India Weather: ದೇಶದ ಈ ಭಾಗಗಳಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ

India Weather: ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಹಾಗೆಯೇ ಮುಂದಿನ 4-5 ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾಹಿತಿ ಇಲ್ಲಿದೆ ಗಮನಿಸಿ.

ಭಾರತೀಯ ಹವಾಮಾನ ಇಲಾಖೆ ಬುಧವಾರ (ಜುಲೈ 24) ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಇಂದು ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಬೈ ಮತ್ತು ನವದೆಹಲಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.

India Weather Heavy rainfall forecast for next four to five days in these

ಮುಂದಿನ ಎರಡು ದಿನಗಳಲ್ಲಿ ಗುಜರಾತ್, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಇನ್ನು ಇದೇ ಅವಧಿಯಲ್ಲಿ ಗಂಗಾ ಬಯಲು ಪ್ರದೇಶಗಳಲ್ಲಿ ಮಳೆ ಪ್ರಮಾನ ಮತ್ತಷ್ಟು ಚುರುಕು ಪಡೆಯಲಿದೆ ಎನ್ನುವ ಮುನ್ಸೂಚನೆಯನ್ನು ನೀಡಿದೆ.

ಇದೇ ವೇಳೆ ಉತ್ತರಾಖಂಡ್, ಪಂಜಾಬ್, ಹರಿಯಾಣ ಮತ್ತು ಪೂರ್ವ ರಾಜಸ್ಥಾನದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ಜಮ್ಮುವಿನಲ್ಲಿ ಜುಲೈ 23-27ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಪಶ್ಚಿಮ ರಾಜಸ್ಥಾನದಲ್ಲಿ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮುಂದಿನ ಐದು ದಿನಗಳಲ್ಲಿ ಅಂದರೆ ಜುಲೈ 29ರ ವರೆಗೆ ಹಿಮಾಚಲ ಪ್ರದೇಶ, ಉತ್ತರಾಖಂಡ, ಪೂರ್ವ ರಾಜಸ್ಥಾನ, ಹರಿಯಾಣ, ಚಂಡೀಗಢ, ನವದೆಹಲಿ, ಪಂಜಾಬ್ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಈಗಾಗಲೇ ಇಂದು ಬೆಳ್ಳಂಬೆಳಗ್ಗೆಯೇ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮಳೆಯಾಗಿದೆ. ಇನ್ನು ಮಳೆ ಮುಂದುವರೆಯುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆಯು ರಾಷ್ಟ್ರ ರಾಜಧಾನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.

ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಕಚ್, ರಾಜ್‌ಕೋಟ್, ಜಾಮ್‌ನಗರ, ಪೋರಬಂದರ್, ಜುನಾಗಢ್, ದೇವಭೂಮಿ ದ್ವಾರಕಾ ಸೇರಿದಂತೆ ಮಧ್ಯ ಗುಜರಾತ್, ದಕ್ಷಿಣ ಗುಜರಾತ್ ಮತ್ತು ಸೌರಾಷ್ಟ್ರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.

ದ್ವಾರಕಾದಲ್ಲಿ ಮಂಗಳವಾರ ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ 158 ಮಿಲಿ ಮೀಟರ್‌ ಮಳೆ ದಾಖಲಾಗಿದೆ. ಕಚ್ ಜಿಲ್ಲೆಯ ಮಾಂಡವಿ ತಾಲೂಕು 141 ಮಿಲಿ ಮೀಟರ್‌, ಜಾಮ್‌ನಗರ 134 ಮಿಲಿ ಮೀಟರ್‌, ಕಚ್‌ನ ನಖತ್ರನಾ 127 ಮಿಲಿ ಮೀಟರ್‌, ಸೂರತ್‌ನ ಪಲ್ಸಾನಾ 120 ಮಿಲಿ ಮೀಟರ್‌ ಮಳೆಯಾಗಿದೆ.

ರಾಜಸ್ಥಾನದಲ್ಲಿ ಮುಂದಿನ 4-5 ದಿನಗಳ ಕಾಲ ಮಳೆ: ಪೂರ್ವ ರಾಜಸ್ಥಾನದ ಜೈಪುರ, ಭರತ್‌ಪುರ, ಉದಯಪುರ, ಕೋಟಾ ಮತ್ತು ಅಜ್ಮೀರ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಳ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಪಶ್ಚಿಮ ರಾಜಸ್ಥಾನದ ಜೋಧ್‌ಪುರ ಮತ್ತು ಬಿಕಾನೇರ್ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+