India weather: ಮೇ 22ರವರೆಗೆ ಈ ಮೂರು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ-ಹಾಗಾದ್ರೆ ಎಲ್ಲೆಲ್ಲಿ ಬಿಸಿಗಾಳಿ ಮುಂದುವರಿಕೆ?

India weather Report: ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಶುರುವಾಗಿದ್ದು, ಇದರ ನಡುವೆಯೂ ಕೆಲವೇ ರಾಜ್ಯಗಳಲ್ಲಿ ಬಿಸಿಗಾಳಿ ವಾತಾವರಣ ನಿರ್ಮಾಣವಾಗುತ್ತಿದೆ. ಮತ್ತೊಂದೆಡೆ ಈ ಭಾಗಗಳಲ್ಲಿ ಮೇ 23ರವರೆಗೂ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಯಾವ್ಯಾವಾಗ ಮಳೆ ಹಾಗೂ ಬಿಸಿಗಾಳಿ ವಾತಾವರಣ ಇದರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ನವದೆಹಲಿ, ರಾಜಸ್ಥಾನ, ಚಂಡೀಗಢ, ಪಂಜಾಬ್, ಹರಿಯಾಣದಲ್ಲಿ ತೀವ್ರ ಬಿಸಿಗಾಳಿ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ಇದಕ್ಕೆ ತದ್ವಿರುದ್ಧವಾಗಿ, ದಕ್ಷಿಣ ಅಂಡಮಾನ್, ಕನ್ಯಾಕುಮಾರಿ, ಬಂಗಾಳದ ದಕ್ಷಿಣ ಮತ್ತು ನಿಕೋಬಾರ್ ದ್ವೀಪಗಳ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಮಾರುತದ ಪ್ರಭಾವ ಬೀರಲಿದೆ.

India weather Heavy rain forecast in these three states till May 22

ಬಿಸಿಗಾಳಿ ಹಿನ್ನೆಲೆ ಮೇ 22 ಮತ್ತು 23ರಂದು ನವದೆಹಲಿ, ಪಂಜಾಬ್, ಚಂಡೀಗಢ ಮತ್ತು ಹರಿಯಾಣ ರಾಜ್ಯಗಳಿಗೆ ರೆಡ್ ಅಲರ್ಟ್ ನೀಡಿದೆ. ಹಾಗೆಯೇ ಇದೇ ವೇಳೆ ಪೂರ್ವ ರಾಜಸ್ಥಾನ ಮತ್ತು ಪಶ್ಚಿಮ ರಾಜಸ್ಥಾದಲ್ಲಿಯೂ ಬಿಸಿಗಾಳಿ ವಾತಾವರಣ ಮುಂದುವರೆಯಲಿದೆ. ಇನ್ನು ಮೇ 20ರಂದು ಪೂರ್ವ ಉತ್ತರ ಪ್ರದೇಶದಲ್ಲಿ ತೀವ್ರ ಶಾಖದ ವಾತಾವರಣ ಇರಲಿದೆ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಮೇ 20 ಮತ್ತು 21ರಂದು ಇದೇ ವಾತಾವರಣ ಇರುತ್ತದೆ ಎಂದು ತಿಳಿಸಿದೆ.

ಹವಾಮಾನ ಇಲಾಖೆ ವರದಿಯ ಪ್ರಕಾರ, ಮೇ 20ರಿಂದ 22ರವರೆಗೆ ಕೇರಳ ಮತ್ತು ತಮಿಳುನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಮೇ 20ರಿಂದ ಮೇ 23ರವರೆಗೆ ನಿಕೋಬಾರ್ ದ್ವೀಪ ಮತ್ತು ಸಿಕ್ಕಿಂನಲ್ಲಿಯೂ ಇದೇ ವಾತಾವರಣ ಮುಂದುವರೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಮೇ 20ರಂದು ಮೇಘಾಲಯ ಮತ್ತು ಅಸ್ಸಾಂನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ಮಧ್ಯ ಭಾರತದ ಕೆಲವು ಭಾಗಗಳಲ್ಲಿ ಸುಮಾರು 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ . ಆದರೆ, ಮುಂಬರುವ ಎರಡು ದಿನಗಳಲ್ಲಿ ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆಗಳು ಕಂಡುಬಂದಿಲ್ಲ. ಮೇ 19ರಂದು ರಾಜಸ್ಥಾನ, ನವದೆಹಲಿ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲಿ 43-46°C ತಾಪಮಾನ ದಾಖಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+