ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ಟೋಬರ್‌ನಿಂದ ದೇಶದಲ್ಲಿ ಹೆಚ್ಚುವರಿ ಕೋವಿಡ್ ಲಸಿಕೆ ರಫ್ತು ಪುನಾರಂಭ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 20: ಬರುವ ಅಕ್ಟೋಬರ್‌ನಿಂದ ದೇಶದಲ್ಲಿ ಹೆಚ್ಚುವರಿ ಕೋವಿಡ್ ಲಸಿಕೆ ರಫ್ತು ಪುನರಾರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ.

ಈ ವರ್ಷದ ಏಪ್ರಿಲ್‌ನಲ್ಲಿ ಕೋವಿಡ್ ಎರಡನೇ ಅಲೆಯಿಂದ ತತ್ತರಿಸಿದ ಭಾರತ ಕೋವಿಡ್ ಲಸಿಕೆಗಳ ರಫ್ತನ್ನು ಹಠಾತ್ತಾಗಿ ಸ್ಥಗಿತಗೊಳಿಸಿತ್ತು. ಈಗ ಅದನ್ನು ಮತ್ತೆ ಅಕ್ಟೋಬರ್‌ನಿಂದ ಆರಂಭಿಸಲಾಗುವುದು ಎಂದರು.

5-11 ವಯಸ್ಸಿನ ಮಕ್ಕಳಿಗೆ ಫೈಜರ್ ಸುರಕ್ಷಿತವೆಂದ ಪ್ರಯೋಗ5-11 ವಯಸ್ಸಿನ ಮಕ್ಕಳಿಗೆ ಫೈಜರ್ ಸುರಕ್ಷಿತವೆಂದ ಪ್ರಯೋಗ

ನಮ್ಮ ಧ್ಯೇಯವಾಕ್ಯವಾದ ವಸುಧೈವ ಕುಟುಂಬಕಂಗೆ ಅನುಗುಣವಾಗಿ ಕೋವಿಡ್ ಲಸಿಕೆ ರಫ್ತು ಮಾಡಲಾಗುವುದು ಎಂದು ಮಾಂಡವೀಯ ಹೇಳಿದ್ದಾರೆ.

India To Resume Export Of Covid Jabs Under Vaccine Maitri In October: Centre

ಅಕ್ಟೋಬರ್‌ನಲ್ಲಿ ಕೇಂದ್ರವು ವಿವಿಧ ಲಸಿಕೆ ತಯಾರಕರಿಂದ 30 ಕೋಟಿ ಪೂರೈಕೆಯನ್ನು ನಿರೀಕ್ಷಿಸುತ್ತಿದೆ. ಇದು ಮುಂದಿನ ತಿಂಗಳುಗಳಲ್ಲಿ ಕೋವಿಡ್ ಲಸಿಕೆ ಲಭ್ಯತೆ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವರು ಹೇಳಿದ್ದಾರೆ.

ಅಕ್ಟೋಬರ್ 2021 ರಿಂದ ಆರಂಭವಾಗುವ ನಾಲ್ಕನೇ ತ್ರೈಮಾಸಿಕದಲ್ಲಿ "ಲಸಿಕೆ ಮೈತ್ರಿ" ಕಾರ್ಯಕ್ರಮದ ಅಡಿಯಲ್ಲಿ ಲಸಿಕೆಯ ರಫ್ತು ಪುನರಾರಂಭವಾಗಲಿದೆ ಎಂದು ಮಾಂಡವಿಯಾ ಅವರು ತಿಳಿಸಿದ್ದಾರೆ.

ಭಾರತೀಯರಿಗೆ ಕೋವಿಡ್ ಲಸಿಕೆ ನೀಡುವುದು ಕೇಂದ್ರ ಸರ್ಕಾರದ ಮೊದಲ ಆದ್ಯತೆಯಾಗಿದೆ. ಆದರೆ ಹೆಚ್ಚುವರಿ ಕೋವಿಡ್ ಲಸಿಕೆಯನ್ನು ರಫ್ತು ಮಾಡಲಾಗುವುದು. "ಕೋವ್ಯಾಕ್ಸ್ ಬಗ್ಗೆ ಭಾರತದ ಬದ್ಧತೆಯನ್ನು ಪೂರೈಸುವ ಸಲುವಾಗಿ ಭಾರತ "ಲಸಿಕೆ ಮೈತ್ರಿ" ಅಡಿಯಲ್ಲಿ ಲಸಿಕೆಗಳ ರಫ್ತನ್ನು ಪುನರಾರಂಭಿಸಲಿದೆ ಎಂದಿದ್ದಾರೆ.
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 79.58 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಹೇಳಿದೆ.

ಈವರೆಗೆ ಕೇಂದ್ರವು ರಾಜ್ಯಗಳಿಗೆ 79.58 (79,58,74,395) ಕೋಟಿ ಪ್ರಮಾಣದಷ್ಟು ಲಸಿಕೆ ಪೂರೈಸಿದ್ದು, ಪ್ರಸ್ತುತ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಳಕೆಯಾಗದ ಒಟ್ಟು 5,43,43,490 ಕೋಟಿ ಡೋಸ್ ಕೋವಿಡ್ ಲಸಿಕೆಗಳಿವೆ ಎಂದು ಹೇಳಿದೆ.

ಇನ್ನು ಕೆಲವೇ ದಿನಗಳಲ್ಲಿ 15,51,940 ಡೋಸ್ ಲಸಿಕೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದೆ. ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್‌ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 80,85,68,144 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

English summary
India will resume its Vaccine Maitri initiative in October, Union Health Minister Mansukh Mandaviya said on Monday. The central government had supplied over 66 million doses of Covid-19 vaccines to more than 70 countries as part of the Vaccine Maitri initiative earlier this year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X