India Weather: ದೇಶದ ಈ ಭಾಗಗಳಲ್ಲಿ ಮುಂದಿನ ಮೂರು ದಿನ ಬಿರುಗಾಳಿ ಮಳೆ ಮುನ್ಸೂಚನೆ
India Weather: ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಹಾಗೆಯೇ ಮುಂದಿನ ಮೂರು ದಿನಗಳಲ್ಲಿ ಈ ಭಾಗಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾಹಿತಿ ಇಲ್ಲಿದೆ ತಿಳಿಯಿರಿ.
ಜುಲೈ 28 ರಂದು ಮಧ್ಯಪ್ರದೇಶ ಮತ್ತು ಗುಜರಾತ್‌ನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಮುನ್ಸೂಚನೆ ನೀಡಿದ್ದು, ಈ ಭಾಗಗಳಿಗೆ ಮುಂಜಾಗ್ರತಾ ಕ್ರಮವಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಗುಜರಾತ್, ಕರ್ನಾಟಕ, ರಾಜಸ್ಥಾನ ಮತ್ತು ಮಹಾರಾಷ್ಟ್ರಕ್ಕೆ ಆರೆಂಜ್ ಅಲರ್ಟ್ ಘೋಷಿಸಿದೆ.

ಜುಲೈ 30ರವರೆಗೂ ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ಮುಂಗಾರು ಮತ್ತಷ್ಟು ಚುರುಕು ಪಡೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಲಾಸ್‌ಪುರ್, ಹಮೀರ್‌ಪುರ್, ಮಂಡಿ, ಕಂಗ್ರಾ, ಕುಲು, ಸೋಲನ್ ಮತ್ತು ಶಿಮ್ಲಾ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಸಂಸ್ಥೆ ಮುನ್ಸೂಚನೆ ನೀಡಿದೆ.
ಪಶ್ಚಿಮ ಮತ್ತು ಮಧ್ಯ ಭಾರತದ ಹವಾಮಾನದ ವಿವರ: ಹವಾಮಾನ ಇಲಾಖೆಯು ಜುಲೈ 28ರಂದು ಗೋವಾ, ಮಹಾರಾಷ್ಟ್ರಮತ್ತು ಗುಜರಾತ್‌ನಲ್ಲಿ ಭಾರೀ ಮಳೆಯಾಗಲಿ ಎಂದು ಮುನ್ಸೂಚನೆ ನೀಡಿದೆ. ಅಲ್ಲದೆ, ಜುಲೈ 31 ರಂದು ಮಧ್ಯಪ್ರದೇಶದಲ್ಲಿ, ಜುಲೈ 28ರಿಂದ 29ರ ವರೆಗೂ ಗುಜರಾತ್‌ನಲ್ಲಿ ಭಾರೀ ಮಳೆ ಸುರುಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುವ್ಯ ಭಾರತದ ಹವಾಮಾನ ವಿವರ: ಜುಲೈ 30 ಮತ್ತು 31ರಂದು ಜಮ್ಮು-ಕಾಶ್ಮೀರ, ಪಂಜಾಬ್ ಮತ್ತು ಉತ್ತರಾಖಂಡದಲ್ಲಿ ಪ್ರತ್ಯೇಕವಾದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಜುಲೈ 28 ರಂದು ಪೂರ್ವ ರಾಜಸ್ಥಾನ, ಜುಲೈ 31ರವರೆಗೆ ಹಿಮಾಚಲ ಪ್ರದೇಶ, ಹರಿಯಾಣ ಮತ್ತು ನವದೆಹಲಿಯಲ್ಲಿ ಭಾರೀ ಮಳೆ ಬೀಳಲಿದೆ ಎಂದು ತಿಳಿಸಿದೆ.
ಅಲ್ಲದೆ, ಜುಲೈ 28 ಮತ್ತು 29ರಂದು ಉತ್ತರಾಖಂಡದಲ್ಲಿ, ಜುಲೈ 31ರವರೆಗೆ ರಾಜಸ್ಥಾನದಲ್ಲಿ ಮತ್ತು ಜುಲೈ 30 ಮತ್ತು 31 ರಂದು ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 28 ರಿಂದ 30ರ ವರೆಗೆ ತಮಿಳುನಾಡು, ಪುದುಚೇರಿ, ಕೇರಳ ಮತ್ತು ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 29ಮತ್ತು 30 ರಂದು ನಾಗಾಲ್ಯಾಂಡ್ ಮತ್ತು ಮಣಿಪುರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಿಕ್ಕಿಂನಲ್ಲಿ ಜುಲೈ 29ರವರೆಗೆ, ಪಶ್ಚಿಮ ಬಂಗಾಳದಲ್ಲಿ ಜುಲೈ 31ರ ವರೆಗೆ, ಮುಂದಿನ ಮೂರು ದಿನಗಳಲ್ಲಿ ಬಿಹಾರದಲ್ಲಿ ಮತ್ತು ಜುಲೈನಲ್ಲಿ ಜಾರ್ಖಂಡ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಒಡಿಶಾದಲ್ಲಿ ಜುಲೈ 31 ರವರೆಗೆ, ಅರುಣಾಚಲ ಪ್ರದೇಶದಲ್ಲಿ ಜುಲೈ 28 ಮತ್ತು 29ರ ವರೆಗೆ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಜುಲೈ 31ರ ವರೆಗೆ ಮತ್ತು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಜುಲೈ 28ರಿಂದ 31ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications