India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ
India Rain Forecast: ಭಾರತದಲ್ಲಿ ಬದಲಾದ ಹವಾಮಾನ ವೈಪರೀತ್ಯಗಳ ಪ್ರಭಾವದಿಂದಾಗಿ ದೇಶದ ನಾನಾ ಭಾಗಗಳಲ್ಲಿ ಬೇಸಿಗೆಯಲ್ಲೂ ಮಳೆ ಎಚ್ಚರಿಕೆ ನೀಡಲಾಗಿದೆ. ಭೂ ಮೇಲ್ಮೈ ಹಾಗೂ ಸಮುದ್ರ ಮೇಲ್ಮೈನಲ್ಲಿ ಸೃಷ್ಟಿಯಾಗಿರುವ ಚಂಡಮಾರುತ ಪ್ರಸರಣದಿಂದಾಗಿ ಪೂರ್ವ ಮುಂಗಾರು ಮಳೆ ಸುರಿಸುವ ಮಾರುತಗಳು ಸಕ್ರಿಯವಾಗಿವೆ. ಇದರಿಂದ ಕರ್ನಾಟಕ, ದೆಹಲಿ ಸೇರಿ ಅನೇಕ ರಾಜ್ಯಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆ ಮುನ್ಸೂಚನೆ ನೀಡಲಾಗಿದೆ.
ಭಾರತೀಯ ಹವಾಮಾನ ಇಲಾಖೆಯ (IMD) ಪ್ರಕಾರ ದೇಶದ ವಿವಿಧ ಭಾಗಗಳಲ್ಲಿ ಹವಾಮಾನ ವೈಪರೀತ್ಯ ಉಂಟಾಗಿದೆ. ಹಲವು ರಾಜ್ಯಗಳಲ್ಲಿ ಭಾರಿ ಮಳೆ ಹಾಗೂ ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಲಾಗಿದೆ. ಹರಿಯಾಣ, ಗುಜರಾತ್, ರಾಜಸ್ಥಾನ, ಮಧ್ಯ ಪ್ರದೇಶ ಭಾಗದಲ್ಲಿ 1.5 ಕಿಲೋ ಮೀಟರ್ ಉತ್ತರ ಪ್ರದೇಶದಲ್ಲಿ 0.9 ಕಿಮೀ, ಲಕ್ಷದ್ವೀಪ 3.1ಕೀಲೋ ಮೀಟರ್, ಆಂಧ್ರ ಪ್ರದೇಶ ಕರಾವಳಿಗೆ ದೂರದಲ್ಲಿ ಬಂಗಾಳಕೊಲ್ಲಿ ಭಾಗದಲ್ಲಿ ಚಂಡಮಾರುತ ಪ್ರಸರಣ, ತೀವ್ರ ಗಾಳಿ ಉಂಟಾಗಿದೆ. ಇದರ ಪ್ರಭಾವದಿಂದ ಅಲ್ಲಲ್ಲಿ ಮಳೆ ಆಗುವ ಲಕ್ಷಣಗಳು ಎದ್ದು ಕಾಣುತ್ತಿವೆ.

ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ 3 ದಿನ ಭಾರಿ ಮಳೆ ಎಚ್ಚರಿಕೆ
ಇಂದಿನಿಂದ ಮುಂದಿನ ಮೂರು ದಿನ (ಮಾರ್ಚ್ 23ರವರೆಗೆ) ಉಪ-ಹಿಮಾಲಯದ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಿಂದ ಹಿಡಿದು ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಿಹಾರದ ವಿವಿಧ ಭಾಗಗಳಲ್ಲೂ ಗುಡುಗು ಮಿಂಚು ಸಹಿತ ಸಾಧಾರಣದಿಂದ ಭಾರೀ ಮಳೆಯ ಆಗಲಿದೆ. ಇದಲ್ಲದೆ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಸಹಿತ 5 ದಿನ ಆಲಿಕಲ್ಲು ಮಳೆಯಾಗುವ ಲಕ್ಷಣಗಳು ಇವೆ. ಐಎಂಡಿ ವಿಜ್ಞಾನಗಳಿಗೆ ಸಾರ್ವಜನಿಕರಿಗೆ ಅಗತ್ಯ ಎಚ್ಚರಿಕೆ ನೀಡಿದ್ದಾರೆ.
