India weather forecast: ಭಾರತದ ಈ ರಾಜ್ಯಗಳಲ್ಲಿ ಭಾರೀ ಮಳೆ- ಎಲ್ಲೆಲ್ಲಿ, ಎಷ್ಟು, ಯಾವಾಗ? ಮಾಹಿತಿ, ವಿವರ
ನವದೆಹಲಿ, ನವೆಂಬರ್, 27: ಈಗಾಗಲೇ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಇಂದಿನಿಂದ ಇನ್ನೂ ಮೂರು-ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಎಷ್ಟು ಪ್ರಮಾಣದಲ್ಲಿ ಮಳೆ ಬೀಳಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಇಂದು (ನವೆಂಬರ್ 27) ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪ್ರತೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನೈಋತ್ಯ ಮಧ್ಯಪ್ರದೇಶದಲ್ಲಿ ಮಿಂಚು, ಬಿರುಗಾಳಿ ವೇಗವು ಗಂಟೆಗೆ 40-50 ಕಿ.ಮೀ.ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಮತ್ತು ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಆಗ್ನೇಯ ಮಧ್ಯಪ್ರದೇಶ ಕೆಲವೆಡೆ ಗಾಳಿಯ ವೇಗಲವು ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಇರಲಿದ್ದು, ಇಲ್ಲಿ ಕೂಡ ಆಲಿಕಲ್ಲು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ಉತ್ತರಾಖಂಡ ಮತ್ತು ಮರಾಠವಾಡದಲ್ಲಿ, ಕೇರಳ, ಹಿಮಾಚಲ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲೂ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇನ್ನು ಮಂಗಳವಾರ (ನವೆಂಬರ್ 28) ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನೈಋತ್ಯ ಮಧ್ಯಪ್ರದೇಶ, ಆಗ್ನೇಯ ಮಧ್ಯಪ್ರದೇಶ, ಉತ್ತರಾಖಂಡ ಮತ್ತು ಮರಾಠವಾಡ, ಕೇರಳ, ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿ, ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ, ಕೊಂಕಣದ ಪ್ರತ್ಯೇಕ ಸ್ಥಳಗಳಲ್ಲಿ, ಗೋವಾ, ಮಧ್ಯ ಮಹಾರಾಷ್ಟ್ರ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಮಳೆಯಾದ ಅಬ್ಬರಿಸಿ ಬೊಬ್ಬೆರೆಯಲಿದ್ದಾನೆ ಎಂದು ತಿಳಿಸಿದೆ.
ನವೆಂಬರ್ 27-29 ರ ಅವಧಿಯಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಇದೇ ವೇಳೆ ವಾಯುವ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ಮತ್ತು ನವೆಂಬರ್ 29ರವರೆಗೆ ಮಧ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ಕನಿಷ್ಠ ತಾಪಮಾನವು 2-3 ° Cರಷ್ಟು ಕುಸಿಯುವ ಸಾಧ್ಯತೆಯಿದೆ. ದೇಶದ ಉಳಿದ ಭಾಗಗಳಲ್ಲಿ ಹವಾಮಾನದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ.
ಇತ್ತೀಚೆಗಷ್ಟೇ ತಮಿಳುನಾಡು, ಕೇರಳ ರಾಜ್ಯಗಳ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾದ ಪರಿಣಾಮ ಅಲ್ಲಿನ ಜನಜೀವನ ಅಸ್ತವ್ಯಸ್ತವಾಗಿತ್ತು. ಸತತವಾಗಿ ಸುರಿದ ಭಾರೀ ಮಳೆಯಿಂದ ಚೆನ್ನೈನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇದೀಗ ನಿನ್ನೆ, ಮೊನ್ನೆ ಚೆನ್ನೈ, ಚೆಂಗಲ್ಪಟ್ಟು, ತಿರುವಳ್ಳೂರು, ಕಾಂಚೀಪುರಂ ಜಿಲ್ಲೆಗಳು ಮತ್ತು ವಿಲ್ಲುಪುರಂ ಮತ್ತು ಕಡಲೂರು ಜಿಲ್ಲೆಗಳ ಕರಾವಳಿ ಪ್ರದೇಶಗಳು ಮತ್ತು ಪುದುಚೇರಿ ಪ್ರದೇಶದಲ್ಲಿ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆ ಬಿದ್ದಿದೆ ಎಂದು ತಿಳಿದುಬಂದಿದೆ.
ಇನ್ನು ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು (ನವೆಂಬರ್ 27) ಮಳೆರಾಯ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.












Click it and Unblock the Notifications