India Weather: ದೇಶದ ಈ ಭಾಗಗಳಲ್ಲಿ ಮುಂದಿನ 6 ದಿನ ಭಾರೀ ಮಳೆ ಮುನ್ಸೂಚನೆ

India Weather: ಭಾರತದ ಬಹುತೇಕ ಭಾಗಗಳಲ್ಲಿ ಇದೀಗ ಮಳೆರಾಯನ ಆರ್ಭಟ ಕಡಿಮೆಯಾಗಿದ್ದು, ಕೆಲವೇ ರಾಜ್ಯಗಳಲ್ಲಿ ಮಾತ್ರ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಹಾಗೆಯೇ ಮುಂದಿನ 6 ದಿನಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎಂದು ಇಲ್ಲಿ ತಿಳಿಯಿರಿ.

ಹಿಮಾಚಲ ಪ್ರದೇಶ, ಉತ್ತರಾಖಂಡ, ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಅರುಣಾಚಲ ಪ್ರದೇಶ, ಪೂರ್ವ ಉತ್ತರ ಪ್ರದೇಶ, ಬಿಹಾರ ಮತ್ತು ಕರ್ನಾಟಕದ ದಕ್ಷಿಣ ಒಳನಾಡು ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

India Weather Heavy rainfall forecast for next 6 days in these States from august 10th

ನವದೆಹಲಿಯಲ್ಲಿ ಶನಿವಾರ ಮತ್ತು ಭಾನುವಾರ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗೆ ಆಗಸ್ಟ್ 10 ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ಬಿಹಾರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪೂರ್ವ ರಾಜಸ್ಥಾನ, ಮಧ್ಯಪ್ರದೇಶಕ್ಕೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ವಾಯುವ್ಯ ಭಾರತ ಹವಾಮಾನ: ಮುಂದಿನ ಒಂದು ವಾರ ಹಿಮಾಚಲ ಪ್ರದೇಶ, ಉತ್ತರಾಖಂಡ, ಪೂರ್ವ ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶ, ಪಂಜಾಬ್, ನವದೆಹಲಿ, ಪಶ್ಚಿಮ ರಾಜಸ್ಥಾನ, ಹರಿಯಾಣ-ಚಂಡೀಗಢದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 10ರಂದು ಹಿಮಾಚಲ ಪ್ರದೇಶ, ಆಗಸ್ಟ್ 10 ಮತ್ತು 11ರಂದು ಉತ್ತರಾಖಂಡ ಮತ್ತು ಪೂರ್ವ ರಾಜಸ್ಥಾನದಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಆಗಸ್ಟ್ 10-16ರ ವರೆಗೆ ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ ಮತ್ತು ಪೂರ್ವ ಉತ್ತರ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಆಗಸ್ಟ್ 10ರಂದು ಪಂಜಾಬ್, ಆಗಸ್ಟ್ 10-12ರ ವರೆಗೆ ಹರಿಯಾಣ, ಚಂಡೀಗಢ, ಆಗಸ್ಟ್ 10-13ರ ವರೆಗೆ ಪಶ್ಚಿಮ ಉತ್ತರ ಪ್ರದೇಶ, ಆಗಸ್ಟ್ 10, 11, 14, 15 ಮತ್ತು 16ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಪಶ್ಚಿಮ ಮತ್ತು ಮಧ್ಯ ಭಾರತದ ಹವಾಮಾನ: ಮಧ್ಯಪ್ರದೇಶ, ಛತ್ತೀಸ್‌ಗಢ, ಕೊಂಕಣ, ಗೋವಾ, ಗುಜರಾತ್‌, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಸೌರಾಷ್ಟ್ರ ಮತ್ತು ಕಚ್‌ಗಳಲ್ಲಿ ಚದುರಿದಂತೆ ವ್ಯಾಪಕವಾದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 10ರಂದು ಮಧ್ಯಪ್ರದೇಶ, ಕೊಂಕಣ, ಗೋವಾ, ಮಧ್ಯ ಮಹಾರಾಷ್ಟ್ರ ಮತ್ತು ಗುಜರಾತ್‌ನ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಪೂರ್ವ ಮತ್ತು ಈಶಾನ್ಯ ಭಾರತದ ಹವಾಮಾನ: ಒಂದು ವಾರ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಸಾಧಾರಣವಾಗಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 10ರಂದು ಅರುಣಾಚಲ ಪ್ರದೇಶ ಮತ್ತು ಬಿಹಾರದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.

ಆಗಸ್ಟ್ 10ರಿಂದ 16ರ ವರೆಗೆ ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಬಿಹಾರದಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 10ರಿಂದ 11ರ ವರೆಗೆ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಆಗಸ್ಟ್ 13ರಿಂದ 16ರ ವರೆಗೆ ಒಡಿಶಾ, ಜಾರ್ಖಂಡ್‌ನಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಹಾಗೆಯೇ ಮುಂದಿನ ಒಂದು ವಾರ ತಮಿಳುನಾಡು, ಪುದುಚೇರಿ, ಕೇರಳ, ಲಕ್ಷದ್ವೀಪ ಮತ್ತು ಕರ್ನಾಟಕದಲ್ಲಿ ವ್ಯಾಪಕವಾದ ಸಾಧಾರಣ ಮಳೆಯಾಗು ಮತ್ತು ಕರಾವಳಿ ಆಂಧ್ರ ಪ್ರದೇಶ, ತೆಲಂಗಾಣದಲ್ಲಿ ಚದುರಿದ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಆಗಸ್ಟ್ 10ರಿಂದ 13ರ ವರೆಗೆ ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಆಂಧ್ರಪ್ರದೇಶ, ಆಗಸ್ಟ್ 11-14ರ ವರೆಗೆ ತಮಿಳುನಾಡು ಮತ್ತು ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 5 ದಿನಗಳಲ್ಲಿ ತಮಿಳುನಾಡು, ಪುದುಚೇರಿ, ಕೇರಳ, ಮಧ್ಯ ಮಹಾರಾಷ್ಟ್ರ, ಗುಜರಾತ್, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+