ಮಧ್ಯಪ್ರದೇಶ ಚುನಾವಣೆ 2023; ಬಿಜೆಪಿಗೆ 162 ಸ್ಥಾನಗಳು

ಭೋಪಾಲ್, ನವೆಂಬರ್ 30: ಮಧ್ಯಪ್ರದೇಶ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದು India Today-Axis My India ಚುನಾವಣೋತ್ತರ ಸಮೀಕ್ಷೆ ಹೇಳಿದೆ. ರಾಜ್ಯದ ಚುನಾವಣೆಯ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ.

ಗುರುವಾರ ಸಂಜೆ ವಿವಿಧ ಸಂಸ್ಥೆಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶ ಪ್ರಕಟವಾಗಿವೆ. ಡಿಸೆಂಬರ್ 3ರ ಭಾನುವಾರ ಮತ ಎಣಿಕೆ ನಡೆಯಲಿದೆ. ಮಧ್ಯಪ್ರದೇಶ ರಾಜ್ಯದ ಒಟ್ಟು ವಿಧಾನಸಭಾ ಕ್ಷೇತ್ರಗಳು 230. ರಾಜ್ಯದಲ್ಲಿ ಅಧಿಕಾರ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 116.

India Today Axis My India Exit Poll Results For Madhya Pradesh Assembly Election 2023

ನವೆಂಬರ್ 17ರ ಶುಕ್ರವಾರ ಒಂದೇ ಹಂತದಲ್ಲಿ ರಾಜ್ಯದಲ್ಲಿ ದಾಖಲೆಯ 76.22ರಷ್ಟು ಮತದಾನವಾಗಿತ್ತು. ಇಂದು ಚುನಾವಣೋತ್ತರ ಸಮೀಕ್ಷೆ ಫಲಿತಾಂಶ ಪ್ರಕಟವಾಗುತ್ತಿದೆ. India Today-Axis My India ಸಮೀಕ್ಷೆಯ ಪ್ರಕಾರ ಬಿಜೆಪಿ 140-162 ಸ್ಥಾನಗಳಲ್ಲಿ ಜಯಗಳಿಸಲಿದೆ.

ಚುನಾವಣಾ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ 68-90 ಕ್ಷೇತ್ರಗಳಲ್ಲಿ ಮತ್ತು ಇತರರು 0 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ. ಮಧ್ಯಪ್ರದೇಶ ರಾಜ್ಯದಲ್ಲಿ 2018ರ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಕಾಂಗ್ರೆಸ್‌ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿತ್ತು. ಎಸ್ಪಿ, ಬಿಎಸ್‌ಪಿ ಜೊತೆ ಸೇರಿ ಪಕ್ಷ ಸರ್ಕಾರ ರಚನೆ ಮಾಡಿತ್ತು.

ಆದರೆ 2020ರಲ್ಲಿ ಜ್ಯೋತಿರಾಧಿತ್ಯ್ ಸಿಂಧಿಯಾ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. ಆಗ ಅವರ ಬೆಂಬಲಿಗ ಶಾಸಕರು ಕಾಂಗ್ರೆಸ್ ಬಿಟ್ಟಿದ್ದರಿಂದ ಸರ್ಕಾರ ಪತನಗೊಂಡು ಮುಖ್ಯಮಂತ್ರಿ ಕಮಲ್‌ ನಾಥ್ ರಾಜೀನಾಮೆ ನೀಡಬೇಕಾಯಿತು. ಬಳಿಕ ಬಿಜೆಪಿ ಅಧಿಕಾರಕ್ಕೆ ಬಂದಿತು. ಶಿವರಾಜ್ ಸಿಂಗ್ ಚೌವ್ಹಾಣ್ ಮುಖ್ಯಮಂತ್ರಿಯಾದರು.

ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 116. ಬಿಜೆಪಿ ರಾಜ್ಯದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡದೇ ಚುನಾವಣೆ ಎದುರಿಸಿದೆ. ಚುನಾವಣೋತ್ತರ ಸಮೀಕ್ಷೆಯಂತೆ ಬಿಜೆಪಿಗೆ ಸರಳ ಬಹುಮತ ಸಿಕ್ಕಿದರೆ ಮುಖ್ಯಮಂತ್ರಿ ಯಾರು? ಎಂದು ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+