India Weather: ಈ ಭಾಗಗಳಲ್ಲಿ ಧಾರಾಕಾರ ಮಳೆ, ಪ್ರವಾಹ: ರೆಡ್ ಅಲರ್ಟ್ ಘೋಷಿಸಿದ ಐಎಂಡಿ!

India Weather: ಸೈಕ್ಲೋಲ್ ಪ್ರಭಾವ ದೇಶದ ವಿವಿಧ ರಾಜ್ಯಗಳಲ್ಲಿ ಆಗುತ್ತಿದ್ದು, ಇದರಿಂದ ಬೆಂಗಳೂರು ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಅಲ್ಲದೇ ವಿವಿಧ ಪ್ರಮುಖ ನಗರಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆ ಆರ್ಭಟ ಶುರುವಾಗಿದೆ. ದೆಹಲಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಯಾವೆಲ್ಲಾ ಭಾಗದಲ್ಲಿ ಮಳೆ ಆರ್ಭಟ ಇದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ದೆಹಲಿಯಲ್ಲಿ ಕಳೆದ ಒಂದು ವಾರದಿಂದಲೂ ಮಳೆಯಾಗುತ್ತಿದ್ದು ಗುರುವಾರದಿಂದ ಮಳೆ ಆರ್ಭಟ ಜೋರಾಗಿದೆ. ನಿರಂತರ ಮಳೆಯಿಂದಾಗಿ ದೆಹಲಿ ಸೇರಿದಂತೆ ವಿವಿಧ ಭಾಗದಲ್ಲಿ ರಸ್ತೆಗಳು ಜಲಾವೃತವಾಗಿವೆ. ದೆಹಲಿಯಲ್ಲಿ ಕಳೆದ ಮೂರು ದಿನಗಳಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿತ್ತು. ಇದೀಗ ಇಂದಿನಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ನಿರಂತರ ಮಳೆಯಿಂದಾಗಿ ದೆಹಲಿಯಲ್ಲಿ ವಾಯುಮಾಲಿನ್ಯ ಕಡಿಮೆಯಾಗಿದೆ. ಅಲ್ಲದೇ ದೆಹಲಿಯಲ್ಲಿ ತಾಪಮಾನ ಪ್ರಮಾಣವೂ ಕಡಿಮೆಯಾಗಿದೆ.

India Weather Alert IMD Issues Red Warning for Heavy Rain and Flooding

ದೆಹಲಿ, ನೋಯ್ಡಾ ಹಾಗೂ ಗುರುಗ್ರಾಮ್ ಸೇರಿದಂತೆ ವಿವಿಧ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ಆಗುತ್ತಿದ್ದು ವಿವಿಧ ರಸ್ತೆಗಳು ಜಲಾವೃತವಾಗಿದ್ದು. ಜನ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಭಾಗದಲ್ಲಿ ಮಳೆಯಿಂದ ಜನ ಪರದಾಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ದೆಹಲಿ, ನೋಯ್ಡಾ, ಗಾಜಿಯಾಬಾದ್ ಸೇರಿದಂತೆ ಇತರ ಪ್ರದೇಶಗಳಲ್ಲಿ ಮಳೆ ಅಬ್ಬರ ಇದೆ. ಅಲ್ಲದೇ ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಹಿಮಾಚಲ ಪ್ರದೇಶ, ಉತ್ತರಾಖಂಡ ಹಾಗೂ ಮಧ್ಯಪ್ರದೇಶ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.

ದಕ್ಷಿಣ ಭಾರತದಲ್ಲಿ ಮಳೆ ಆರ್ಭಟ: ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಸೃಷ್ಟಿಯಾಗಿರುವುದರಿಂದ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಮಳೆ ಆರ್ಭಟ ಶುರುವಾಗಿದೆ. ತೆಲಂಗಾಣದಲ್ಲಿ ಭಾರೀ ಮಳೆ ಮುಂದುವರಿದಿದೆ. ಕಳೆದ 15 ದಿನಗಳಿಂದಲೂ ತೆಲಂಗಾಣದಲ್ಲಿ ಮಳೆ ಮುಂದುವರಿದಿದೆ. ತೆಲಂಗಾಣದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಹೈದರಾಬಾದ್‌ನ ಹಲವು ಪ್ರದೇಶಗಳು ಜಲಾವೃತವಾಗಿದ್ದು ವಿಮಾನಗಳ ಹಾರಾಟದಲ್ಲೂ ವ್ಯತ್ಯಾಸವಾಗಿರುವುದು ವರದಿಯಾಗಿದೆ.

ಬಿಹಾರದಲ್ಲಿ ಭಾರೀ ಮಳೆ: ಬಿಹಾರದಲ್ಲಿ ಈ ಬಾರಿ ಭಾರೀ ಮಳೆಯಾಗಿದ್ದು ಪ್ರವಾಹ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವೈಮಾನಿಕ ಸಮೀಕ್ಷೆ ಮಾಡಿದ್ದಾರೆ. ಇಲ್ಲಿನ 10 ಪ್ರಮುಖ ಜಿಲ್ಲೆಗಳಲ್ಲಿ 25 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಧಾರಾಕಾರ ಮಳೆಯಿಂದಾಗಿ ಈ ರಾಜ್ಯದಲ್ಲಿನ ನದಿಗಳು ಪ್ರವಾಹ ಮಟ್ಟವನ್ನು ಮೀರಿ ಉಕ್ಕಿ ಹರಿಯುತ್ತಿವೆ.

ಇನ್ನು ಹಿಮಾಚಲ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಹಲವು ಭಾಗದಲ್ಲಿ ಮೂಲಸೌಕರ್ಯಕ್ಕೆ ಹಾನಿಯಾಗಿದೆ. ಹಿಮಾಚಲ ಪ್ರದೇಶದಲ್ಲಿ ಭಾರೀ ಸಾವು ನೋವು ಸಂಭವಿಸಿದೆ. ಈ ರಾಜ್ಯದಲ್ಲಿ ಇದೇ ಜೂನ್‌ನಿಂದ ಇಲ್ಲಿಯ ವರೆಗೆ 241 ಜನ ಮೃತಪಟ್ಟಿದ್ದಾರೆ. 126 ಜನ ಮಳೆ ಅವಘಡಗಳಲ್ಲಿ ಸಾವನ್ನಪ್ಪಿದ್ದು, ರಸ್ತೆ ಅಪಘಾತಗಳಲ್ಲಿ 115 ಜನ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+