India weather: ದೇಶದ ಈ ಭಾಗಗಳಲ್ಲಿ ಮೇ 29ರವರೆ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
India weather Update: ದೇಶದ ಕಲವೆಡೆ ರಾಜ್ಯಗಳಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಲಿದ್ದು, ಕಲೆವೆಡೆ ಗುಡುಗು ಸಹಿತ ಅಬ್ಬರದ ಮಳೆಯಾಗುತ್ತಿದೆ. ಹಾಗೆಯೆ ಮುಂದಿನ ಮೇ 29ರವರೆಗೆ ಹಲವು ಭಾಗಗಳಲ್ಲಿ ಕಂಡು ಕೇಳಿಯರುದಷ್ಟು ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಹಾಗೂ ಯಾವೆಲ್ಲ ಭಾಗಗಳಲ್ಲಿ ಬಿಸಿಗಾಳಿ ವಾತಾವರಣ ಇರಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಭಾರತ ಹವಾಮಾನ ಇಲಾಖೆಯು ಗುರುವಾರ (ಮೇ 23) ರಾಜಸ್ಥಾನ, ಪಂಜಾಬ್, ಹರಿಯಾಣ, ನವದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಶಾಖದ ಪ್ರಮಾಣ ಹೆಚ್ಚಿರಲಿರುವ ಹಿನ್ನೆಲೆ, ಈ ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಇನ್ನು ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಗುಜರಾತ್‌ಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಭಾರತೀಯ ಹವಾಮಾನ ವರದಿಯ ಪ್ರಕಾರ, ಮೇ 26ರವರೆಗೆ ಜಮ್ಮು ವಿಭಾಗ, ಹಿಮಾಚಲ ಪ್ರದೇಶ, ಗುಜರಾತ್ ಮತ್ತು ಮಧ್ಯಪ್ರದೇಶದಲ್ಲಿ ಶಾಖದ ಅಲೆಯ ಪ್ರಾಣ ಹೆಚ್ಚಿರಲಿದೆ. ಮೇ 23ರವರೆಗೆ ದೆಹಲಿಯಲ್ಲಿ, ಮೇ 24 ರಿಂದ ಮೇ 26 ರವರೆಗೆ ಉತ್ತರ ಪ್ರದೇಶದಲ್ಲಿ ಮತ್ತು ಮಹಾರಾಷ್ಟ್ರದಲ್ಲಿ ಮೇ 25ರವರೆಗೆ ಶಾಖದ ವಾತಾವರಣ ಮುಂದುವರೆಯಲಿದ ಎಂದು ತಿಳಿಸಿದೆ.
ಪಶ್ಚಿಮ ರಾಜಸ್ಥಾನದ ಹೆಚ್ಚಿನ ಭಾಗಗಳಲ್ಲಿ, ಪಂಜಾಬ್, ಹರಿಯಾಣ, ಚಂಡೀಗಢ, ಪೂರ್ವ ರಾಜಸ್ಥಾನ ಮತ್ತು ಪಶ್ಚಿಮ ಉತ್ತರ ಪ್ರದೇಶದ ಹಲವುಭಾಗಗಳಲ್ಲಿ ಮೇ 22 ರಿಂದ ಮೇ 26 ರವರೆಗೆ ಮತ್ತು ಪ್ರತ್ಯೇಕ ಪ್ರದೇಶಗಳಲ್ಲಿ ಬಿಸಿಗಾಳಿಯ ವಾತಾವರಣ ಮುದುವರೆಯುವ ಸಾಧ್ಯತೆಯಿದೆ. ಇನ್ನು ಮೇ 24 ರಿಂದ 26 ರವರೆಗೆ ವಾಯುವ್ಯ ಮಧ್ಯಪ್ರದೇಶ ಮತ್ತು ದೆಹಲಿಯಲ್ಲೂ ಇದೇ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.
ಇನ್ನು ನಿನ್ನೆ (ಮೇ 22) ರಾಜಸ್ಥಾನದ ಬಾರ್ಮರ್‌ನಲ್ಲಿ ಗರಿಷ್ಠ ತಾಪಮಾನ 48 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ, ಹರಿಯಾಣದ ಸಿರ್ಸಾ ಮತ್ತು ಉತ್ತರ ಪ್ರದೇಶದ ಆಗ್ರಾದಲ್ಲೂ ಅತಿ ಹೆಚ್ಚು ತಾಪಮಾನ ದಾಖಲಾಗಿದೆ ಎಂದು ತಿಳಿಸಿದೆ.
ಎಲ್ಲೆಲ್ಲಿ ಮಳೆ?: ಇದರ ನಡುವೆಯೂ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 23ರಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್, ಕರ್ನಾಟಕದ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮೇ 23ರಂದು ಕೇರಳ, ಲಕ್ಷದ್ವೀಪ, ಕರ್ನಾಟಕದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಇನ್ನು ಮೇ 26ರಂದು ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀಯಾಗುವ ಸಾಧ್ಯತೆಯಿದೆ. ಮೇ 29 ರವರೆಗೆ ಒಡಿಶಾ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನಲ್ಲಿ ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಮುಂದಿನ 5 ದಿನಗಳ ಕಾಲ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದ್ದು, ಇಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 30-40 ಕಿ.ಮೀಟರ್ ವೇಗದಲ್ಲಿ ಇರಲಿದ ಎಂದು ತಿಳಿಸಿದೆ.
ಇನ್ನೇನು ಕೇರಳದಲ್ಲಿ ಈಗಾಗಲೇ ಅಬ್ಬರದ ಮಳೆಯಾಗುತ್ತಿದ್ದು, ಇದರ ಪರಿಣಾಮ ಮುಂದಿನ ದಿನಗಳಲ್ಲಿ ಕರ್ನಾಟಕದ ಬಹುತೇಕ ಎಲ್ಲಾ ಭಾಗಗಳಲ್ಲೂ ಭಾರೀ ಮಳೆಯಾಗುವ ಎಲ್ಲಾ ಲಕ್ಷಣಗಳು ಕೂಡ ಗೋಚರಿಸುತ್ತಿವೆ.












Click it and Unblock the Notifications