India Weather forecast: ದೇಶದ ಈ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಸುನಾಮಿ ಮಳೆ ಮುನ್ಸೂಚನೆ -ಮಾಹಿತಿ

ನವದೆಹಲಿ, ನವೆಂಬರ್‌, 30: ಭಾರತದ ದಕ್ಷಿಣ ಭಾಗದ ಹಲವು ರಾಜ್ಯಗಳಲ್ಲಿ ಕಳೆದ ಒಂದು ವಾರದಿಂದಲೂ ಗುಡುಗು ಸಹಿತ ಅಬ್ಬರದ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ದೇಶದ ಹಲವು ಭಾಗಗಳಲ್ಲಿ ಸುನಾಮಿಯಂತಹ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಈಗಾಗಲೇ ಕೇರಳ, ತಮಿಳುನಾಡು ರಾಜ್ಯದಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಚೈನ್ನೈನ ಕೆಲವು ಕಡೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಗೆಯೇ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ.

India Weather forecast: Heavy rainfall forecast in these states For the next three days: IMD

ಆಗ್ನೇಯ ಬಂಗಾಳ ಕೊಲ್ಲಿ ಮತ್ತು ದಕ್ಷಿಣ ಅಂಡಮಾನ್ ಸಮುದ್ರದ ಪಕ್ಕದಲ್ಲಿರುವ ಕಡಿಮೆ ಒತ್ತಡದ ಪ್ರದೇಶದಲ್ಲಿ ಇಂದು (ನವೆಂಬರ್‌ 30) ವಾಯುಭಾರ ಕುಸಿತವಾಗಿ ಮಳೆರಾಯನ ಆರ್ಭಟ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಮುಂದಿನ ಮೂರು ದಿನಗಳ ಕಾಲ ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನೂ ಸಹ ನೀಡಿದೆ.

ಇನ್ನು ಇಂದು (ನವೆಂಬರ್‌ 30) ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಸೇರಿದಂತೆ ಹಲವು ಭಾಗಗಳಿಗೆ ಹವಾಮಾನ ಇಲಾಖೆ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದೆ. ಅದರಲ್ಲೂ ನಿಕೋಬಾರ್ ದ್ವೀಪಗಳ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಭಾರೀ ಮಳೆ ಹಿನ್ನೆಲೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ತಮಿಳುನಾಡು ಕರಾವಳಿಯಿಂದ ಒಡಿಶಾ ಕರಾವಳಿಯ ಭಾಗಕ್ಕೆ ಮರಳಲು ಸೂಚಿಸಲಾಗಿದೆ.

ನವದೆಹಲಿ: ನವದೆಹಲಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಇನ್ನು ಇಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 24 ಮತ್ತು 13 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ. ಬುಧವಾರ ಗರಿಷ್ಠ 26.3 ಮತ್ತು ಕನಿಷ್ಠ ತಾಪಮಾನ 11.7 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು ಎಂದು ತಿಳಿಸಿದೆ.

ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ: ಕೋಲ್ಕತ್ತಾದಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಮತ್ತು 21 ಡಿಗ್ರಿ ಸೆಲ್ಸಿಯಸ್‌ನಷ್ಟಿರುತ್ತದೆ. ಅಲ್ಲದೆ ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದ ಹಲವು ಜಿಲ್ಲೆಗಳಲ್ಲಿ ಒಣ ಹವೆಯಂತಹ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ತಮಿಳುನಾಡು: ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಭಾಗದಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಚೆಂಗಲ್ಪಟ್ಟು, ಕಾಂಚೀಪುರಂ, ಕಡಲೂರು, ವಿಲ್ಲುಪುರಂ, ಮೈಲಾಡುತುರೈ, ತಂಜಾವೂರು, ತಿರುವರೂರ್, ನಾಗಪಟ್ಟಿಣಂ, ಪುದುಕೊಟ್ಟೈ ಮತ್ತು ತಮಿಳುನಾಡಿನ ರಾಮನಾಥಪುರಂ ಜಿಲ್ಲೆಗಳು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ಎಚ್ಚರಿಕೆ ಸಂದೇಶಯವನ್ನು ರವಾನಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+