IMD Weather: ಹವಾಮಾನ ಬದಲಾವಣೆ, ಈ ಭಾಗಗಗಳಲ್ಲಿ ತೀವ್ರ ಚಳಿ ಮುನ್ಸೂಚನೆ, ಶೀತ ಅಲೆ
ನವದೆಹಲಿ: ಒಂದೆರಡು ಭಾಗಗಳಲ್ಲಿ ಮಳೆ ಆಗಿದ್ದು, ಬಿಟ್ಟರೆ ದೇಶದ ವಿವಿಧ ಭಾಗಗಳಲ್ಲಿ ಮುಂದಿನ ಐದು ದಿನಗಳಲ್ಲಿ ಶೀತ ಅಲೆ ಪ್ರಭಾವ ಹೆಚ್ಚಾಗಿರಲಿದೆ. ಹಲವೆಡೆ ದಟ್ಟ ಮಂಜು ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಹಾರದ ಪ್ರತ್ಯೇಕ ಸ್ಥಳಗಳಲ್ಲಿ ಶೀತ ವಾತಾವರಣ ತೀವ್ರಗೊಳ್ಳಲಿದೆ. ಜನರು ಆರೋಗ್ಯ ಕಾಳಜಿ ವಹಿಸಬೇಕಿದೆ.
ಮುಂದಿನ ಎರಡು ದಿನಬಿಹಾರ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ-ಲದಾಖ್-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಫರಾಬಾದ್, ನಾಗಾಲ್ಯಾಂಡ್, ಮಣಿಪುರ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ಮಿಜೋರಾಂ ಮತ್ತು ತ್ರಿಪುರ, ಒಡಿಶಾ ಹಾಗೂ ಉತ್ತರಾಖಂಡ್ನ ಪ್ರತ್ಯೇಕ ಸ್ಥಳಗಳಲ್ಲಿ ದಟ್ಟ ಮಂಜು ಆವರಿಸಲಿದೆ. ಮಬ್ಬು ವಾತಾವರಣ ಸಹಿತ ವ್ಯಾಪಕ ಚಳಿ ಕಂಡು ಬರಲಿದೆ. ಈ ಮಂಜು ರಸ್ತೆ ಸಂಚಾರ ಹಾಗೂ ವಾಯು ಸಂಚಾರದ ಮೇಲೆ ಪರಿಣಾಮ ಬೀರುವ ನಿರೀಕ್ಷೆ ಇದೆ.

ಡಿಸೆಂಬರ್ 27ರವರೆಗೆ ಮಧ್ಯಭಾರತ ಸೇರಿದಂತೆ ಕರ್ನಾಟಕ, ತೆಲಂಗಾಣ ಸೇರಿ ವಿವಿಧ ರಾಜ್ಯಗಳಲ್ಲಿ ಸಹ ಚಳಿ ಹೆಚ್ಚಾಗಲಿದೆ. ಹರಿಯಾಣ, ಚಂಡೀಗಢ ಮತ್ತು ದೆಹಲಿ, ಪಂಜಾಬ್ ಹಾಗೂ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ದಟ್ಟ ಮಂಜಿನ ವಾತಾವರಣ ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಪ್ರದೇಶಗಳಲ್ಲಿ ತಾಪಮಾನದಲ್ಲಿ ಇನ್ನಷ್ಟು ಕುಸಿತವಾಗುವ ಲಕ್ಷಣಗಳು ಇವೆ. ಸೊಮಾಲಿಯಾ ಕರಾವಳಿ ಮತ್ತು ಪಕ್ಕದ ಸಮುದ್ರ ಪ್ರದೇಶಗಳು, ಕೊಮೊರಿನ್ ಪ್ರದೇಶ ಹಾಗೂ ಮನ್ನಾರ್ ಕೊಲ್ಲಿಯ ಕೆಲವು ಭಾಗಗಳಲ್ಲಿ ಗಂಟೆಗೆ 45 ಕಿಲೋ ಮೀಟರ್ನಿಂದ 55 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಐಎಂಡಿ ತಿಳಿಸಿದೆ.
ಹವಾಮಾನ ವೈಪರೀತ್ಯಗಳ ಅಪ್ಡೇಟ್ಸ್
ಹವಾಮಾನ ವೈಪರೀತ್ಯಗಳನ್ನು ನೋಡುವುದಾದರೆ ಬಂಗಾಳಕೊಲ್ಲಿ ಸಮುದ್ರ ಮೇಲ್ಮೈ ಮಟ್ಟದಿಂದ ಸುಮಾರು 5.8 ಕಿ.ಮೀ ಎತ್ತರದಲ್ಲಿ ಸುಳಿಗಾಳಿ ನಿರ್ಮಾಣವಾಗಿದೆ. ಅರಬ್ಬಿ ಸಮುದ್ರದ ಕಡೆಗೆ ಸಮುದ್ರ ಮಟ್ಟದಿಂದ 12.6 ಕಿ.ಮೀ ಎತ್ತರದಲ್ಲಿ, ಬಿರುಗಾಳಿ ಎದ್ದಿದೆ. ಇದು ಉತ್ತರ ಭಾರತದ ಮೇಲೆ ಸಕ್ರಿಯವಾಗಿದೆ. ಇದರ ಪರಿಣಾಮವಾಗಿ ಉತ್ತರ ಭಾರತದ ಹವಾಮಾನದಲ್ಲಿ ಬದಲಾವಣೆಗಳು ಆಗಲಿವೆ. ಜಮ್ಮು ಕಾಶ್ಮೀರ ಭಾಗದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ. ಉಳಿದಂತೆ ದಟ್ಟು ಮಂಜು, ಚಳಿ ಆವರಿಸಲಿದೆ.
ಚಂಡಮಾರುತ ಪ್ರಸರಣ
ಕೊಮೊರಿನ್ ಪ್ರದೇಶ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಚಂಡಮಾರುತದ ಪ್ರಸರಣ ನಿರ್ಮಾಣವಾಗಿದೆ. ಇದರ ಪ್ರಭಾವ ದಕ್ಷಿಣ ಭಾರತದ ಕರಾವಳಿ ಭಾಗಗಳಲ್ಲಿ ತಂಪು ವಾತಾವರಣ ಉಂಟಾಗಲಿದೆ. ಇದರೊಂದಿಗೆ ಹಗಲು ಹೊತ್ತು ದೇಶಾದ್ಯಂತ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications