India Weather: ಮುಂದಿನ ಮೂರು ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ-ಎಲ್ಲೆಲ್ಲಿ?
India Weather: ಮೇ ಕೊನೆಯಲ್ಲಿ ಮುಂಗಾರು ಕೇರಳಕ್ಕೆ ಎಂಟ್ರಿ ಕೊಟ್ಟಿದ್ದು, ಬಳಿಕ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಗೆ ಆಗಮಿಸಿತು. ಇನ್ನು ಇದೀಗ ಇಡೀ ದೇಶದಲ್ಲೇ ಮುಂಗಾರು ಚುರುಕು ಪಡೆದಿದ್ದು, ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ನಾಲ್ಕು ದಿನಗಳ ಕಾಲ ದೇಶದ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಭಾರತ ಹವಾಮಾನ ಇಲಾಖೆ ಪ್ರಕಾರ ಇಂದು (ಜೂನ್ 8) ಕರ್ನಾಟಕ ಮತ್ತು ಮಹಾರಾಷ್ಟ್ರದ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ ನೈಋತ್ಯ ಮಾನ್ಸೂನ್ ಆಗಮನದಿಂದ ಮಹರಾಷ್ಟ್ರದಲ್ಲಿ ಬಿಸಿಲಿನ ತಾಪದಲ್ಲಿ ಕಡೆಮೆಯಾಗಲಿದೆ ಎನ್ನಲಾಗುತ್ತಿದೆ.

ಜೂನ್ 10ರವರೆಗೆ ಗೋವಾ, ಕರ್ನಾಟಕ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಜೂನ್ 9ರವರೆಗೆ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜೂನ್ 9 ಮತ್ತು 10ರಂದು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಭಾರೀ ಮಳೆ ಮುನ್ಸೂಚನ ಹಿನ್ನೆಲೆ ಕೇರಳದ ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಇಂದು (ಜೂನ್ 08) ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಇದೇ ದಿನ ಅಲಪ್ಪುಳ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಧ್ಯಪ್ರದೇಶದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಹಿನ್ನೆಲೆ, ಬರ್ವಾನಿ, ಖಾರ್ಗೋನ್, ಖಾಂಡ್ವಾ, ಇಂದೋರ್, ದೇವಾಸ್, ಧಾರ್, ಬೆತುಲ್, ಉಜ್ಜಯಿನಿ, ಝಬುವಾ ಮತ್ತು ಅಲಿರಾಜ್‌ಪುರ ಸೇರಿದಂತೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ ಎರಡು ದಿನಗಳಲ್ಲಿ, ವಾಯುವ್ಯ ಭಾರತದಾದ್ಯಂತ ಹಲವಾರು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ . ಈ ವೇಳೆ ಉತ್ತರ ಪ್ರದೇಶ ಮತ್ತು ಈಶಾನ್ಯ ಮಧ್ಯಪ್ರದೇಶದ ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಬಿಸಿಲಿನ ವಾತಾವರಣ ಮುಂದುವರೆಯಲಿದ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ನವದೆಹಲಿಯಲ್ಲಿ ವಾತಾವರಣ ಹೇಗಿರಲಿದೆ?: ಇಂದು (ಜೂನ್ 08) ನವದೆಹಲಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ಈ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಇನ್ನು ಈ ರಾಜ್ಯದಲ್ಲಿ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ಅಲ್ಲದೆ, ಇಲ್ಲಿನ ಹವಾಮಾನದಲ್ಲಿ ಭಾರೀ ಬದಲಾಣೆ ಹಿನ್ನೆಲೆ ಶುಕ್ರವಾರ ಅಂದರೆ ನಿನ್ನೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿತ್ತು.
ದೇಶದ ವಾಣಿಜ್ಯ ನಗರಿಯ ಹವಾಮಾನ ವಿವರ: ಮುಂಬೈ ಮತ್ತು ಅಕ್ಕಪಕ್ಕದ ಭಾಗಗಳಲ್ಲಿ ಇಂದು (ಜೂನ್ 08) ಮೋಡ ಕವಿದ ವಾತಾವರಣ ಇದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಧ್ಯತೆಯಿದೆ. ಇಲ್ಲಿನ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದ್ದು, ಇಲ್ಲಿಗೆ ಜೂನ್ 9 ಮತ್ತು 10ರ ನಡುವೆ ಮಾನ್ಸೂನ್ ಪ್ರಾರಂಭವಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಜೂನ್ 11 ರವರೆಗೆ ಭಾರೀ ಮಳೆ: ಮುಂದಿನ ನಾಲ್ಕು ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ, ಗೋವಾಕ್ಕೆ ಆರೆಂಜ್ ಅಲರ್ಟ್ ಗೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಇನ್ನು ರಾಜ್ಯದಲ್ಲಿ ಈಗಾಗಲೇ ಮುಂಗಾರು ಪೂರ್ವ ಮಳೆಯಾಗಿದೆ. ಅಲ್ಲದೆ, ಉತ್ತರ ಮತ್ತು ದಕ್ಷಿಣ ಗೋವಾ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ 40-50 ವೇಗದಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ತಾಪಮಾನ ಹೆಚ್ಚಳ?: ಜೂನ್ 8ರಿಂದ 11ರವರೆಗೆ ಈಶಾನ್ಯ ಮಧ್ಯಪ್ರದೇಶ ಮತ್ತು ಜಾರ್ಖಂಡ್‌ನ ಪ್ರತ್ಯೇಕ ಪ್ರದೇಶಗಳಲ್ಲಿ ಶಾಖದ ಅಲೆಯ ಪರಿಸ್ಥಿತಿಗಳನ್ನು ನಿರೀಕ್ಷಿಸಲಾಗಿದೆ . ಬಿಹಾರದಲ್ಲಿ ಜೂನ್ 9-10ರಂದು, ಒಡಿಶಾ, ಪಂಜಾಬ್ ಮತ್ತು ಹರಿಯಾಣದಲ್ಲಿ ಜೂನ್ 9-11ರೆವರೆಗೂ ಇದೇ ರೀತಿಯ ವಾತಾರಣ ಇರಲಿದೆ. ಉತ್ತರ ಪ್ರದೇಶದಲ್ಲಿ ಕೆಲವು ಪ್ರದೇಶಗಳಲ್ಲಿ ಜೂನ್ 8-11ರೆವರೆಗೂ, ಬಿಹಾರ ಮತ್ತು ಪಶ್ಚಿಮ ಬಂಗಾಳದ ಪ್ರತ್ಯೇಕ ಭಾಗಗಳಲ್ಲಿ ಇಂದು (ಜೂನ್ 8) ತಾಪಾಮಾನ ಪ್ರಮಾಣದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.












Click it and Unblock the Notifications