India Weather: ದೇಶದ ಈ ಭಾಗಗಳಲ್ಲಿ ಮುಂದಿನ 6 ದಿನ ಭಾರೀ ಮಳೆ ಮುನ್ಸೂಚನೆ

India Weather: ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಿಂದ ಈಗಾಗಲೇ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಮುಂದಿನ 6 ದಿನಗಳ ಕಾಲ ರಣಭೀಕರ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎಂದು ಇಲ್ಲಿ ತಿಳಿಯಿರಿ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಆಗಸ್ಟ್ 7ರಂದು, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾದಲ್ಲಿ 12 ಸೆಂ.ಮೀಗಿಂತ ಹೆಚ್ಚು ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ತಿಳಿಸಿದೆ.

India Weather Heavy rainfall forecast for next 6 days in these States from august 7th

ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ ಒಂದು ವಾರ ಮುಂಗಾರು ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ. ಇನ್ನು ಇಂದು (ಆಗಸ್ಟ್‌ 07) ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮಹಾರಾಷ್ಟ್ರ, ದೆಹಲಿಯಲ್ಲಿ ಗುಡುಗು ಅಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ.

ಬುಧವಾರ (ಆಗಸ್ಟ್‌ 07) ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾದಲ್ಲಿ ಅತಿ ಹೆಚ್ಚು ಅಂದರೆ 12 ಸೆಂ.ಮೀಟರ್‌ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದೇ ವೇಳೆ ಜಮ್ಮು, ಪಂಜಾಬ್, ಹರಿಯಾಣ, ಚಂಡೀಗಢ, ಪೂರ್ವ ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಜಾರ್ಖಂಡ್, ಒಡಿಶಾ, ಅರುಣಾಚಲ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಗೋವಾ, ಮಧ್ಯ ಮಹಾರಾಷ್ಟ್ರ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್, ಕರಾವಳಿ ಆಂಧ್ರಪ್ರದೇಶ, ಛತ್ತೀಸ್‌ಗಢ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಗುಡುಗು ಮಳೆಯಾಗುವ ಸಾಧ್ಯತೆಯಿದೆ.

ಆಗಸ್ಟ್‌ 7ರಿಂದ 13ರ ವರೆಗೆ ಒಂದು ವಾರ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿ, ಗೋವಾ, ಗುಜರಾತ್, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ತ್ರಿಪುರಾ, ಬಿಹಾರ, ಒಡಿಶಾ, ಜಾರ್ಖಂಡ್, ಮಣಿಪುರ, ಪಶ್ಚಿಮ ಬಂಗಾಳ, ಮಧ್ಯ ಮಹಾರಾಷ್ಟ್ರ ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ಮುಂದಿನ 5 ದಿನಗಳ ಕಾಲ ಕೇರಳ, ಲಕ್ಷದ್ವೀಪ, ಕರ್ನಾಟಕ, ತಮಿಳುನಾಡು, ಪುದುಚೇರಿ, ಕಾರೈಕಲ್, ಕರಾವಳಿ ಆಂಧ್ರಪ್ರದೇಶ, ತೆಲಂಗಾಣದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+