India Weather: ದೇಶದ ಈ ಭಾಗಗಳಲ್ಲಿ ಮುಂದಿನ ಒಂದು ವಾರ ಬಿರುಗಾಳಿ ಮಳೆ ಮುನ್ಸೂಚನೆ

India Weather: ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ ಒಂದು ವಾರ ಈ ಭಾಗಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ.

ಭಾರತ ಹವಾಮಾನ ಇಲಾಖೆ ಪ್ರಕಾರ, ಗೋವಾ, ಮಧ್ಯ ಮಹಾರಾಷ್ಟ್ರದಲ್ಲಿ ಮುಂದಿನ ಎರಡು ದಿನಗಳವರೆಗೆ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯು ಮುಂದುವರಿಯುವ ಸಾಧ್ಯತೆಯಿದೆ. ನಂತರ ಕ್ರಮೇಣ ಕಡಿಮೆಯಾಗುವ ನಿರೀಕ್ಷೆಯಿದೆ. ಅಲ್ಲದೆ, ಮುದಿನ ಮೂರು ದಿನಗಳ ಅವಧಿಯಲ್ಲಿ ಮಧ್ಯ ಭಾರತದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

India Weather Heavy rainfall forecast for next one week in these states from july 26th

ಒಂದು ವಾರ ಮಳೆ: ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ವ್ಯಾಪಕವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಭಾರತದಲ್ಲಿ ಈ ವಾರವಿಡೀ ಸಾಧಾರಣ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನವದೆಹಲಿಯ ಹವಮಾನಾ ಮುನ್ಸೂಚನೆ: ಇನ್ನು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು (ಜುಲೈ 26) ಬೆಳಗ್ಗೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಹಾಗೆಯೇ ಮುಂದಿನ ದಿನಗಳಲ್ಲಿ ನವದೆಹಲಿಯಲ್ಲಿ ಹೆಚ್ಚುವರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಜುಲೈ 28ರ ವರೆಗೆ ಭಾರೀ ಮಳೆ: ಘಾಜಿಯಾಬಾದ್ ಮತ್ತು ಗುರುಗ್ರಾಮ್ ಸೇರಿದಂತೆ ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಸುರಿಯುವ ಮುನ್ಸೂಚನೆ ಇದ್ದು, ಜುಲೈ 27ರ ವರೆಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜುಲೈ 28ರ ವರೆಗೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ.

ಭಾರೀ ಮಳೆ ಹಿನ್ನೆಲೆ ಜುಲೈ 26ರಂದು ಮುಂಬೈಗೆ ಆರೆಂಜ್ ಅಲರ್ಟ್ ಮತ್ತು ಜುಲೈ 27ಕ್ಕೆ ಯೆಲ್ಲೋ ಅಲರ್ಟ್‌ ನೀಡಿದೆ. ಇನ್ನು ಜುಲೈ 27ರ ವರೆಗೆ ಮಧ್ಯ ಮಹಾರಾಷ್ಟ್ರದ ಘಾಟ್ ಪ್ರದೇಶಗಳಲ್ಲಿ ಕೊಂಕಣ ಮತ್ತು ಗೋವಾದಲ್ಲಿ ಪ್ರತ್ಯೇಕವಾದ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಜುಲೈ 26ರಂದು ಗುಜರಾತ್‌ನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಈ ಭಾಗಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 27 ರಂದು ರಾಯಗಡಕ್ಕೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇನ್ನು ಮಹಾರಾಷ್ಟ್ರದ ಪುಣೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+