India weather update: ದೇಶದ ಈ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ
ನವದೆಹಲಿ, ಫೆಬ್ರವರಿ, 12 : ಇದೀಗ ದೇಶದ ಬಹುತೇಕ ಭಾಗಗಲ್ಲಿ ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗುತ್ತಿದೆ. ಈ ಭೀಕರ ಚಳಿಯ ನಡುವೆಯೂ ಇನ್ನು ಮುಂದಿನ ಮೂರ್ನಾಲ್ಕು ದಿನಗಳ ಕಾಲ ಹಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಈಗಾಗಲೇ ಭಾರತದ ಹಲವು ಪೂರ್ವ ರಾಜ್ಯಗಳಲ್ಲಿ ಕಳೆದ ವಾರ ಮಳೆಯಾಗಿದೆ. ಇದೀಗ ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ ಮುಂದಿನ ಮೂರು ದಿನಗಳ ಕಾಲ ಉತ್ತರ ಪ್ರದೇಶ ಮತ್ತು ಹೆಚ್ಚಿನ ಪೂರ್ವ ರಾಜ್ಯಗಳ ಮೇಲೆ ಹೊಸ ಮಳೆಯ ಅನುಭವ ಆಗಲಿದೆ ಎನ್ನುವ ಮುನ್ಸೂಚನೆ ಇದೆ.

ಗುರುವಾರದವರೆಗೆ (ಫೆಬ್ರವರಿ 12ರಿಂದ 15) ಒಡಿಶಾದಲ್ಲಿ ಮಳೆಯಾಗಲಿದೆ. ಮಂಗಳವಾರ, ಬುಧವಾರ ಮತ್ತು ಗುರುವಾರ (13, 14, 15) ಬಿಹಾರ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನ ಕೆಲವು ಭಾಗಗಳಲ್ಲಿ ಹಗುರದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಸಿಕ್ಕಿಂನಲ್ಲಿ ಮಂಗಳವಾರದಿಂದ ಗುರುವಾರದವರೆಗೆ (ಫೆಬ್ರವರಿ 13-15)ರವರೆಗೆ ಮಿಂಚು ಗುಡುಗು ಸಹಿತ ಮಳೆಯಾಗವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಜಾರ್ಖಂಡ್‌ನಲ್ಲಿ ಮುಂದಿನ ಮೂರು ದಿನಗಳಲ್ಲಿ ಬಿರುಗಾಳಿ ಸಮೇತ ಮಳೆಯಾಗುವ ಸಾಧ್ಯತೆಯಿದೆ. ಇದರ ಮಧ್ಯೆಯೂ ಮೂರು ದಿನಗಳ ನಂತರ, ಕೋಲ್ಕತ್ತಾದಲ್ಲಿ ಸಾಧಾರಣ ಮಳೆಯಾಗಲಿದೆ. ಮಂಗಳವಾರ, ಬುಧವಾರ ಪಾಟ್ನಾದಲ್ಲಿ ಒಂದೆರಡು ದಿನ ಮಳೆಯನ್ನು ನಿರೀಕ್ಷಿಸಬಹುದು. ಹಾಗೆಯೇ ಒಡಿಶಾದ ಭುವನೇಶ್ವರದಲ್ಲಿ ಅಲ್ಲಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗಲಿದ ಎಂದು ತಿಳಿಸಿದೆ.
ಮುಂದಿನ ಎರಡು ದಿನಗಳಲ್ಲಿ ಪೂರ್ವ ಭಾರತದ ತಾಪಮಾನದಲ್ಲಿ 2-4 ° C ಏರಿಕೆಯಾಗಲಿದೆ. ಆದರೂ, ಮಂಗಳವಾರ ಪೂರ್ವ ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್, ಪಶ್ಚಿಮ ಬಂಗಾಳದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.












Click it and Unblock the Notifications