India Weather: ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ಬಿರುಗಾಳಿ ಮಳೆ ಮುನ್ಸೂಚನೆ

India Weather: ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದು ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗಿ ಸಹಿತ ಬಿರುಗಾಳಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ.

ಸೋಮವಾರ (ಜುಲೈ 29) ಅಸ್ಸಾಂ, ಒಡಿಶಾ, ಪಶ್ಚಿಮ ಬಂಗಾಳ, ಗುಜರಾತ್, ಮಹಾರಾಷ್ಟ್ರ, ತೆಲಂಗಾಣ, ಕೇರಳ ಮತ್ತು ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಗುಜರಾತ್‌ನ ಕೆಲವು ಪ್ರದೇಶಗಳಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಮಳೆ ಮತ್ತಷ್ಟು ಚುರುಕು ಪಡೆಯಲಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

India Weather Heavy rainfall forecast for next 5 days from july 29th

ಬಿಹಾರ, ಜಾರ್ಖಂಡ್, ಛತ್ತೀಸ್‌ಗಢ, ಉತ್ತರ ಪ್ರದೇಶ, ಮಧ್ಯಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ, ತಮಿಳುನಾಡು, ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ರಾಜಸ್ಥಾನದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಮುನ್ಸೂಚನೆ ನೀಡಿದೆ.

ಮಂಗಳವಾರ (ಜುಲೈ 30) ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಛತ್ತೀಸ್‌ಗಢ, ಉತ್ತರ ಪ್ರದೇಶ, ಮಧ್ಯಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ನವದೆಹಲಿ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.

ಗೋವಾ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕದ ಒಳನಾಡು ಭಾಗ, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತಮಿಳುನಾಡು ಮತ್ತು ಲಕ್ಷದ್ವೀಪದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ತುಂತುರು ಮಳೆಯಾಗುವ ಮುನ್ಸೂಚನೆ ನೀಡಿದೆ. ಇನ್ನು ಪಶ್ಚಿಮ ರಾಜಸ್ಥಾನದ ಕೆಲವು ಪ್ರದೇಶಗಳಲ್ಲಿ 40 °C ಅಥವಾ ಅದಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಮುಂದಿನ 5 ದಿನದ ಹವಾಮಾನದ ವಿವರ: ಚತ್ತೀಸ್‌ಗಢ ಮತ್ತು ಪಕ್ಕದ ಪ್ರದೇಶದ ಮೇಲೆ ಚಂಡಮಾರುತದ ಪ್ರಭಾವ ಬೀರಲಿದ್ದು, ಇದು ಪಶ್ಚಿಮಕ್ಕೆ ಚಲಿಸುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದೆ. ಈ ಹಿನ್ನೆಲೆ ಗುಜರಾತ್, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಪಕ್ಕದ ಪ್ರದೇಶಗಳಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಅಲ್ಲದೆ, ಗುಜರಾತ್‌ನ ಕೆಲವು ಪ್ರದೇಶಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ದಕ್ಷಿಣ ಗುಜರಾತ್‌ನಿಂದ ಕೇರಳದ ಕರಾವಳಿಯುದ್ದಕ್ಕೂ ಇದೇ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಇದೇ ವೇಳೆ ಮಹಾರಾಷ್ಟ್ರ ಮತ್ತು ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+