India Weather: ಮುಂದಿನ 5 ದಿನಗಳ ಕಾಲ ದೇಶದ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ

India weather Update: ದೇಶದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಇನ್ನು ಕೆಲವು ಭಾಗಗಳಲ್ಲಿ ತಾಪಾಮಾನ ಹೆಚ್ಚಾಗುತ್ತಿದೆ. ಮತ್ತೊಂದೆಡೆ ಮುಂದಿನ 5 ದಿನಗಳ ಕಾಲ ಈ ರಾಜ್ಯಗಳಲ್ಲಿ ಗುಡುಗು, ಮಿಂಚು ಸಹಿತ ಅಬ್ಬರದ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಹಾಗಾದರೆ ಎಲ್ಲೆಲ್ಲಿ ಯಾವ್ಯಾವಾಗ ಮಳೆ ಸುರಿಯಲಿದ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಇಂದು (ಮೇ 21) ಕೇರಳ, ಕರಾವಳಿ ಕರ್ನಾಟಕ, ಲಕ್ಷದ್ವೀಪ ಮತ್ತು ಅಂಡಮಾನ್-ನಿಕೋಬಾರ್ ದ್ವೀಪಗಳ ಭಾಗಗಳಲ್ಲಿ ಪ್ರತ್ಯೇಕವಾದ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಇದೇ ವೇಳೆ ಗೋವಾ, ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲೂ ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

India weather Heavy rain thunderstorm forecast in these States for next 5 days from May 21

ಅರುಣಾಚಲ ಪ್ರದೇಶ, ಗಿಲ್ಗಿಟ್‌, ಮುಜಾಫರಾಬಾದ್‌, ಹಿಮಾಚಲ ಪ್ರದೇಶ, ಸಿಕ್ಕಿಂ, ಜಮ್ಮು-ಕಾಶ್ಮೀರ, ಲಡಾಖ್, ಉತ್ತರಾಖಂಡ, ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ, ಒಡಿಶಾ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಚದರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಎಲ್ಲೆಲ್ಲಿ ಎಷ್ಟು ತಾಪಮಾನ?: ಇನ್ನು ಪಂಜಾಬ್, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಗುಜರಾತ್‌ನ ಕೆಲವು ಸ್ಥಳಗಳಲ್ಲಿ, ನವದೆಹಲಿ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢ, ಜಮ್ಮು & ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ತೆಲಂಗಾಣದಲ್ಲಿ ಗರಿಷ್ಠ ತಾಪಮಾನವು 45°Cಗಿಂತ ಹೆಚ್ಚಿರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮೇ 22ರಂದು ಎಲ್ಲೆಲ್ಲಿ ಮಳೆ?: ಕೇರಳ, ಕರಾವಳಿ ಕರ್ನಾಟಕ, ಲಕ್ಷದ್ವೀಪ, ಮತ್ತು ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಗೋವಾ, ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ತಿಳಿಸಿದೆ.

ಅರುಣಾಚಲ ಪ್ರದೇಶ, ಸಿಕ್ಕಿಂ,ಜಮ್ಮು-ಕಾಶ್ಮೀರ, ಲಡಾಖ್, ಉತ್ತರಾಖಂಡ, ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ, ಒಡಿಶಾ, ತೆಲಂಗಾಣ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರಗಳಲ್ಲಿ ಗುಡುಗು ಸಹಿತ ಚದುರಿದ ಮಳೆ ಮಳೆಯಾಗುವ ಸಾಧ್ಯತೆಯಿದೆ ಅಂತಾ ತಿಳಿಸಿದೆ.

