India Weather: ದೇಶದ ಈ ಭಾಗಗಳಲ್ಲಿ ಮುಂದಿನ ಮೂರು ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆ ಎಚ್ಚರಿಕೆ

India Weather: ದೇಶಾದ್ಯಂತ ಮುಂಗಾರು ಎಂಟ್ರಿ ಕೊಟ್ಟಿದ್ದು, ಮಳೆರಾಯನ ಅಬ್ಬರಿಸಿ ಬೊಬ್ಬರೆಯುತ್ತಿದ್ದಾನೆ. ಪರಿಣಾಮ ಹಲವೆಡೆ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಮಿಂಚು, ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಇಂದು (ಜೂನ್ 10) ಗೋವಾ, ದಕ್ಷಿಣ ಕೊಂಕಣ, ಕರ್ನಾಟಕದ ಉತ್ತದ ಒಳನಾಡು ಮತ್ತು ಮಧ್ಯಪ್ರದೇಶದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮತ್ತೊಂದೆಡೆ ಮುಂದಿನ ನಾಲ್ಕು ದಿನಗಳ ಕಾಲ ಉತ್ತರ ಪ್ರದೇಶ ಮತ್ತು ಪೂರ್ವ ಭಾರತದಲ್ಲಿ ಬಿಸಿಲಿನ ವಾತಾವರ ಮುಂದುವರಿಯಲಿದೆ.

India Weather Heavy rain forecast for the next three days in these states from June 10

ನೈಋತ್ಯ ಮಾನ್ಸೂನ್ ಮುಂಬೈ, ಮಹಾರಾಷ್ಟ್ರ ಸೇರಿದಂತೆ ಅಕ್ಕಪಕ್ಕದ ಪ್ರದೇಶಗಲ್ಲಿ, ಮಧ್ಯ ಅರೇಬಿಯನ್ ಸಮುದ್ರ ಭಾಗ ಮತ್ತು ಉತ್ತರ ಅರೇಬಿಯನ್ ಸಮುದ್ರದವರೆಗೆ ಮತ್ತಷ್ಟು ಚುಕುರು ಪಡೆದಿದೆ ಎಂದು ತಿಳಿಸಿದೆ.

ಇಂದು (ಜೂನ್‌ 10) ಈಶಾನ್ಯ ಅಸ್ಸಾಂನಲ್ಲಿ ಸೈಕ್ಲೋನ್‌ ಇರಲಿದೆ. ಮತ್ತೊಂದೆಡೆ ಜೂನ್ 10 ಮತ್ತು 11ರಂದು ಕರಾವಳಿ ಕರ್ನಾಟಕ, ದಕ್ಷಿಣ ಮಧ್ಯಪ್ರದೇಶ, ಗೋವಾ, ಕೊಂಕಣದಲ್ಲಿ, ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗಲಿದೆ. ಹಾಗೆಯೇ ಮುಂಬರುವ 6 ದಿನಗಳ ಕಾಳ ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಮಿಜೋರಾಂ, ತ್ರಿಪುರಾ, ಅಸ್ಸಾಂ, ಮೇಘಾಲಯ ನಾಗಾಲ್ಯಾಂಡ್ ಮತ್ತು ಮಣಿಪುರದಲ್ಲಿ ಮಿಂಚು, ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.

ಜೂನ್ 11ರಿಂದ ಜೂನ್ 13ರವರೆಗೆ ಉತ್ತರ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ತಾಪಮಾನದ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳ, ಬಿಹಾರ, ಹರಿಯಾಣ, ಜಾರ್ಖಂಡ್ ಮತ್ತು ಪಂಜಾಬ್‌ಲ್ಲಿ ಜೂನ್ 10ರಿಂದ ಜೂನ್ 13ರವರೆಗೆ, ನವದೆಹಲಿ, ಜಮ್ಮು, ಹಿಮಾಚಲ ಪ್ರದೇಶ, ಪಶ್ಚಿಮ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಉತ್ತರಾಖಂಡ್‌ನಲ್ಲಿ ಜೂನ್ 11ರಿಂದ 13ರವರೆಗೆ ಇದೇ ರೀತಿಯ ಹಾವಾಮಾನ ಮುಂದುವರೆಯಲಿದೆ ಎಂದು ತಿಳಿಸಿದೆ.

ನವದೆಹಲಿಯಲ್ಲಿ ಹವಾಮಾನ ಹೇಗಿರಲಿದೆ?: ರಾಷ್ಟ್ರ ರಾಜಧಾನಿ ನವದೆಹಲಿಯ ಹಲವು ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಇನ್ನು ಕೆಲವು ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ. ಇನ್ನು ಗಾಳಿಯ ವೇಗ ತುಸು ಹೆಚ್ಚಿರಲಿದೆ ಎಂದು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+