ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತಕ್ಕೆ ಮೇ 1ರಂದು ಮೊದಲ ಹಂತದ ರಷ್ಯಾದ ಸ್ಪುಟ್ನಿಕ್ V ಲಸಿಕೆ ಸರಬರಾಜು

|
Google Oneindia Kannada News

ನವದೆಹಲಿ, ಏಪ್ರಿಲ್ 27: ಭಾರತಕ್ಕೆ ಮೇ 1 ರಂದು ಮೊದಲ ಹಂತದ ರಷ್ಯಾದ ಸ್ಪುಟ್ನಿಕ್ V ಲಸಿಕೆ ಸರಬರಾಜಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಆದರೆ ಎಷ್ಟು ಪ್ರಮಾಣದ ಲಸಿಕೆಗಳನ್ನು ಸರಬರಾಜು ಮಾಡುತ್ತಿದೆ ಎನ್ನುವ ಕುರಿತು ಮಾಹಿತಿ ನೀಡಿಲ್ಲ. ಭಾರತವು ಕೊರೊನಾ ಎರಡನೇ ಅಲೆಯನ್ನು ಎದುರಿಸುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 3,23,144 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.

ದೇಶದಲ್ಲಿ ಕೊರೊನಾ ಕೊಂಚ ಇಳಿಕೆ; 3,23,144 ಪ್ರಕರಣ ದಾಖಲುದೇಶದಲ್ಲಿ ಕೊರೊನಾ ಕೊಂಚ ಇಳಿಕೆ; 3,23,144 ಪ್ರಕರಣ ದಾಖಲು

2771 ಮಂದಿ ಸಾವನ್ನಪ್ಪಿದ್ದಾರೆ, 2,51,827 ಮಂದಿ ಡಿಸ್ಚಾರ್ಜ್ ಆಗಿದ್ದಾರೆ, ಒಟ್ಟು 1,76,36,307 ಸಕ್ರಿಯ ಪ್ರಕರಣಗಳಿವೆ.ಬ್ರಿಟನ್, ಜರ್ಮನಿ, ಫ್ರಾನ್ಸ್ ಹಾಗೂ ಅಮೆರಿಕವು ವೈದ್ಯಕೀಯ ಉಪಕರಣಗಳನ್ನು ಒದಗಿಸುವುದಾಗಿ ಭಾರತಕ್ಕೆ ಭರವಸೆ ನೀಡಿವೆ.

India To Receive First Batch Of Russias Sputnik V Covid Vaccine On May 1

ಸ್ಪುಟ್ನಿಕ್ V ಮೊದಲ ಬ್ಯಾಚ್‌ನ ಲಸಿಕೆಯನ್ನು ಮೇ 1 ರಂದು ಭಾರತಕ್ಕೆ ಸರಬರಾಜು ಮಾಡಲಾಗುವುದು ಎಂದು ಆರ್‌ಡಿಐಎಫ್ ಕಿರಿಲ್ ಡಿಮಿಟ್ರಿವ್ ತಿಳಿಸಿದ್ದಾರೆ. ರಷ್ಯಾದ ಲಸಿಕೆ ಸರಬರಾಜು ನೆರವು ಭಾರತ ಕೊರೊನಾ ಸೋಂಕಿನಿಂದ ಹೊರ ಬರಲು ದಾರಿ ತೋರಿಸಲಿದೆ ಎಂಬ ವಿಶ್ವಾಸ ಇರುವುದಾಗಿ ಡಿಮಿಟ್ರಿವ್ ಹೇಳಿದ್ದಾರೆ.

ದೇಶದಲ್ಲಿ ಇದುವರೆಗೂ ಕೊರೊನಾ ಸೋಂಕಿನಿಂದ 1,45,56,209 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 1,97,894 ಮಂದಿ ಮೃತಪಟ್ಟಿದ್ದಾರೆ. ಜನವರಿ 16ರಿಂದ ಏಪ್ರಿಲ್ 26ರವರೆಗೆ14,52,71,186 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.

ಏಪ್ರಿಲ್ 26ರವರೆಗೆ 28,09,79,877 ಮಾದರಿಗಳ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದೆ. ಏಪ್ರಿಲ್ 26ರ ಸೋಮವಾರ 16,58,700 ಮಾದರಿಗಳ ಕೊರೊನಾ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್‌ ಹೇಳಿದೆ.

ಕರ್ನಾಟಕದಲ್ಲಿ ಕೊರೊನಾ ಪ್ರಕರಣ: ರಾಜ್ಯದಲ್ಲಿ ಸೋಮವಾರ 29744 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 201 ಮಂದಿ ಸೋಂಕಿಗೆ ಬಲಿಯಾಗಿದ್ದರೆ, ಇದೇ ಅವಧಿಯಲ್ಲಿ 10663 ಸೋಂಕಿತರು ಗುಣಮುಖರಾಗಿದ್ದಾರೆ.

English summary
India will receive a first batch of Russia's Sputnik V vaccine against COVID-19 on May 1, the head of the Russia's sovereign wealth fund.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X