India Weather: ಚಳಿಗಾಳಿ ನಡುವೆಯೂ ದೇಶದ ಈ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ
ನವದೆಹಲಿ, ಫೆಬ್ರವರಿ, 04: ಭಾರತದ ಬಹುತೇಕ ಭಾಗಗಳಲ್ಲಿ ತಾಪಮಾನ ಪ್ರಮಾಣ ಕಡಿಮೆಯಾಗಿ ಮೈಕೊರೆಯುವ ಚಳಿಯ ವಾತಾವರಣ ನಿರ್ಮಾಣವಾಗುತ್ತಿದೆ. ಇನ್ನು ಉತ್ತರ ಭಾರತದದಲ್ಲಿ ಹಿಮಪಾತದಂತಹ ವಾತಾವರಣ ನಿರ್ಮಾಣವಾಗುತ್ತಿದ್ದು, ದೇಶದ ಕೆಲವೆಡೆ ಮಾತ್ರ ಮುಂದಿನ ಎರಡು ದಿನಗಳ ಕಾಲ ಮಳೆಯಾದಗಲಿದ ಎನ್ನುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಜಮ್ಮು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಗಳಲ್ಲಿ ಭಾರೀ ಹಿಮಪಾತ ವಾತಾವರಣ ನಿರ್ಮಾಣವಾಗುತ್ತಲಿದ್ದು, ಇಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯೆತೆಯಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಶನಿವಾರ (ಫೆಬ್ರವರಿ 03) ನವದೆಹಲಿಯಲ್ಲಿ ಬಿಸಿಲಿನ ಪ್ರಮಾಣ ಕಡಿಮೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರತೀಯ ಹವಾಮಾನ ಇಲಾಖೆ (IMD)ಯ ಇತ್ತೀಚಿನ ಮುನ್ಸೂಚನೆಗಳ ಪ್ರಕಾರ, ಮುಂದಿನ ವಾರ ಈ ಭಾಗಗಳಲ್ಲಿ ತಾಪಮಾನದ ಪ್ರಮಾಣ ಇಳಿಕೆಯಾಗಲಿದ್ದು, ಚಳಿಯ ಗಾಳಿ ಮತ್ತು ದಟ್ಟವಾದ ಮಂಜಿನ ನಡುವೆಯೇ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ನವದೆಹಲಿ ಹವಾಮಾನ ಮುನ್ಸೂಚನೆ: ನವದೆಹಲಿ ಮತ್ತು ಇಲ್ಲಿನ ನೆರೆಯ ಪ್ರದೇಶದಲ್ಲಿ ಇಂದು (ಭಾನುವಾರ ಫೆಬ್ರವರಿ 04) ಬೆಳಗ್ಗೆ ಲಘು ಮಳೆಯಾಗಿದ್ದು, ಕನಿಷ್ಠ ತಾಪಮಾನವು 10 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಇನ್ನು ಇಂದು ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗರಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್‌ಗೆ ತಲುಪುವ ಸಾಧ್ಯತೆಯಿದ್ದು, ಕನಿಷ್ಠ ತಾಪಮಾನವು 10 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯೆತೆಯಿದೆ.
ಶನಿವಾರ (ಫೆಬ್ರವರಿ 03) ಬೆಳಗಿನ ಸಮಯದಲ್ಲಿ ನವದೆಹಲಿಯಲ್ಲಿ ತಾಪಮಾನ 6.7 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಿದೆ. ಇದು ವರ್ಷದ ಈ ಸಮಯದಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಕಡಿಮೆಯಾಗಿದೆ. ಕೆಲವು ಪ್ರತ್ಯೇಕ ಪ್ರದೇಶಗಳಲ್ಲಿ ದಟ್ಟವಾದ ಮಂಜು ನಿರ್ಮಾಣವಾಗಿದ್ದು, ಚಳಿಯ ವಾತಾವರಣವಾಗಿತ್ತು.
