India weather: ದೇಶದ ಈ ಭಾಗಗಳಲ್ಲಿ 7 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ
ನವದೆಹಲಿ, ಡಿಸೆಂಬರ್, 17: ಮೈಚಾಂಗ್ ಚಂಡಮಾರುತ ಪ್ರಭಾವದಿಂದ ದೇಶದ ಕೆಲವೆಡೆ ಹಲವು ದಿನಗಳಿಂದ ಅಬ್ಬರದ ಮಳೆಯಾಗಿತ್ತು. ಅದರಲ್ಲೂ ತಮಿಳುನಾಡಿನ ಚೆನ್ನೈನಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿದ್ದವು. ಹಾಗೆಯೇ ಮುಂದಿನ ಏಳು ದಿನಗಳ ಕಾಲ ತಮಿಳುನಾಡಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ (ಡಿಸೆಂಬರ್ 17) ಮುನ್ಸೂಚನೆ ನಿಡಿದೆ.
ಇನ್ನು ಭಾರೀ ಮಳೆ ಹಿನ್ನೆಲೆ ತಮಿಳುನಾಡಿನ ಹಲವು ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ. ತೂತುಕುಡಿ, ಶಿವಗಂಗಾ, ರಾಮನಾಥಪುರಂ, ಪುದುಕೋಟೈ ಸೇರಿದಂತೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ಸಂದೇಶವನ್ನು ನೀಡಿದೆ.
ಕನ್ಯಾಕುಮಾರಿ, ತಿರುನಲ್ವೇಲಿ, ತೆಂಕಶಿ ಮತ್ತು ತೂಟುಕುಡಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ನಾಗಪಟ್ಟಣಂ, ತಿರುವರೂರು, ತಂಜಾವೂರು, ಪುದುಕೊಟ್ಟೈ, ರಾಮನಾಥಪುರಂ, ಶಿವಗಂಗಾ ಮತ್ತು ವಿರುಧನಗರ ಜಿಲ್ಲೆಗಳ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇನ್ನು ಕೆಲವೇ ಕ್ಷಣಗಳಲ್ಲಿ ದಕ್ಷಿಣ ತಮಿಳುನಾಡಿನ ಹಲವೆಡೆ ಮತ್ತು ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೋಮವಾರ (ಡಿಸೆಂಬರ್ 18) ಭಾರೀ ಮಳೆ ಹಿನ್ನೆಲೆ ತಮಿಳುನಾಡಿನ ರಾಮನಾಥಪುರಂ, ಶಿವಗಂಗಾ, ಪುದುಕೊಟ್ಟೈ, ತಂಜಾವೂರು, ವಿರುಧನಗರ ಮತ್ತು ಥೇಣಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಹಳದಿ ಅಲರ್ಟ್ ನೀಡಿದೆ. ದಕ್ಷಿಣ ತಮಿಳುನಾಡಿನ ಅನೇಕ ಸ್ಥಳಗಳಲ್ಲಿ, ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಮಂಗಳವಾರ (ಡಿಸೆಂಬರ್ 19) ದಕ್ಷಿಣ ತಮಿಳುನಾಡು, ಉತ್ತರ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಅಲ್ಲಲ್ಲಿ ಮಿಂಚು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಬುಧವಾರದಿಂದ ಶನಿವಾರದವರೆಗೆ (ಡಿಸೆಂಬರ್ 20-22) ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.

ಹವಾಮಾನ ಇಲಾಖೆಯ ಪ್ರಕಾರ, ಹಾಗೆಯೇ ದಕ್ಷಿಣ ಶ್ರೀಲಂಕಾದ ಕರಾವಳಿಯ ಸಮಭಾಜಕ ಹಿಂದೂ ಮಹಾಸಾಗರ ಮತ್ತು ಪಕ್ಕದ ನೈಋತ್ಯ ಬಂಗಾಳ ಕೊಲ್ಲಿಯ ಮೇಲಿದ್ದ ಚಂಡಮಾರುತದ ಪರಿಚಲನೆಯು ಈಗ ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಯಲ್ಲಿದೆ.
ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಶ್ರೀಲಂಕಾ, ದಕ್ಷಿಣ ತಮಿಳುನಾಡು ಕರಾವಳಿ, ಮನ್ನಾರ್ ಗಲ್ಫ್ ಮತ್ತು ಕೊಮೊರಿನ್ ಪ್ರದೇಶದಲ್ಲಿ 40-45 ಕಿಲೋ ಮೀಟರ್‌ನಿಂದ 55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮತ್ತು ಮುಂದಿನ 2 ದಿನಗಳಲ್ಲಿ ದಕ್ಷಿಣ ಕೇರಳ ಕರಾವಳಿ ಮತ್ತು ಪಕ್ಕದ ಲಕ್ಷದ್ವೀಪ ಪ್ರದೇಶದಲ್ಲೂ ಇದೇ ವಾತಾವರಣ ಇರಲಿದೆ ಎಂದು ತಿಳಿಸಿದೆ.
ಇದೇ ರೀತಿಯ ಹವಾಮಾನ ಪರಿಸ್ಥಿತಿಗಳು ಪಕ್ಕದ ನೈಋತ್ಯ ಅರೇಬಿಯನ್ ಸಮುದ್ರದಲ್ಲಿ ಮತ್ತು ಸೊಮಾಲಿಯಾ ಕರಾವಳಿಯ ಉದ್ದಕ್ಕೂ ಮತ್ತು ಅಕ್ಕಪಕ್ಕದಲ್ಲಿ ಇದು ಮಳೆಯೂ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ತಿರುನಲ್ವೇಲಿ ಮತ್ತು ತೆಂಕಶಿ ಸೇರಿದಂತೆ ತಮಿಳುನಾಡಿನ ಕೆಲವು ಭಾಗಗಳಲ್ಲಿ ಭಾನುವಾರ (ಡಿಸೆಂಬರ್ 23) ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಈ ಭಾಗದಲ್ಲಿ ಮೀನುಗಾರರಿಗೆ ಡಿಸೆಂಬರ್ 17 ರಿಂದ 19 ರವರೆಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಿದೆ.












Click it and Unblock the Notifications