ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಕ್ ರಾಜತಾಂತ್ರಿಕರಿಗೆ ಸಮನ್ಸ್ ನೀಡಲು ಮುಂದಾದ ಭಾರತ

|
Google Oneindia Kannada News

ನವದೆಹಲಿ, ನವೆಂಬರ್ 14: ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಕದನ ವಿರಾಮ ಉಲ್ಲಂಘನೆ ಮಾಡಿ ನಾಗರಿಕರು ಮತ್ತು ಸೈನಿಕರ ಜೀವ ತೆಗೆದ ಘಟನೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ರಾಜತಾಂತ್ರಿಕರಿಗೆ ಸಮನ್ಸ್ ಮಾಡಲು ಭಾರತ ಮುಂದಾಗಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ಪಿಎಐ (ಪಾಕಿಸ್ತಾನ, ಅಫ್ಘಾನಿಸ್ತಾನ, ಇರಾನ್ ಡೆಸ್ಕ್) ಜೆಪಿ ಸಿಂಗ್ ಅವರು ಪಾಕಿಸ್ತಾನದ ಹೈಕಮಿಷನ್‌ನಲ್ಲಿನ ರಾಜತಾಂತ್ರಿಕರ ಮುಂದೆ ಪ್ರಬಲ ಪ್ರತಿಭಟನೆ ಮಂಡಿಸಲಿದ್ದಾರೆ.

ಎಲ್‌ಒಸಿಯಲ್ಲಿ ಪಾಕ್ ಕದನ ವಿರಾಮ ಉಲ್ಲಂಘನೆ: ನಾಗರಿಕರು ಸೇರಿ ಐವರ ಸಾವುಎಲ್‌ಒಸಿಯಲ್ಲಿ ಪಾಕ್ ಕದನ ವಿರಾಮ ಉಲ್ಲಂಘನೆ: ನಾಗರಿಕರು ಸೇರಿ ಐವರ ಸಾವು

ಪಾಕಿಸ್ತಾನದ ಹೈಕಮಿಷನ್, ತನ್ನ ಚಾರ್ಜ್ ಡಿ ಅಫೇರ್ಸ್ ಜಾವಾದ್ ಅಲಿ (ಕೌನ್ಸೆಲರ್) ಅವರು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿಸಿದೆ.

India To Summon Pakistani Diplomat Over LOC Ceasefire Violation

ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಉರಿ ವಲಯದ ಗುರೆಜ್‌ನಲ್ಲಿನ ಎಲ್‌ಒಸಿಯಲ್ಲಿ ಕದನ ವಿರಾಮ ಉಲ್ಲಂಘನೆ ನಡೆಸಿದ ಪಾಕಿಸ್ತಾನದ ಸೇನೆ ಅಪ್ರಚೋದಿತ ದಾಳಿ ನಡೆಸಿತ್ತು. ಇದರಲ್ಲಿ ನಾಲ್ವರು ಸೈನಿಕರು ಮತ್ತು ಐದು ಮಂದಿ ನಾಗರಿಕರು ಮೃತಪಟ್ಟಿದ್ದರು. ಇದಕ್ಕೂ ಮುನ್ನ ಕೂಡ ಪಾಕಿಸ್ತಾನ ಹಲವು ಬಾರಿ ಕದನ ವಿರಾಮ ಉಲ್ಲಂಘನೆ ನಡೆಸಿತ್ತು. ಈ ದಾಳಿಗೆ ಪ್ರತೀಕಾರವಾಗಿ ದಾಳಿ ನಡೆಸಿದ್ದ ಭಾರತವು ಪಾಕ್ ಸೇನೆಯ 11 ಸೈನಿಕರನ್ನು ಹತ್ಯೆ ಮಾಡಿತ್ತು.

ಭಾರತದ ಪ್ರತೀಕಾರಕ್ಕೆ ಪಾಕಿಸ್ತಾನದ 11 ಸೈನಿಕರ ಸಾವು: ಭಾರತೀಯ ರಾಯಭಾರಿಗೆ ಸಮನ್ಸ್ ಜಾರಿಭಾರತದ ಪ್ರತೀಕಾರಕ್ಕೆ ಪಾಕಿಸ್ತಾನದ 11 ಸೈನಿಕರ ಸಾವು: ಭಾರತೀಯ ರಾಯಭಾರಿಗೆ ಸಮನ್ಸ್ ಜಾರಿ

ಈ ಘಟನೆ ಬಗ್ಗೆ ಚರ್ಚಿಸಲು ಪಾಕಿಸ್ತಾನದ ವಿದೇಶಾಂಗ ಕಚೇರಿಯು ಭಾರತದ ರಾಜತಾಂತ್ರಿಕರಿಗೆ ಸಮನ್ಸ್ ಮಾಡಿತ್ತು.

English summary
India will summon Pakistani diplomat over ceasefire violation in Jammu and Kashmir.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X