India weather: ದೇಶದ ಈ ಭಾಗಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ
India weather: ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಚುರುಕು ಪಡೆದಿದ್ದು, ಇನ್ನು ಕೆಲವು ರಾಜ್ಯಗಳಲ್ಲಿ ಇಂದಿನಿಂದ ಎಂಟ್ರಿ ಕೊಟ್ಟಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸುರಿಯಲಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮುಂದಿನ ಐದು ದಿನಗಳ ಕಾಲ ಮಹಾರಾಷ್ಟ್ರ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಮತ್ತೊಂದೆಡೆದೆ ವಾಯುವ್ಯ ಭಾರತದಾದ್ಯಂತ ತಾಪಮಾನದ ಪ್ರಮಾಣದಲ್ಲಿ ಹೆಚ್ಚಳ ಆಗುವ ಸಾಧ್ಯತೆಯಿದೆ. ಪೂರ್ವ-ಮಧ್ಯ ಭಾರತ, ಉತ್ತರ ಪ್ರದೇಶ ಮತ್ತು ಈಶಾನ್ಯ ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ತಾಪಮಾನದ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ.

ಮುಂದಿನ ಕೆಲವು ದಿನಗಳ ಕಾಲ ಪೂರ್ವ ಭಾರತದಲ್ಲಿ ತಾಪಮಾನದ ಪ್ರಮಾಣ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಮಧ್ಯ ಭಾರತದಲ್ಲಿ ಮುಂದಿನ ಮೂರು ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ರಾಜಸ್ಥಾನವನ್ನು ಹೊರತುಪಡಿಸಿ ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ ಮುಂದಿನ 5 ದಿನಗಳಲ್ಲಿ 3-4°C ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಜೂನ್ 8ರಂದು ಅರೇಬಿಯನ್ ಸಮುದ್ರ, ದಕ್ಷಿಣ ಮಹಾರಾಷ್ಟ್ರ, ತೆಲಂಗಾಣ, ದಕ್ಷಿಣ ಛತ್ತೀಸ್‌ಗಢದ ಕೆಲವು ಭಾಗಗಳಲ್ಲಿ, ದಕ್ಷಿಣ ಒಡಿಶಾ ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ಮುಂಗಾರು ಆರ್ಭಟಿಸಿದೆ. ಹಾಗೆಯೇ ಮುಂದಿನ 2-3 ದಿನಗಳ ಕಾಲ ಈ ಭಾಗಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎಂದು ತಿಳಿಸಿದೆ.












Click it and Unblock the Notifications