿದೆ.

   ಚೀನಾ ಗಡಿಯಲ್ಲಿರುವ ಭಾರತದ 'ಟಿಬೆಟ್' ಸೇನೆ ಬಗ್ಗೆ ನಿಮಗೆಷ್ಟು ಗೊತ್ತು?

   ದೇಶದಲ್ಲಿ ಕೊರೊನಾವೈರಸ್ ಸೋಂಕಿತರ ಪ್ರಮಾಣ

   ದೇಶದಲ್ಲಿ ಕೊರೊನಾವೈರಸ್ ಸೋಂಕಿತರ ಪ್ರಮಾಣ

   ಭಾರತದಲ್ಲಿ ಇದುವರೆಗೂ 3691167 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. 785996 ಸಕ್ರಿಯ ಪ್ರಕರಣಗಳು ಪತ್ತೆಯಾಗಿದ್ದು, 2839883 ಕೊವಿಡ್-19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಆದರೆ ಆಗಸ್ಟ್ ತಿಂಗಳಿಗೂ ಮೊದಲು ಭಾರತದಲ್ಲಿ ಕೊವಿಡ್-19 ಚಿತ್ರಣ ಇಷ್ಟಾಗಿರಲಿಲ್ಲ ಎಂದು ಅಂಕಿ-ಅಂಶಗಳು ಹೇಳುತ್ತಿವೆ.

   31 ದಿನಗಳಲ್ಲಿ 20 ಲಕ್ಷ ಜನರಿಗೆ ಕೊರೊನಾವೈರಸ್ ಸೋಂಕು

   31 ದಿನಗಳಲ್ಲಿ 20 ಲಕ್ಷ ಜನರಿಗೆ ಕೊರೊನಾವೈರಸ್ ಸೋಂಕು

   ಆಗಸ್ಟ್ ತಿಂಗಳಿನಲ್ಲಿ ಬರೋಬ್ಬರಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಡಬಲ್ ಆಗಿದೆ. 18 ಲಕ್ಷದ ಆಸುಪಾಸಿನಲ್ಲಿದ್ದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 31 ದಿನಗಳಲ್ಲೇ 37 ಲಕ್ಷದ ಸನ್ನಿಹಿತಕ್ಕೆ ಬಂದು ತಲುಪಿದೆ. ಭಾರತದಲ್ಲಿ ಆಗಸ್ಟ್ ತಿಂಗಳಿನಲ್ಲೇ 19,87,705 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಜಾಗತಿಕ ಮಟ್ಟದಲ್ಲೂ 31 ದಿನಗಳ ಅವಧಿಯಲ್ಲಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾದ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು ನಂಬರ್.01 ಸ್ಥಾನದಲ್ಲಿದೆ. ಜುಲೈ ತಿಂಗಳಿನಲ್ಲಿ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ 1904462 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಆಗಸ್ಟ್ ತಿಂಗಳಿನಲ್ಲಿ ಈ ಸಂಖ್ಯೆಯು 1502149ಕ್ಕೆ ಇಳಿಕೆಯಾಗಿದೆ.

   ಭಾರತದಲ್ಲಿ ನಾಲ್ಕು ತಿಂಗಳ ಕೊವಿಡ್-19 ಅಂಕಿ-ಸಂಖ್ಯೆ

   ಭಾರತದಲ್ಲಿ ನಾಲ್ಕು ತಿಂಗಳ ಕೊವಿಡ್-19 ಅಂಕಿ-ಸಂಖ್ಯೆ

   ಇನ್ನು, ಭಾರತದಲ್ಲಿ ಕಳೆದ ನಾಲ್ಕು ತಿಂಗಳಿನಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಯಾವ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ ಎನ್ನುವುದರ ಕುರಿತು ಒಂದು ಪಟ್ಟಿ ಇಲ್ಲಿದೆ ನೋಡಿ.

