India Weather: ದೇಶದ ಈ ಭಾಗಗಳಲ್ಲಿ ಮುಂದಿನ 6 ದಿನ ಬಿರುಗಾಳಿ ಮಳೆ ಮುನ್ಸೂಚನೆ.!
India Weather: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆ ತಗ್ಗಿದ್ದು, ಇನ್ನು ಕೆಲವೆಡೆ ಮಾತ್ರ ಬಿಟ್ಟು ಬಿಡದೇ ಮಳೆರಾಯ ಆರ್ಭಟಿಸುತ್ತಲೇ ಇದ್ದಾನೆ. ಹಾಗೆಯೇ ಮುಂದಿನ 6 ದಿನಗಳ ಕಾಳ ದೇಶದ ಈ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ ಇಂದು (ಆಗಸ್ಟ್ 08) ನವದೆಹಲಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆ ನೋಯ್ಡಾ ಸೇರಿದಂತೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಆಗಸ್ಟ್ 10ರಿಂದ 12ರ ವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಅಲ್ಲದೆ, ಇದೇ ವೇಳೆ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಉತ್ತರಾಖಂಡ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಆಗಸ್ಟ್ 10ರಂದು ಹಿಮಾಚಲ ಪ್ರದೇಶ, ಆಗಸ್ಟ್ 8ರಂದು ಉತ್ತರಾಖಂಡದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆಗಸ್ಟ್ 10 ಮತ್ತು 11ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ, ಆಗಸ್ಟ್ 13ರ ವರೆಗೆ ಉತ್ತರಾಖಂಡ, ರಾಜಸ್ಥಾನದಲ್ಲಿ, ಆಗಸ್ಟ್ 11 ಹಿಮಾಚಲ ಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಆಗಸ್ಟ್ 10ರಂದು ಪಂಜಾಬ್, ಆಗಸ್ಟ್ 8ರಿಂದ 10ವರೆಗೆ ಹರಿಯಾಣದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಆಗಸ್ಟ್ 14 ರವರೆಗೆ ಗೋವಾ, ಗುಜರಾತ್, ಮಧ್ಯ ಮಹಾರಾಷ್ಟ್ರ ಸೇರಿದಂತ ಹಲವು ರಾಜ್ಯಗಳಲ್ಲಿ ಸಾಧಾರಣವಾಗಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಆಗಸ್ಟ್ 8 ರಂದು ಅಂದರೆ ಇಂದು ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನಗಳ ಕಾಲ ತೆಲಂಗಾಣದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಈಗಾಗಲೇ ಕೇರಳದ ವಯನಾಡಿನಲ್ಲಿ ಭೂಕುಸಿತದಿಂದ ದೊಡ್ಡ ಅವಾಂತರವೇ ಸಂಭವಿಸಿದ್ದು, ಪ್ರಾಣಹಾನಿಗಳು ಆಗಿವೆ. ಈ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ. ಯಾಕೆಂದರೆ ಈ ರಾಜ್ಯದಲ್ಲಿ ಬೇರೆ ರಾಜ್ಯದವರು ಕೂಡ ಕೆಲಸಕ್ಕೆ ಬಂದಿದ್ದು, ಘಟನೆಯಲ್ಲಿ ಸಾವನ್ನಪ್ಪಿರುವ ಘಟನೆಗಳು ನಡೆದಿವೆ. ಇನ್ನೂ ಕೂಡ ಸಾವಿನ ಸಂಖ್ಯೆ ಏರುತ್ತಲೇ ಇದೆ. ಇದೀಗ ಮಳೆರಾಯನ ಆರ್ಭಟ ಕಡಿಮೆಯಾಗಿದ್ದು, ಅಕ್ಕಪಕ್ಕದ ಜಿಲ್ಲೆಗಳ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.












Click it and Unblock the Notifications