India weather: ದೇಶದ ಈ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ

ನವದೆಹಲಿ, ಜನವರಿ, 11: ಇದೀಗ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ನಡುವೆಯೂ ದೇಶದ ಕೆಲವೆಡೆ ಮಳೆಯಾಗುತ್ತಿದೆ. ಅದರಲ್ಲೂ ತಮಿಳುನಾಡು, ಕೇರಳ ಹಲವೆಡೆ ಮಳೆ ಸುರಿಯುತ್ತಿದೆ. ಇನ್ನು ಕರ್ನಾಟಕದ ಕೆಲವು ಭಾಗಗಳಲ್ಲಿ ಮಾತ್ರ ಆಗಾಗಾ ಜಿನುಗು ಮಳೆಯಾಗುತ್ತಿದೆ. ಇನ್ನು ಇಂದಿನಿಂದ ಎರಡು ದಿನಗಳ ಕಾಲ ದೇಶದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ಲಕ್ಷದ್ವೀಪದಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಂಡಮಾನ್-ನಿಕೋಬಾರ್ ದ್ವೀಪಗಳು, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕೇರಳ-ಮಾಹೆಯಲ್ಲಿ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಹರಿಯಾಣ, ಚಂಡೀಗಢ, ನವದೆಹಲಿ, ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ಶೀತದ ಪ್ರಮಾಣ ಹೆಚ್ಚಿರಲಿದೆ ಎಂದು ತಿಳಿಸಿದೆ.

India weather: Heavy rainfall forecast for next two days from january 12 in these parts

ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಉತ್ತರ ಪ್ರದೇಶ, ಪಂಜಾಬ್ ಮತ್ತು ಪಶ್ಚಿಮ ರಾಜಸ್ಥಾನದ ಪ್ರತ್ಯೇಕ ಸ್ಥಳಗಳಲ್ಲಿ ಬೆಳಗಿನ ಸಮಯದಲ್ಲಿ ದಟ್ಟವಾದ ಮಂಜು ಇರಲಿದ ಎಂದು ತಿಳಿಸಿದೆ. ಉತ್ತರಾಖಂಡದ ಪ್ರತ್ಯೇಕ ಸ್ಥಳಗಳಲ್ಲಿ ಬೆಳಗಿನ ಸಮಯದಲ್ಲಿ ಹೆಚ್ಚು ಮಂಜು ಬೀಳುವ ಮುನ್ಸೂಚನೆ ಇದೆ.

ಇನ್ನು ಜನವರಿ 13 ರಿಂದ ಅಂಡಮಾನ್-ನಿಕೋಬಾರ್ ದ್ವೀಪಗಳು, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಪ್ರತ್ಯೇಕ ಭಾಗಗಳಲ್ಲಿ ಮಳೆ ಬೀಳುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಇನ್ನು ಸಂಜೆ ವೇಳೆಗೆ ಲಡಾಖ್ ಮೇಲೆ ಪ್ರತ್ಯೇಕವಾದ ಹಿಮ ಬೀಳುವ ಸಾಧ್ಯತೆ ಇದೆ.

ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ನವದೆಹಲಿ, ಪಂಜಾಬ್ ಮತ್ತು ಉತ್ತರ ಮಧ್ಯಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಬೆಳಗ್ಗೆ ಗಂಟೆವರೆಗೂ ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ. ಇನ್ನು ಉತ್ತರಾಖಂಡದಲ್ಲಿ ತುಸು ಹೆಚ್ಚಾಗಿಯೇ ಮಂಜು ಕವಿಯುವ ಸಾಧ್ಯತೆಯಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಅದರಲ್ಲೂ ಲಕ್ಷದ್ವೀಪ, ತಮಿಳುನಾಡು ಮತ್ತು ಕೇರಳದಲ್ಲಿ ಗುಡುಗು ಸಹಿತ ಗುಡುಗು ಸಹಿತ ಚದುರಿದಂತೆ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+