India Weather forecast: ಮುಂಗಾರು ಕೊನೆಗೊಂಡರೂ ಭಾರತದ ಈ ರಾಜ್ಯಗಳಲ್ಲಿ ಮಳೆ- ಮಾಹಿತಿ, ವಿವರ
ನೈರುತ್ಯ ಮಾನ್ಸೂನ್ ಭಾರತದಲ್ಲಿ ಕೊನೆಯ ಹಂತದಲ್ಲಿದೆ. ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ, ಒಡಿಶಾ ಮತ್ತು ತೆಲಂಗಾಣಗಳಲ್ಲಿ ಮುಂದಿನ ಕೆಲ ದಿನಗಳಲ್ಲಿ ಮಳೆಯಾಗಲಿದೆ. ಆ ಬಳಿಕ ಮಳೆಗಾಲವು ಭಾರತದಲ್ಲಿ ಪೂರ್ಣವಾಗಿ ಅಂತ್ಯವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ಮತ್ತು ನಾಳೆ ದೇಶದ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಐಎಂಡಿ ಹೇಳಿದೆ.

ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ಸಾಕಷ್ಟು ವ್ಯಾಪಕವಾದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ಸಿಕ್ಕಿಂ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಉತ್ತರಾಖಂಡ, ಕರ್ನಾಟಕ, ಕೇರಳ ಮತ್ತು ತಮಿಳುನಾಡುಗಳಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆ ಬೀಳಬಹುದು.

ಲಡಾಖ್‌ನಲ್ಲಿ ಪ್ರತ್ಯೇಕವಾದ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರ್ನಾಟಕದಲ್ಲಿ ಮಳೆ
ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು ಮತ್ತು ಬೆಂಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಕ್ಟೋಬರ್ 8 ರಿಂದ 21 ರ ವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಘಟ್ಟಗಳಲ್ಲಿ ಭಾರೀ ಮತ್ತು ತೀವ್ರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು, ರಾಮನಗರ, ಉಡುಪಿ, ಉತ್ತರ ಕನ್ನಡ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆ ಸಂಭವವಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೇರಳದಲ್ಲಿ ಮಳೆ ಮುನ್ಸೂಚನೆ
ಮುಂದಿನ ಐದು ದಿನಗಳ ಕಾಲ ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 8 ರಂದು ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಮತ್ತು ಅಕ್ಟೋಬರ್ 9 ರಂದು ಮಲಪ್ಪುರಂ, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 10 ರ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೇರಳ, ಲಕ್ಷದ್ವೀಪ ಮತ್ತು ಕರ್ನಾಟಕ ಕರಾವಳಿಯಲ್ಲಿ ಮೀನುಗಾರಿಕೆ ನಡೆಸುವುದನ್ನು ತಪ್ಪಿಸಬೇಕು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇಂದು ಕನ್ಯಾಕುಮಾರಿ ಪ್ರದೇಶದ ದಕ್ಷಿಣ ಭಾಗಗಳಲ್ಲಿ ಗಂಟೆಗೆ 45 ರಿಂದ 65 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.












Click it and Unblock the Notifications