   ತಿಂಗಳು ಕೊವಿಡ್-19 ಪ್ರಕರಣಗಳ ಸಂಖ್ಯೆ

   ಮೇ. 1.5 ಲಕ್ಷ

   ಜೂನ್. 4 ಲಕ್ಷ

   ಜುಲೈ. 11 ಲಕ್ಷ

   ಆಗಸ್ಟ್. 19.9 ಲಕ್ಷ

   ಭಾರತದಲ್ಲಿ ಕೊವಿಡ್-19 ಸೋಂಕಿತರ ಸಾವಿನ ಪ್ರಮಾಣ

   ಭಾರತದಲ್ಲಿ ಕೊವಿಡ್-19 ಸೋಂಕಿತರ ಸಾವಿನ ಪ್ರಮಾಣ

   ಕಳೆದ ಆಗಸ್ಟ್ ತಿಂಗಳಿನಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯಷ್ಟೇ ಅಲ್ಲ. ಸೋಂಕಿತರ ಸಾವಿನ ಪ್ರಮಾಣದಲ್ಲೂ ಭಾರಿ ಏರಿಕೆ ಕಂಡು ಬಂದಿದೆ. ಈ ಹಿಂದೆ ದೇಶದಲ್ಲಿ ಕಂಡು ಬಂದ ಸಾವಿನ ಸಂಖ್ಯೆಯನ್ನು ಗಮನಿಸಿದಾಗ ಆಗಸ್ಟ್ ತಿಂಗಳಿನಲ್ಲೇ ಅತಿಹೆಚ್ಚು ಜನರು ಮಹಾಮಾರಿಗೆ ಬಲಿಯಾಗಿರುವುದು ಬೆಳಕಿಗೆ ಬಂದಿದೆ. ನಾಲ್ಕು ತಿಂಗಳಿನಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ ಎಷ್ಟರ ಮಟ್ಟಿಗೆ ಏರಿಕೆಯಾಗಿದೆ ಎನ್ನುವುದರ ಕುರಿತು ಪಟ್ಟಿ ಇಲ್ಲಿದೆ.

   ತಿಂಗಳು ಸಾವಿನ ಸಂಖ್ಯೆ

   ಮೇ. 4267

   ಜೂನ್. 11988

   ಜುಲೈ. 19122

   ಆಗಸ್ಟ್ 28859

   3ನೇ ಸ್ಥಾನದಲ್ಲಿ ಗುರುತಿಸಿಕೊಂಡಿದ್ದು ಏಕೆ ಭಾರತ?

   3ನೇ ಸ್ಥಾನದಲ್ಲಿ ಗುರುತಿಸಿಕೊಂಡಿದ್ದು ಏಕೆ ಭಾರತ?

   ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸೋಂಕಿಗೆ ಬಲಿಯಾದವರ ಸಂಖ್ಯೆಯು ಏರಿಕೆಯಾಗುತ್ತಿದೆ. ಆಗಸ್ಟ್ ತಿಂಗಳಿನಲ್ಲಿ ಮಹಾಮಾರಿಗೆ ಅತಿಹೆಚ್ಚು ಪ್ರಾಣ ಬಿಟ್ಟವರ ಸಂಖ್ಯೆಯಲ್ಲಿ ಭಾರತವು ಮೂರನೇ ಸ್ಥಾನದಲ್ಲಿದೆ. ಅಮೆರಿಕಾದಲ್ಲಿ ಕೊವಿಡ್-19 ಸೋಂಕಿಗೆ ಆಗಸ್ಟ್ ತಿಂಗಳಿನಲ್ಲಿ 31 ಸಾವಿರ ಜನರು ಪ್ರಾಣ ಬಿಟ್ಟಿದ್ದರೆ, ಬ್ರೆಜಿಲ್ ನಲ್ಲಿ ಮಹಾಮಾರಿಗೆ 29565 ಜನರು ಬಲಿಯಾಗಿದ್ದಾರೆ. ಇನ್ನು, ಭಾರತದಲ್ಲಿ ಕೊರೊನಾವೈರಸ್ ಸೋಂಕಿಗೆ ಒಂದು ತಿಂಗಳಿನಲ್ಲಿ 28859 ಜನರು ಅಸುನೀಗಿದ್ದಾರೆ.

   English summary
   India Set Global Coronavirus Record: Nearly 2 Million Cases Reported In August.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X