India Weather: ಮುಂದಿನ 24 ಗಂಟೆಗಳಲ್ಲಿ ಈ ರಾಜ್ಯಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ

India Weather: ಇದೀಗ ದೇಶದ ಬಹುತೇಕ ರಾಕ್ಯಗಳಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಿದ್ದರೆ, ಇನ್ನು ಕೆಲವು ರಾಜ್ಯಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾರೆ. ಹಾಗೆಯೇ ಚಂಡಮಾರುತರ ಪ್ರಭಾವ ಹಿನ್ನೆಲೆ ಮುಂದಿನ 24 ಗಂಟೆಗಳಲ್ಲಿ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎಂದು ಇಲ್ಲಿ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಚಂಡಮಾರುತರ ಪರಿಣಾಮ ಬೀರಲಿದೆ. ಈ ಹಿನ್ನೆಲೆ ಮುಂದಿನ 24 ಗಂಟೆಗಳಲ್ಲಿ ಒಡಿಶಾದ ಉತ್ತರ ಜಿಲ್ಲೆಗಳು, ಉತ್ತರ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶ ಮತ್ತು ಕರ್ನಾಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಪಶ್ಚಿಮ ಬಂಗಾಳ, ಮಿಜೋರಾಂ ಮತ್ತು ತ್ರಿಪುರಾದಲ್ಲೂ ಮಳೆಯಾಗುವ ಸಾಧ್ಯತೆಯಿದೆ. ಇದರ ಪರಿಣಾಮ ಉತ್ತರ ಭಾರತದ ಮೇಲೂ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

India weather Heavy rain forecast in these states in the next 24 hours IMD Prediction

ಕೇರಳದಲ್ಲಿ ಅಬ್ಬರದ ಮಳೆ: ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕೇರಳದಲ್ಲಿ ಮಳೆರಾಯನ ಅಬ್ಬರ ಜೋರಾಗಿದ್ದು, ಇನ್ನು ಇಂದು (ಮೇ 24) ಕೂಡ ಮತ್ತಷ್ಟು ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ ಎನ್ನುವ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಇನ್ನು ಈಗಾಗಲೇ ಕೇರಳದಲ್ಲಿ ಭಾರೀ ಮಳೆ ಮುಂದುವರೆದಿದ್ದು, ಮುಂಗಾರು ಅತೀ ಬೇಗನೇ ಪ್ರವೇಶಿಸಲಿದೆ. ಇನ್ನು ಕೆಲವೇ ದಿನಗಳಲ್ಲಿ ಕೇರಳಕ್ಕೆ ಮುಂಗಾರು ಎಂಟ್ರಿ ಕೊಡುವ ನಿರೀಕ್ಷೆ ಇದೆ. ಈ ರಾಜ್ಯದಲ್ಲಿ ಜೂನ್ 1ರಿಂದಲೇ ಮುಂಗಾರು ಮಳೆ ಪ್ರಾರಂಭವಾಗಲಿದೆ ಎಂದು ತಿಳಿಸಿದೆ.

ರಾಮಲ್ ಚಂಡಮಾರುತವು ಈಶಾನ್ಯ ಕಡೆಗೆ ಚಲಿಸಲಿದ್ದು, ಇದು ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದೆ.'ರೆಮಾಲ್'ಚಂಡಮಾರುತದ ಪ್ರಭಾರ ಮುಂಗಾರು ಮಳೆಯ ಮೇಲೂ ಬೀರಬಹುದು ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಹವಾಮಾನ ಇಲಾಖೆಯಿಂದ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಇನ್ನು ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಹವಾಮಾನ ಇಲಾಖೆ ಕೋಲ್ಕತ್ತಾದಲ್ಲಿ ಆರೆಂಜ್‌ ಅಲರ್ಟ್ ಘೋಷಣೆ ಮಾಡಿದೆ.

ಮತ್ತೊಂದೆಡೆ ಹಲವು ರಾಜ್ಯಗಳಲ್ಲು ಮುಂದಿನ ಒಂದು ವಾರ ಭಾರೀ ಮಳೆಯಾಗು ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 25 ರಂದು ಉತ್ತರ ಮತ್ತು ದಕ್ಷಿಣ ಭಾಗಗಳ ಕೆಲವೆಡೆ, ಪಶ್ಚಿಮ ಬಂಗಾಳ ಮತ್ತು ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಭಾರೀ ಮಳೆಯಾಗಬಹುದು. ಈ ಭಾಗಗಳಲ್ಲಿ 64.5 ಮಿಲಿ ಮೀಟರ್‌ನಿಂದ 115.5 ಮಿಲಿ ಮೀಟರ್‌ವರೆಗೆ ಮಳೆಯಾಗಬಹುದು ಎಂದು ತಿಳಿಸಿದೆ.

ಎಲ್ಲೆಲ್ಲಿ ಮಳೆ?: ಹವಾಮಾನ ಇಲಾಖೆ ಪ್ರಕಾರ ಪೂರ್ವ ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲೂ ಕೂಡ ಮಳೆಯಾಗುವ ನಿರೀಕ್ಷೆಯಿದೆ.

ಎಲ್ಲೆಲ್ಲಿ ತಾಪಮಾನ ಹೆಚ್ಚಳ?: ಮತ್ತೊಂದೊದೆಡೆ ಹವಾಮಾನ ಇಲಾಖೆಯ ಪ್ರಕಾರ, ನವದೆಹಲಿ, ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಸಿಗಾಳಿ ಹೆಚ್ಚಿರಲಿದ್ದು, ಈ ಹಿನ್ನೆಲೆ ಈ ಭಾಗಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+