India Weather: ಮುಂದಿನ ಮೂರು ದಿನ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ-ಎಲ್ಲೆಲ್ಲಿ ಬಿಸಿಗಾಳಿ ಪ್ರಮಾಣ ಹೆಚ್ಚಳ?
India Weather: ಇದೀಗ ದೇಶದ ಹಲವು ರಾಜ್ಯಗಳಲ್ಲಿ ದಿನದಿಂದ ಬಿಸಿಗಾಳಿಯ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಇದರ ನಡುವೆಯೂ ಮುಂದಿನ ಮೂರು ದಿನಗಳ ಕಲಾ ಹಲವೆಡೆ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ "ರೆಮಲ್" ಚಂಡಮಾರುತದ ಪ್ರಭಾವ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಬೀರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅದರಲ್ಲೂ ಕೇರಳದ ಮೇಲೆ ಭಾರೀ ಪರಿಣಾಮ ಬೀರಲಿದೆ ಎನ್ನುವ ಮುನ್ಸೂಚನೆ ಇದೆ. ಮತ್ತೊಂದೆಡೆ ಜೂನ್ 1ರಿಂದ ಮುಂಗಾರು ಎಂಟ್ರಿ ಕೊಡಲಿದ ಎನ್ನುವ ಮಾಹಿತಿಯೂ ಲಭ್ಯವಾಗಿದೆ.

ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕೇರಳ, ಆಂಧ್ರಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ಹಲವು ದಕ್ಷಿಣ ರಾಜ್ಯಗಳಲ್ಲಿ ಮೇ 28 ರವರೆಗೆ ಭಾರೀ ಮಳೆ ಸುರಿಯಲಿದ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಯಾವೆಲ್ಲ ಭಾಗಗಳಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ದಕ್ಷಿಣ ಭಾರತದ ಯಾವೆಲ್ಲಾ ರಾಜ್ಯಗಳಲ್ಲಿ ಮಳೆ?: ಮೇ 24 ರಿಂದ 26 ರವರೆಗೆ, ಕೇರಳ, ಮಾಹೆ, ಲಕ್ಷದ್ವೀಪ ಮತ್ತು ಕರಾವಳಿ ಕರ್ನಾಟಕದಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ರಾಯಲಸೀಮಾ, ತೆಲಂಗಾಣದಲ್ಲಿ ಅಲ್ಲಲ್ಲಿ ಚದುರಿದ ಸಾಧಾರಣ ಮಳೆಯಾಗಲಿದೆ.
ಮೇ 27ರವರೆಗೆ ಮಳೆ: ಅದರಲ್ಲೂ ಮೇ 24ರಿಂದ 27ರವರೆಗೆ ಕೇರಳದಲ್ಲಿ ಅಬ್ಬರದ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪ್ರದೇಶಗಳಲ್ಲಿ ಮೇ 25ರವರೆಗೆ ವ್ಯಾಪಕವಾದ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ.
ಉತ್ತರ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಮೇ 26 ಮತ್ತು 27ರಂದು ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ, ಕೆಲವು ಭಾಗಗಳಲ್ಲಿ ಮಾತ್ರ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅದರಲ್ಲೂ ಉತ್ತರ ಕರಾವಳಿ ಒಡಿಶಾದಲ್ಲಿ ಮೇ 25 ಮತ್ತು 26ರಂದು ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಮೇ 27ರಿಂದ 28 ರವರೆಗೆ ಪಶ್ಚಿಮ ಬಂಗಾಳದ ಪೂರ್ವ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ, ಇನ್ನು ಇಲ್ಲಿನ ಕೆಲವು ಭಾಗಗಳಲ್ಲಿ ಮಾತ್ರ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಈಶಾನ್ಯ ಭಾರತದಲ್ಲಿ ಎಲ್ಲೆಲ್ಲಿ ಮಳೆ?: ಮೇ 26ರಂದು, ಮಿಜೋರಾಂ, ತ್ರಿಪುರಾ ಮತ್ತು ದಕ್ಷಿಣ ಮಣಿಪುರದ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ, ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಿಂದ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಮೇ 27 ಮತ್ತು 28ರಂದು ಅಸ್ಸಾಂ ಮತ್ತು ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಿಜೋರಾಂ, ಮಣಿಪುರ ಮತ್ತು ತ್ರಿಪುರಾದ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಈ ಭಾಗದ ಕೆಲವೆಡೆ ಮಾತ್ರ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಮುನ್ಸೂಚನೆ ನೀಡಿದೆ.
ಮೀನುಗಾರರಿಗೆ ಪ್ರಮುಖ ಸೂಚನೆ: ಮೇ 27 ಮತ್ತು 28 ರಂದು ಅಸ್ಸಾಂ, ಮೇಘಾಲಯ, ಮೇ 28ರಂದು ಅರುಣಾಚಲ ಪ್ರದೇಶ ಮತ್ತು ಮೇ 27ರಂದು ಮಿಜೋರಾಂ, ತ್ರಿಪುರಾದಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗಲಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಮೇ 25ರಿಂದ ಮೇ 27ರವರೆಗೆ ಉತ್ತರ ಬಂಗಾಳ ಕೊಲ್ಲಿಯ ಸಮುದ್ರದ ಪ್ರದೇಶಕ್ಕೆ ಮೀನುಗಾರರು ಹೋಗದಂತೆ ಸೂಚನೆ ನೀಡಿದೆ.
ಎಲ್ಲೆಲ್ಲಿ ತಾಪಮಾನ ಹೆಚ್ಚಳ?: ಮೇ 28ರವರೆಗೆ ಜಮ್ಮು ವಿಭಾಗ, ಹಿಮಾಚಲ ಪ್ರದೇಶ, ಪೂರ್ವ ಮಧ್ಯಪ್ರದೇಶದ ಸೇರಿದಂತೆ ಹಲವೆಡೆ ಬಿಸಿಗಾಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಇನ್ನು ಗುಜರಾತ್‌ನಲ್ಲಿಯೂ ಇದೇ ವಾತಾವಾರಣ ಮುಂದುವರೆಯಲಿದೆ ಎಂದು ತಿಳಿಸಿದೆ.
ಮೇ 26ರಿಂದ 28ರವರೆಗೆ ಪೂರ್ವ ಉತ್ತರ ಪ್ರದೇಶ, ರಾಜಸ್ಥಾನದ, ಪಂಜಾಬ್, ಹರಿಯಾಣ-ಚಂಡೀಗಢ ಮತ್ತು ಪಶ್ಚಿಮ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ತಾಪಮಾನದ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಪಶ್ಚಿಮ ಮಧ್ಯಪ್ರದೇಶದಲ್ಲಿಯೂ ಮೇ 27 ಮತ್ತು 28ರಂದು ಇದೇ ವಾತಾವರಣ ಇರಲಿದೆ ಎಂದು ಮುನ್ಸೂಚನೆ ನೀಡಿದೆ.












Click it and Unblock the Notifications