India weather: ಈ ಭಾಗಗಳಲ್ಲಿ ಮಾರ್ಚ್ 19ರವರಗೂ ಬಲು ಮಳೆ ಮುನ್ಸೂಚನೆ-ಎಲ್ಲೆಲ್ಲಿ? ಮಾಹಿತಿ, ವಿವರ
Rain Alert: ಉತ್ತರ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದ ಬಹುತೇಕ ರಾಜ್ಯಗಳಲ್ಲಿ ಬಿಸಿಲಿನ ಧಗೆ ದಿನದಿಂದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಈ ನಡುವೆಯೇ ಕೆಲವೆಡೆ ಮಂಜು ಹನಿಯ ರೀತಿ ಮಳೆಯಾಗುತ್ತಿದೆ. ಕರ್ನಾಟಕದ ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ವರ್ಷದ ಮೊದಲ ಮಳೆಯಾಗಿದ್ದು, ಇದು ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ತೋರಿಸುತ್ತಿದೆ. ಅಲ್ಲದೆ ಮುಂದಿನ 5 ದಿನಗಳ ದೇಶದ ಹಲವೆಡೆ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ನೀರುವ ಮಾಹಿತಿ ಪ್ರಕಾರ ಯಾವೆಲ್ಲ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಭಾರತ ಹವಾಮಾನ ಇಲಾಖೆಯ ಪ್ರಕಾರ, ಮಾರ್ಚ್ 19 ರವರೆಗೆ ದೇಶದ ಹಲವಾರು ಭಾಗಗಳಲ್ಲಿ ಹಿಮಪಾತ, ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಇನ್ನು ಮುಂದಿನ ನಾಲ್ಕು ದಿನಗಳಲ್ಲಿ ಕೇರಳ, ಮಾಹೆ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಬಿಸಿಯ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.
ಹಿಮಾಚಲ ಪ್ರದೇಶದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಾರ್ಚ್ 14ರಂದು ಗುಡುಗು ಸಹಿತ ಮಳೆಯಾಗಲಿದೆ. ಉತ್ತರಾಖಂಡದ ಉತ್ತರಕಾಶಿ, ಚಮೋಲಿ, ಪಿಥೋರಗಢ, ಬಾಗೇಶ್ವರ ಮತ್ತು ರುದ್ರಪ್ರಯಾಗ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದ್ದು, ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ. ಇನ್ನು ಈ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.
ಮಾರ್ಚ್ 13 ರಿಂದ 16 ರವರೆಗೆ ಹಿಮಾಲಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಅಲ್ಲಲ್ಲಿ ಪ್ರತ್ಯೇಕವಾದ ಲಘು ಮಳೆಯಾಗುವ ಮುನ್ಸೂಚನೆ ನೀಡಿದೆ. ಇನ್ನು ಈಶಾನ್ಯ ರಾಜ್ಯವಾದ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯದಲ್ಲಿ ಮಾರ್ಚ್ 13-19ರವರೆಗೂ ಮಳೆಯಾಗಲಿದೆ. ಜಾರ್ಖಂಡ್, ಛತ್ತೀಸ್‌ಗಢ ಮತ್ತು ಪೂರ್ವ ಮಧ್ಯಪ್ರದೇಶದಲ್ಲಿ ಮಾರ್ಚ್ 16 ರಿಂದ 19 ರವರೆಗೆ ಮಳೆಯಾಗುವ ಸಾಧ್ಯೆತೆಯಿದೆ. ಇನ್ನು ಈ ಭಾಗಗಳಲ್ಲಿ ಗಾಳಿಯ ವೇಗ ಗಂಟೆಗೆ 30-40 km ಬೀಸುವ ಸಾಧ್ಯತೆಯಿದೆ ಅಂತಲೂ ಎಚ್ಚರಿಕೆ ನೀಡಿದೆ.
ಮಾರ್ಚ್ 13 ರಿಂದ 17ರವರೆಗೆ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಇನ್ನು ನವದೆಹಲಿಯಲ್ಲಿ ಮುಂದಿನ ಆರು ದಿನಗಳವರೆಗೆ ಯಾವುದೇ ಮಳೆಯನ್ನು ನಿರೀಕ್ಷಿಸಲಾಗುವುದಿಲ್ಲ. ಆದರೂ ಮೋಡ ಕವಿದ ವಾತಾವರಭ ಇರಲಿದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನವು ಕ್ರಮವಾಗಿ 14 ಮತ್ತು 31 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.












Click it and Unblock the Notifications