ಇನ್ನು ಫೆಬ್ರವರಿ 4 ಮತ್ತು 5ರಂದು ಹಿಮಾಚಲ ಪ್ರದೇಶದಲ್ಲಿ ಹಿಮಪಾತ ಸಂಭವಿಸಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆಯು ಹೆಚ್ಚಿನ ಪ್ರದೇಶಗಳಲ್ಲಿ ಲಘುವಾಗಿ ಮಧ್ಯಮ ಹಿಮಪಾತವನ್ನು ಮತ್ತು ಮಧ್ಯ ಮತ್ತು ಎತ್ತರದ ಬೆಟ್ಟಗಳ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಹಿಮಪಾತ ಸಂಭವಿಸಲಿದೆ ಎನ್ನುವ ಮುನ್ಸೂಚನೆಯನ್ನು ನೀಡಿದೆ. ಇನ್ನು ಫೆಬ್ರವರಿ 6ರವರೆಗೆ ಇಲ್ಲಿನ ಕೆಲವೇ ಪ್ರದೇಶಗಳಲ್ಲಿ ಮಾತ್ರ ಗುಡುಗು, ಮಿಂಚು ಮತ್ತು ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯೆತಿದೆ ಎಂದು ತಿಳಿಸಿದೆ.
ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಹರಿಯಾಣ, ಚಂಡೀಗಢ, ಪಶ್ಚಿಮ ಉತ್ತರ ಪ್ರದೇಶ ಮತ್ತು ರಾಜಸ್ಥಾನದಾದ್ಯಂತ ಕೆಲವು ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.
ಫೆಬ್ರವರಿ 4 ಹಾಗೂ 5ರಂದು ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಬಿರುಗಾಳಿ ಸಹಿತ ವ್ಯಾಪಕವಾದ ಮಳೆಯಾಗುವ ಸಾಧ್ಯೆತೆಯಿದೆ ಎನ್ನುವ ಮುನ್ಸೂಚನೆ ನೀಡಿದೆ.
ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿ, ರಾಜಸ್ಥಾನ, ಮತ್ತು ಪಶ್ಚಿಮ ಉತ್ತರ ಪ್ರದೇಶಗಳಲ್ಲಿ ಫೆಬ್ರವರಿ 4ರಂದು ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಬಿರುಗಾಳಿ ಮತ್ತು ಆಲಿಕಲ್ಲು ಸಹಿತ ಲಘುವಾಗಿ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ನೀಡಿದೆ. ಇನ್ನು ಫೆಬ್ರವರಿ 4-5 ರಂದು ಉತ್ತರ ಪ್ರದೇಶದಲ್ಲಿ ಇದೇ ರೀತಿಯ ಹವಾಮಾನವನ್ನು ನಿರೀಕ್ಷಿಸಲಾಗಿದೆ.
ಫೆಬ್ರವರಿ 4ರಂದು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಪ್ರಬಲವಾದ ಮೇಲ್ಮೈ ಮಾರುತಗಳು 30-40 ಕಿಲೋ ಮೀಟರ್ ವೇಗವನ್ನು ತಲುಪುವ ಸಾಧ್ಯತೆಯಿದೆ.
ಅರುಣಾಚಲ ಪ್ರದೇಶದಲ್ಲಿ ಫೆಬ್ರವರಿ 6ರವರೆಗೆ ಅಲ್ಲಲ್ಲಿ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಅಲ್ಲದೆ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಿಜೋರಾಂ, ಮಣಿಪುರ ಮತ್ತು ತ್ರಿಪುರಾ ಇದೇ ಅವಧಿಯಲ್ಲಿ ಚದುರಿದ ಮಳೆಯನ್ನು ಅನುಭವಿಸಬಹುದು ಎನ್ನುವ ಮುನ್ಸೂಚನೆಯನ್ನು ನೀಡಿದೆ.












Click it and Unblock the Notifications