ಗುಡುಗು, ಮಿಂಚು ಸಹಿತ ವ್ಯಾಪಕ ಮಳೆ
ಇನ್ನೂ ಪಶ್ಚಿಮ ಬಂಗಾಳ, ಸಿಕ್ಕಿಂ ಹಾಗೂ ಒಡಿಶಾ ರಾಜ್ಯದಲ್ಲಿ ಗಾಳಿಯು ಗಂಟೆಗೆ 50-60 ಕಿ.ಮೀ ವೇಗದಲ್ಲಿ ಬೀಸಲಿದೆ. ಬಿಹಾರ, ಅಸ್ಸಾಂ, ಮೇಘಾಲಯ, ಕರಾವಳಿ ಆಂಧ್ರಪ್ರದೇಶ, ಜಾರ್ಖಂಡ್ ಹಾಗೂ ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಗಾಳಿ ಸಹಿತ ಗುಡುಗು ಮಿಂಚಿನೊಂದಿಗೆ ಮುಂದಿನ 48 ಗಂಟೆ ಸಾಧಾರಣದಿಂದ ಉತ್ತಮ ಮಳೆ ಸುರಿಯಲಿದೆ.
ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ ನಿರೀಕ್ಷೆ ಇದೆ. ರಾಜ್ಯದ ಒಳನಾಡಿನಲ್ಲಿ ಹಗಲು ಒಣಹವೆ ಕಂಡು ಬರಲಿದ್ದು, ಆಗಾಗ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚಿನೊಂದಿಗೆ ವರುಣ ಆರ್ಭಟಕ್ಕೆ ಸಾರ್ವಜನಿಕರು ಸಾಕ್ಷಿಯಾಗಲಿದ್ದಾರೆ. ಕರ್ನಾಟಕದೊಂದಿಗೆ ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ಸಾಮಾನ್ಯ ಮಳೆ ಆಗಲಿದೆ.
ಒಣಹವೆ ಎಚ್ಚರಿಕೆ
ಬೇಸಿಗೆ ನಡುವೆ ಅಕಾಲಿಕ ಮಳೆ ಆಗುತ್ತಿದೆ. ಆದರೆ ಇದು ಶಾಸ್ವತವಲ್ಲ. ದೆಹಲಿ, ಹರಿಯಾಣ, ಉತ್ತರ ಪ್ರದೇಶ, ಅಸ್ಸಾಂ, ಮಣಿಪುರ, ಮೇಘಾಲಯ, ಮಧ್ಯ ಪ್ರದೇಶ, ಗುಜರಾತ್, ಝಾರ್ಖಂಡ್, ಕರ್ನಾಟಕ, ಕೇರಳ ಸೇರಿದಂತೆ ದೇಶದ ಬಹುತೇಕ ಎಲ್ಲ ರಾಜ್ಯಗಳಲ್ಲಿ ಒಣಹವೆ ಪ್ರಮಾಣ ಹೆಚ್ಚಾಗುತ್ತಿದೆ. ಗರಿಷ್ಠ ತಾಪಮಾನದಲ್ಲಿ ಬದಲಾವಣೆ ಆಗುತ್ತಿದೆ. ಆದರೆ ಪೂರ್ವ ಮುಂಗಾರು ಮಳೆ ಆಗಮನದಿಂದ ಅಲ್ಲಲ್ಲಿ ಕೊಂಚ ಬಿಸಿಲು ತಗ್ಗಿದ್ದು ಬಿಟ್ಟರೆ ಉಳಿದೆಲ್ಲ ಒಣಹವೆ ವಾತಾವರಣ ದಾಖಲಾಗಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ













Click it and Unblock the Notifications