ತಾಪಮಾನ ದಾಖಲೆಯ ವಿವರಗಳು: ಈ ವೇಳೆ ಪಂಜಾಬ್, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಗುಜರಾತ್‌ನ ಕೆಲವು ಸ್ಥಳಗಳಲ್ಲಿ, ನವದೆಹಲಿ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢ, ತೆಲಂಗಾಣ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಗರಿಷ್ಠ ತಾಪಮಾನ 40 °Cಗಿಂತ ಹೆಚ್ಚಿರುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇನ್ನು ನೈಋತ್ಯ ಮಾನ್ಸೂನ್ ಪ್ರಭಾವ ಮಾಲ್ಡೀವ್ಸ್, ದಕ್ಷಿಣ ಬಂಗಾಳ ಕೊಲ್ಲಿ, ನಿಕೋಬಾರ್ ದ್ವೀಪಗಳು ಮತ್ತು ದಕ್ಷಿಣ ಅಂಡಮಾನ್ ಸಮುದ್ರದ ಭಾಗಗಳ ಮೇಲೆ ಬೀರಿದೆ. ಇನ್ನು ಮುಂದಿನ ದಿನಗಳಲ್ಲಿ ಕೇರಳ, ಪಕ್ಕದ ತಮಿಳುನಾಡು, ಲಕ್ಷದ್ವೀಪ ಮತ್ತು ಕರಾವಳಿ ಕರ್ನಾಟಕದಲ್ಲಿ ವ್ಯಪಾಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ.

ಮೇ 23ರವರೆಗೂ ಎಲ್ಲೆಲ್ಲಿ ಮಳೆ?: ಮೇ 21-23ರವರೆಗೆ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಮೇ 21-22ರಂದು ಕೊಂಕಣ-ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡದಲ್ಲಿ ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರಲಿದ್ದು, ಗುಡುಗು, ಮಿಂಚು ಸಹಿತ ಲಘುವಾಗಿ ಸಾಧಾರಣ ಮಳೆಯಾಗಲಿದೆ. ಇನ್ನು ಛತ್ತೀಸ್‌ಗಢದಲ್ಲೀ ಮೇ 21ರಿಂದ 23ರವರೆಗೆ ಇದೇ ರೀತಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ.

ಮೇ 24ರವರೆಗೆ ಒಡಿಶಾ, ಬಿಹಾರ, ಗಂಗಾನದಿ ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನಲ್ಲಿ ಗುಡುಗು, ಮಿಂಚು, ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇನ್ನು ಮುಂದಿನ 5 ದಿನಗಳವರೆಗೆ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಇದೇ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.

ಮುಂದಿನ 5 ದಿನ ಮಳೆ: ಮುಂದಿನ 5 ದಿನಗಳವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇನ್ನು ಈಗಾಗಲೇ ಮೇ 20ರಂದು ಅಸ್ಸಾಂ ಮತ್ತು ಮೇಘಾಲಯದಲ್ಲಿ ಅತಿ ಹೆಚ್ಚು ಮಳೆಯಾಗಿದೆ ಎಂದು ವರದಿಯಾಗಿದೆ.

ಮುಂದಿನ 5 ದಿನಗಳಲ್ಲಿ ಹರಿಯಾಣ, ಚಂಡೀಗಢ, ನವದೆಹಲಿ, ರಾಜಸ್ಥಾನ, ಪಂಜಾಬ್, ಉತ್ತರ ಪ್ರದೇಶ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ 43-46°Cವರೆಗೆ ಗರಿಷ್ಠ ತಾಪಮಾನ ದಾಖಲಾಗುವ ಸಾಧ್ಯೆತೆಯಿದೆ. ಮತ್ತೊಂದೆಡೆ ಬಿಹಾರ, ಛತ್ತೀಸ್‌ಗಢ, ಮಧ್ಯ ಮಹಾರಾಷ್ಟ್ರ ಮತ್ತು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಭಾಗಗಳಲ್ಲಿ 40-42 C ತಾಪಮಾನ ದಾಖಲಾಗುವ ಸಾಧ್ಯೆತೆಯಿದೆ ಎಂದು ತಿಳಿಸಿದೆ.

ಮೇ 21 ರಿಂದ 24ರವರೆಗೆ ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿ ಮತ್ತು ರಾಜಸ್ಥಾನದ ಹೆಚ್ಚಿನ ಪ್ರದೇಶಗಳು, ಗುಜರಾತ್, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಬಿಸಿಗಾಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಮೇ 21-22ರವರೆಗೆ ಪೂರ್ವ ಉತ್ತರ ಪ್ರದೇಶ, ಮೇ 21-23ರವರೆಗೆ ಒಡಿಶಾ ಮತ್ತು ಮೇ 22-24ರವರೆಗೆ ಜಮ್ಮು ವಿಭಾಗದಲ್ಲಿ ಬಿಸಿಗಾಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+