India weather forecast: ಭಾರತದ ಈ 7 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ- ಎಲ್ಲೆಲ್ಲಿ ತಿಳಿಯಿರಿ
ಕಳೆದ 24 ಗಂಟೆಗಳಲ್ಲಿ ಪಶ್ಚಿಮ ಮತ್ತು ಉತ್ತರ ಅಸ್ಸಾಂನ ಹಲವಾರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಅರುಣಾಚಲ ಪ್ರದೇಶದ ಗಡಿಯಲ್ಲಿರುವ ಉತ್ತರ ಅಸ್ಸಾಂನ ಹಲವಾರು ಗ್ರಾಮಗಳು ಪ್ರವಾಹಕ್ಕೆ ಸಿಲುಕಿವೆ. ಏಳು ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಅಸ್ಸಾಂನ ಧೇಮಾಜಿ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಸುಮಾರು 1,500 ಜನರು ತೊಂದರೆಗೀಡಾಗಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್‌ಡಿಎಂಎ) ತಿಳಿಸಿದೆ.

ಬುಧವಾರ ಬೆಳಗ್ಗೆ 8.30 ರಿಂದ ಗುರುವಾರ ಬೆಳಗ್ಗೆ 8.30 ರ ವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಿದೆ ಎಂದು ಐಎಂಡಿ ಹೇಳಿದೆ. ಐದು ಜಿಲ್ಲೆಗಳಿಗೆ ಶುಕ್ರವಾರ ಬೆಳಗ್ಗೆ 8.30ರ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಅಸ್ಸಾಂನ ಇತರ ಮೂರು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಶುಕ್ರವಾರ ಬೆಳಗಿನ ತನಕ ಗೋಲ್ಪಾರಾ, ಬಕ್ಸಾ ಮತ್ತು ಬರ್ಪೇಟಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶುಕ್ರವಾರ ಬೆಳಗ್ಗೆಯಿಂದ ಶನಿವಾರ ಬೆಳಗ್ಗೆ ವರೆಗೆ ಆರು ಜಿಲ್ಲೆಗಳಲ್ಲಿ ಅರೆಂಜ್ ಅಲರ್ಟ್ ಇರಲಿದೆ. ಕೋಕ್ರಜಾರ್, ದಕ್ಷಿಣ ಸಲ್ಮಾರಾ, ಚಿರಾಂಗ್, ಬಕ್ಸಾ, ಬಾರ್ಪೇಟಾ ಮತ್ತು ಧುಬ್ರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ ಮಿಜೋರಾಂ ಮತ್ತು ತ್ರಿಪುರಾ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಸ್ಸಾಂ-ಮೇಘಾಲಯಕ್ಕೆ ಅರೇಂಜ್ ಅಲರ್ಟ್ ನೀಡಲಾಗಿದೆ.
ಭಾರತದ ಹಲವು ರಾಜ್ಯಗಳಲ್ಲಿ ನಾಳೆ ಮಳೆ
ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.
ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ಸಾಕಷ್ಟು ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ, ಒಡಿಶಾ, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಲಕ್ಷದ್ವೀಪಗಳಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದಲ್ಲಿ ಮಳೆ
ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ದಾವಣಗೆರೆ, ಉಡುಪಿ, ಶಿವಮೊಗ್ಗ, ಗದಗ, ಹಾವೇರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ ಇದೆ.
ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಲಘು ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅಕ್ಟೋಬರ್ 8 ರಿಂದ 21 ರ ವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಘಟ್ಟಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications